ದೇವೇಗೌಡರಿಗೆ ಆಹ್ವಾನ ನೀಡದ್ದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ : ಬಿಜೆಪಿ ವಿರುದ್ಧ ಜೆಡಿಎಸ್‌ ಆಕ್ರೋಶ

Public TV
2 Min Read
narendra modi kempegowda statue

ಬೆಂಗಳೂರು: ಬಿಜೆಪಿ, ನರೇಂದ್ರ ಮೋದಿ(Narendra Modi) ಒಕ್ಕಲಿಗರ ಕಾರ್ಡ್ ಪ್ಲೇಗೆ ಜೆಡಿಎಸ್(JDS) ಈಗ ದೇವೇಗೌಡರ(Devegowda) ಎಮೋಷನಲ್ ಕಾರ್ಡ್ ಪ್ಲೇ ಮಾಡಿದೆ.

ಕೆಂಪೇಗೌಡರ ಪ್ರತಿಮೆ(Kempegowda Statue) ಅನಾವರಣಕ್ಕೆ ದೇವೇಗೌಡರ ಆಹ್ವಾನ ಮಾಡಿಲ್ಲ ಎಂಬುದನ್ನು ಮುಂದಿಟ್ಟುಕೊಂಡು ಹೋರಾಟಕ್ಕೆ ನಿರ್ಧಾರ ಮಾಡಿದೆ. ಪ್ರತಿಮೆ ಶಂಕು ಸ್ಥಾಪನೆಗೆ ಕರೆದು ಪ್ರತಿಮೆ ಅನಾವರಣಕ್ಕೆ ಆಹ್ವಾನಿಸದ್ದಕ್ಕೆ ಬಿಜೆಪಿ ವಿರುದ್ಧ ಸರಣಿ ಟ್ವೀಟ್‌ ಮಾಡಿ ಆಕ್ರೋಶ ಹೊರಹಾಕಿದೆ. ಇದನ್ನೂ ಓದಿ: 2014ಕ್ಕೂ ಮೊದಲು 70, ಈಗ 140 ವಿಮಾನ ನಿಲ್ದಾಣ: ಬೆಂಗಳೂರನ್ನು ಹಾಡಿ ಹೊಗಳಿದ ಮೋದಿ

ಟ್ವೀಟ್‌ನಲ್ಲಿ ಏನಿದೆ?
ನಾಡಪ್ರಭು ಕೆಂಪೇಗೌಡರ ನಂತರ ಬೆಂಗಳೂರು ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ, ಕನ್ನಡ ನೆಲದಿಂದ ಪ್ರಧಾನಿ ಆಗಿದ್ದ ಏಕೈಕ ಕನ್ನಡಿಗರಾದ ದೇವೇಗೌಡ ಅವರನ್ನು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ಆಹ್ವಾನ ಮಾಡದಿರುವುದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ. ಇದನ್ನೂ ಓದಿ: ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಲೋಕಾರ್ಪಣೆ

narendra modi kempegowda bjp okkaliga

ನಾಡಪ್ರಭುಗಳ ಪ್ರತಿಮೆ ಸ್ಥಾಪನೆಯ ಕಾಮಗಾರಿಗೆ ಅಡಿಗಲ್ಲು ಹಾಕುವ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿಗಳನ್ನು ಆಹ್ವಾನಿಸಿದ ಬಿಜೆಪಿ ಸರ್ಕಾರ ಅದೇ ಪ್ರಧಾನಿಗಳಿಂದ ಪ್ರತಿಮೆ ಲೋಕಾರ್ಪಣೆ ಮಾಡಿಸುವ ಸಮಾರಂಭಕ್ಕೆ ಅವರನ್ನು ಆಹ್ವಾನ ಮಾಡಲಿಲ್ಲ ಯಾಕೆ?

ಯಾವುದೋ ಸ್ಥಳೀಯ ಮಟ್ಟದ ಕಾರ್ಯಕ್ರಮ ಆಗಿದ್ದಿದ್ದರೆ ಯಾರೂ ಪ್ರಶ್ನೆ ಮಾಡುತ್ತಿರಲಿಲ್ಲ. ಆದರೆ, ನಾಡಪ್ರಭುಗಳ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಪ್ರಧಾನಿಗಳೇ ಬರುತ್ತಾರೆ ಎಂದರೆ ನಮ್ಮ ಹೆಮ್ಮೆಯ ಮಾಜಿ ಪ್ರಧಾನಿಗಳನ್ನು ಅಧಿಕೃತವಾಗಿ ಕರೆಯಲೇಬೇಕಿತ್ತು. ಅವರ ಬಗ್ಗೆ ಅನಾದರ ತೋರಿದ್ದು ಕನ್ನಡಿಗರಿಗೆ ಅಪಾರ ನೋವುಂಟು ಮಾಡಿದೆ. ದನ್ನೂ ಓದಿ: ಮೋದಿಯಿಂದ ಏಷ್ಯಾದ ಮೊದಲ ಗಾರ್ಡನ್‌ ಟರ್ಮಿನಲ್‌ ಉದ್ಘಾಟನೆ –ವಿಶೇಷತೆ ಏನು?

Narendra Modi Kempegowda Statue 2

ರಾಜ್ಯ ಬಿಜೆಪಿ ಸರ್ಕಾರ ಬಿಜೆಪಿ ನಾಯಕರು ರಾಜಕೀಯ ಕಾರಣಕ್ಕಾಗಿ ಮಾಜಿ ಪ್ರಧಾನಿಗಳನ್ನು ಕಡೆಗಣಿಸಿದ್ದಾರೆ ಎನ್ನುವುದು ಎಲ್ಲರ ಭಾವನೆ. ಇದನ್ನು ಬಿಜೆಪಿ ಪಕ್ಷದ ಕಾರ್ಯಕ್ರಮದಂತೆ ನಡೆಸಿದ್ದು ಮಾಜಿ ಪ್ರಧಾನಿಗಳಿಗೆ ಮಾತ್ರವಲ್ಲ, ಸಮಸ್ತ ಕನ್ನಡಿಗರು ಹಾಗೂ ಸ್ವತಃ ನಾಡಪ್ರಭುಗಳಿಗೇ ಮಾಡಿದ ಅಪಮಾನ. ಇದು ಅಕ್ಷಮ್ಯದ ಪರಮಾವಧಿ

ಸರ್ವ ಜನರನ್ನು ಸಮಾನವಾಗಿ ಕಂಡು ಆದರ್ಶ ಪ್ರಭುವಾಗಿದ್ದ ನಾಡಪ್ರಭು ಕೆಂಪೇಗೌಡರನ್ನು ರಾಜಕೀಯಕ್ಕೆ ಎಳೆಯುವ ಕೆಲಸವನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಮಾಡಿರುವುದು ಸ್ಪಷ್ಟ. ಇದು ಅತ್ಯಂತ ದುರದೃಷ್ಟಕರ. ರಾಜ್ಯ ವಿಧಾನಸಭೆ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡೇ ಪ್ರತಿಮೆ ಅನಾವರಣ ಮಾಡಲಾಗಿದೆ ಎನ್ನುವುದು ಸತ್ಯ.

narendra modi kempegowda statue nirmalananda shree 1

ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯ ಸರಕಾರ ಹಾಗೂ ಬಿಜೆಪಿ ನಾಯಕರು ದಾರಿ ತಪ್ಪಿಸಿದ್ದಾರೆ ಎನ್ನುವುದರಲ್ಲಿ ಸಂಶಯ ಇಲ್ಲ. ಮಾನ್ಯ ದೇವೇಗೌಡರ ಬಗ್ಗೆ ಅತೀವ ಗೌರವ ಇಟ್ಟುಕೊಂಡಿರುವ ಪ್ರಧಾನಿಗಳ ಬಗ್ಗೆಯೇ ಕನ್ನಡಿಗರಲ್ಲಿ ತಪ್ಪು ಅಭಿಪ್ರಾಯ ಮೂಡುವಂತೆ ರಾಜ್ಯ ಬಿಜೆಪಿ ಸರಕಾರ ಮತ್ತು ಬಿಜೆಪಿ ನಾಯಕರು ವರ್ತಿಸಿದ್ದಾರೆ.

ಕೆಂಪೇಗೌಡರು ಬಿಜೆಪಿ ಕರ್ನಾಟಕದ ಆಸ್ತಿಯಲ್ಲ, ಕೆಲ ಸಚಿವರ ಜಹಗೀರಲ್ಲ, ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುವ ವಿಷಯವೂ ಅಲ್ಲ. ನಾಡಪ್ರಭುಗಳು ಸಮಸ್ತ ಕನ್ನಡಿಗರ ಹೆಮ್ಮೆ. ನಮ್ಮೆಲ್ಲರ ಅರಾಧ್ಯದೈವ. ಇನ್ನು, ಬೆಂಗಳೂರು ನಗರ ನಮ್ಮೆಲ್ಲರದ್ದು. ಸಮಸ್ತ ಕನ್ನಡಿಗರ ಜೀವನಾಡಿ. ಈ ಸೂಕ್ಷ್ಮವನ್ನು ರಾಜ್ಯ ಬಿಜೆಪಿ ಸರಕಾರ ಮರೆತು ಕನ್ನಡಿಗರನ್ನು ಅಪಮಾನಿಸಿದೆ.

 

Share This Article
Leave a Comment

Leave a Reply

Your email address will not be published. Required fields are marked *