ಚಿಕ್ಕಮಗಳೂರು: ಕೊಪ್ಪ ತಾಲೂಕಿನ ಜಯಪುರದಲ್ಲಿ ಕಳೆದ ಒಂದು ವಾರದಿಂದ ಸುರಿದ ಮಳೆಗೆ ವರ್ಷದ ಹಿಂದಷ್ಟೇ 5 ಲಕ್ಷ ರೂ. ವೆಚ್ಚದಲ್ಲಿ ದುರಸ್ತಿ ಮಾಡಿದ್ದ ನಾಡಕಚೇರಿ ಕಟ್ಟಡ ಕುಸಿದು ಬಿದ್ದಿದೆ.
ಕಚೇರಿಯಲ್ಲಿ ಅಧಿಕಾರಿಗಳು, ಜನಸಾಮಾನ್ಯರು ಇದ್ದಾಗಲೇ ಕಟ್ಟಡ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾರಿಗೂ ಹಾನಿಯಾಗಿಲ್ಲ. ಕಟ್ಟಡ ಇದ್ದಕ್ಕಿದ್ದಂತೆ ಕುಸಿದಿದ್ದರಿಂದ ಕಚೇರಿಯಲ್ಲಿದ್ದ ದಾಖಲೆಗಳು ನಾಶವಾಗಿವೆ. ಇದನ್ನೂ ಓದಿ: ಭಾರತ-ಪಾಕ್ ನಡುವೆ ಯುದ್ಧ ಛಾಯೆ – ಮೇ 7ರಂದು ದೇಶಾದ್ಯಂತ ಮಾಕ್ ಡ್ರಿಲ್
ಮಾರು 50 ವರ್ಷ ಹಿಂದಿನ ಹಳೇಯ ಪಾಳುಬಿದ್ದ ಶಾಲೆಯನ್ನು ನಾಡಕಚೇರಿಯನ್ನಾಗಿ ಮಾಡಿದ್ದರು. ಕಳೆದ 1 ವರ್ಷದ ಹಿಂದಷ್ಟೆ 5 ಲಕ್ಷ ರೂ. ವೆಚ್ಚದಲ್ಲಿ ದುರಸ್ತಿಯನ್ನೂ ಮಾಡಲಾಗಿತ್ತು. ಕಳೆದೊಂದು ವಾರದಿಂದ ಸುರಿದ ಮಳೆಯಿಂದ ಕಚೇರಿ ತೇವಗೊಂಡು ಈ ಅನಾಹುತ ಸಂಭವಿಸಿದೆ. ಇದನ್ನೂ ಓದಿ: ಕರ್ನಾಟಕದ ನವ ಟಿಪ್ಪು ಸುಲ್ತಾನ್ ಸಿದ್ದರಾಮಯ್ಯ: ಶೋಭಾ ಕರಂದ್ಲಾಜೆ ಕಿಡಿ