`ವಜ್ರಕಾಯ’ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಲಗ್ಗೆಯಿಟ್ಟ ಬೆಡಗಿ ನಭಾ ನಟೇಶ್ ಈಗ ಟಾಲಿವುಡ್ ಅಂಗಳದಲ್ಲಿ ಮಿರ ಮಿರ ಅಂತಾ ಮಿಂಚ್ತಿದ್ದಾರೆ. ಈ ಬೆನ್ನಲ್ಲೇ ನಭಾ ಕುಟುಂಬದ ಯುವ ಪ್ರತಿಭೆ ನಭಾ ಸಹೋದರ ಸ್ಯಾಂಡಲ್ವುಡ್ಗೆ ಪಾದಾರ್ಪಣೆ ಮಾಡಲು ಸಜ್ಜಾಗಿದ್ದಾರೆ.
ಚಿತ್ರರಂಗದಲ್ಲಿ ಸ್ಟಾರ್ ನಟಿಯಾಗಿ ಮಿಂಚ್ತಿರುವ ನಭಾ ನಟೇಶ್ ಅವರ ಸಹೋದರ ನಹುಷ್ ಚಕ್ರವರ್ತಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಗಣೇಶ್ ಪರಶುರಾಮ್ ಅವರ ಮುಂದಿನ ಚಿತ್ರದಲ್ಲಿ ನಹುಷ್ ಚಕ್ರವರ್ತಿ ಕಾಣಿಸಿಕೊಳ್ಳಲಿದ್ದಾರೆ. ಭಿನ್ನ ಕಥೆಯ ಮೂಲಕ ಕನ್ನಡ ಚಿತ್ರರಂಗದಲ್ಲಿ ನೆಲೆ ಗಿಟ್ಟಿಸಿಕೊಳ್ಳಲು ಸಜ್ಜಾಗಿದ್ದಾರೆ. ಇದನ್ನೂ ಓದಿ:ಪೊನ್ನಿಯನ್ ಸೆಲ್ವನ್ ವಿವಾದ : ಮಣಿರತ್ನಂ ಮತ್ತು ವಿಕ್ರಮ್ ಗೆ ನೋಟಿಸ್
- Advertisement 2
- Advertisement 3
ಸಿನಿಮಾ ರಂಗಕ್ಕೆ ಎಂಟ್ರಿ ಕೊಡುವುದಕ್ಕಾಗಿಯೇ ತೆರೆಮರೆಯಲ್ಲಿ ಭರ್ಜರಿ ವರ್ಕೌಟ್ ಮಾಡಿ, ಪಾತ್ರಕ್ಕಾಗಿ ಸಕಲ ತಯಾರಿ ಮಾಡಿಕೊಂಡೆ ಕನ್ನಡ ಚಿತ್ರರಂಗದಲ್ಲಿ ಅದೃಷ್ಟ ಪರೀಕ್ಷೆಗೆ ನಭಾ ಸಹೋದರ ನಹುಷ್ ರೆಡಿಯಾಗಿದ್ದಾರೆ.