ಲಕ್ಕಿ ನಟಿ ರಶ್ಮಿಕಾ ಮಂದಣ್ಣಗೆ ಸಾಲು ಸಾಲು ಸಿನಿಮಾ ಅವಕಾಶಗಳು ಅರಸಿ ಬರುತ್ತಿದೆ. ಹೀಗಿರುವಾಗ ಸಮಂತಾ ಮಾಜಿ ಪತಿ ನಾಗಚೈತನ್ಯ ಜೊತೆ ರಶ್ಮಿಕಾ ರೊಮ್ಯಾನ್ಸ್ ಮಾಡಲು ರೆಡಿಯಾಗಿದ್ದಾರೆ.
`ಸೀತಾ ರಾಮಂ’ ಚಿತ್ರದ ಸೂಪರ್ ಸಕ್ಸಸ್ ನಂತರ ಇದೀಗ ರಶ್ಮಿಕಾ ಮಂದಣ್ಣಗೆ ಭರ್ಜರಿ ಆಫರ್ ಸಿಕ್ಕಿದೆ. ಟಾಲಿವುಡ್ ನಟ ನಾಗಚೈತನ್ಯಗೆ ನಾಯಕಿಯಾಗಿ ರಶ್ಮಿಕಾ ಮಂದಣ್ಣ ಕಾಣಿಸಿಕೊಳ್ಳಲಿದ್ದಾರೆ. ಸಮಂತಾ ಮಾಜಿ ಪತಿ ಜತೆ ರಶ್ಮಿಕಾ ರೊಮ್ಯಾನ್ಸ್ ಮಾಡಲು ರೆಡಿಯಾಗಿದ್ದಾರೆ. ಇದನ್ನೂ ಓದಿ: ನಾನು ಎಷ್ಟೋ ಜನರ ಜೊತೆ ಫ್ಲರ್ಟ್ ಮಾಡಿದ್ದೇನೆ ಲೆಕ್ಕವಿಲ್ಲ: ಅರ್ಜುನ್ ರಮೇಶ್

ಇನ್ನು ಇದೇ ಮೊದಲ ಬಾರಿಗೆ ತೆರೆಯ ಮೇಲೆ ರೊಮ್ಯಾನ್ಸ್ ಮಾಡಲಿರುವ ಜೋಡಿ ನಾಗಚೈತನ್ಯ ಮತ್ತು ರಶ್ಮಿಕಾ ಸಿನಿಮಾ ನೋಡಲು ಫ್ಯಾನ್ಸ್ ಕೂಡ ಥ್ರಿಲ್ ಆಗಿದ್ದಾರೆ. ಸದ್ಯದಲ್ಲೇ ಚಿತ್ರದ ಕುರಿತು ಅಧಿಕೃತ ಮಾಹಿತಿ ಹೊರಬೀಳಲಿದೆ.



