ಮಂಡ್ಯದಲ್ಲಿ ನಾಡ ಬಾಂಬ್ ಸ್ಫೋಟ – ವಿದ್ಯಾರ್ಥಿಯ ಅಂಗೈ ಛಿದ್ರ

Public TV
1 Min Read
Nada Bomb

ಮಂಡ್ಯ: ನಾಡ ಬಾಂಬ್ ಸ್ಫೋಟದಿಂದಾಗಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಓರ್ವನ ಅಂಗೈ ಛಿದ್ರವಾಗಿರುವ ಘಟನೆ ಜಿಲ್ಲೆಯ ನಾಗಮಂಗಲ (Nagamangala) ತಾಲೂಕಿನ ಕಂಬದಹಳ್ಳಿಯ ಆಂಜನೇಯಬೆಟ್ಟದಲ್ಲಿ ಘಟನೆ ನಡೆದಿದೆ.ಇದನ್ನೂ ಓದಿ: Champions Trophy; ಟೀಂ ಇಂಡಿಯಾ ಗೆಲುವಿಗಾಗಿ ಮಹಾ ಕುಂಭದಲ್ಲಿ ವಿಶೇಷ ಪೂಜೆ

ವಿದ್ಯಾರ್ಥಿಗಳನ್ನು ಹರಿಯಂತ್ ಪಾಟೀಲ್ ಹಾಗೂ ಪಾರ್ಥ ಎಂದು ತಿಳಿಯಲಾಗಿದ್ದು, ಜೈನ ಬಸದಿ ಶಾಲೆಯಲ್ಲಿ ವ್ಯಾಸಾಂಗ ಮಾಡುತ್ತಿದ್ದರು. ಆಂಜನೇಯ ಬೆಟ್ಟದ ದೇವಸ್ಥಾನದ ಸುತ್ತ ಸ್ವಚ್ಛಕಾರ್ಯಕ್ಕಾಗಿ ವಿದ್ಯಾರ್ಥಿಗಳು ತೆರಳಿದ್ದರು. ಈ ವೇಳೆ ವಿದ್ಯಾರ್ಥಿಗಳು ಕಸದ ರಾಶಿಗೆ ಕೈ ಹಾಕಿದ್ದು, ಬಾಂಬ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಓರ್ವನ ಅಂಗೈ ಛಿದ್ರವಾಗಿದ್ದು, ಇನ್ನೋರ್ವನ ಮುಖದ ಭಾಗಕ್ಕೆ ಗಾಯವಾಗಿದೆ.

ಕಾಡು ಹಂದಿ ಬೇಟೆಗಾಗಿ ನಾಡ ಬಾಂಬ್ ಇಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಕಿಡಿಗೇಡಿಗಳ ಕೆಲಸದಿಂದ ಅಮಾಯಕ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಸದ್ಯ ಗಾಯಗೊಂಡ ವಿದ್ಯಾರ್ಥಿಗಳಿನ್ನು ಬೆಳ್ಳೂರಿನ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಂಡಿಗನವಿಲೆ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಇದನ್ನೂ ಓದಿ: ಪ್ರೀತಿ ನಿರಾಕರಿಸಿದ್ದಕ್ಕಾಗಿ ಯುವತಿಯ ಕಾರು, ಬೈಕ್‌ಗಳಿಗೆ ಬೆಂಕಿ ಹಚ್ಚಿದ ಪಾಗಲ್ ಪ್ರೇಮಿ

Share This Article