ಕೊರೋನಾ ವೈರಸ್ ಮಾಡಿದ ಆವಾಂತರ ನೂರಾರು. ಸಾವಿರಾರು ಜನ ಪ್ರಾಣ ಕಳೆದುಕೊಂಡರೆ, ಸಾಕಷ್ಟು ಜನರ ಬದುಕನ್ನೇ ಈ ಕೋವಿಡ್ ಕಸಿದುಕೊಂಡಿತು. ಕೊರೋನಾ ವೈರಸ್ ಕಾಣಿಸಿಕೊಳ್ಳುತ್ತಿದ್ದಂತೆಯೇ ಇಡೀ ಜಗತ್ತೇ ತಲ್ಲಣಗೊಂಡಿತು. ಒಂದು ರೀತಿಯಲ್ಲೇ ಜಗತ್ತಿಗೇ ಬೀಗ ಹಾಕಿದ ರೀತಿಯಲ್ಲಿ ಲಾಕ್ ಡೌನ್ ಘೋಷಣೆಯಾಯಿತು. ಈ ಸಂದರ್ಭದಲ್ಲಿ ಹುಟ್ಟಿದ ಕಥೆಯನ್ನೇ ಕನ್ನಡದಲ್ಲಿ ಸಿನಿಮಾ ಮಾಡಿದ್ದಾರೆ. ಈ ಚಿತ್ರಕ್ಕೆ ‘ಮೇಡ್ ಇನ್ ಚೈನಾ’ ಎಂದು ಹೆಸರಿಟ್ಟಿದ್ದಾರೆ. ಇದನ್ನೂ ಓದಿ: ರಣವೀರ್ ಹೊಸ ಸ್ಟೈಲ್‍ಗೆ ಆಲಿಯಾ ಬೌಲ್ಡ್
ಕನ್ನಡದ ಮೊದಲ ವರ್ಚುವಲ್ ಸಿನಿಮಾ ಇದಾಗಿದ್ದು, ಲಾಕ್ ಡೌನ್ ಸಂದರ್ಭದಲ್ಲಿ ಪತಿಯು ವಿದೇಶದಲ್ಲಿ ಲಾಕ್ ಆಗುತ್ತಾನೆ. ಹೆಂಡತಿ ಭಾರತದಲ್ಲಿರುತ್ತಾಳೆ. ಇವರ ನಡುವೆ ನಡೆಯುವ ಕಥೆಯೇ ‘ಮೇಡ್ ಇನ್ ಚೈನಾ’. ಇಕ್ಕಟ್ ಸಿನಿಮಾದ ಮೂಲಕ ಪ್ರೇಕ್ಷಕರಿಗೆ ಸಖತ್ ಮನರಂಜನೆ ನೀಡಿರುವ ನಾಗಭೂಷಣ್ ಈ ಸಿನಿಮಾದ ನಾಯಕ. ಇದನ್ನೂ ಓದಿ : ಬೆಂಗಳೂರು ಅಂತರಾಷ್ಟ್ರೀಯ ಫಿಲ್ಮಂ ಫೆಸ್ಟಿವಲ್‍ನಲ್ಲಿ ಗಮನ ಸೆಳೆಯಲಿದೆ ಸೈಕಲಾಜಿಕಲ್ ಥ್ರಿಲ್ಲರ್ ‘ರುಗ್ನ’
“ಲಾಕ್ ಡೌನ್ ಟೈಮ್ ನಲ್ಲಿ ವಿದೇಶದಲ್ಲಿ ಲಾಕ್ ಆಗುವ ಪತಿ. ಸ್ವದೇಶಿ ನೆಲದಲ್ಲಿ ಪತ್ನಿ. ಈ ಗಂಡ ಹೆಂಡ್ತಿ ನಡುವಿನ ಪ್ರೀತಿ-ಗೀತಿ-ಇತ್ಯಾದಿ ನಡುವೆ ಒಂದಷ್ಟು ಜಗಳ ಓವರ್ ಆಲ್ ಆಗಿ ಮೇಡ್ ಇನ್ ಚೈನಾ ಫ್ಯಾಮಿಲಿ ಡ್ರಾಮಾ” ಎಂದಿದೆ ಚಿತ್ರತಂಡ. ಇದನ್ನೂ ಓದಿ :ಎಂತವರಿಗೂ ಮರುಕ ಹುಟ್ಟಿಸುತ್ತೆ ಕನ್ನೇರಿ ಚಿತ್ರದ ‘ಕಾಣದ ಊರಿಗೆ ಕೂಲಿಗೆ ಹೊರಟವಳೆ’ ಹಾಡು
ಅಯೋಗ್ಯ, ರತ್ನಮಂಜರಿ ಸಿನಿಮಾಗಳಿಗೆ ಸಿನಿಮಾಟೋಗ್ರಾಫರ್ ಆಗಿದ್ದ ಪ್ರೀತಮ್ ತೆಗ್ಗಿನಮನೆ ಚಿತ್ರಕ್ಕೆ ಆಕ್ಷನ್ ಕಟ್ ಹೇಳುವುದ ಜೊತೆಗೆ ಗ್ರಾಫಿಕ್, ಎಡಿಟಿಂಗ್ ಹಾಗೂ ಸಿನಿಮಾಟೋಗ್ರಾಫಿ ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ. ನಾಗಭೂಷಣ್ ಗೆ ಜೋಡಿಯಾಗಿ ಪ್ರಿಯಾಂಕಾ ತಿಮ್ಮೇಶ್ ನಟಿಸಿದ್ದಾರೆ. ಗೌರವ್ ಶೆಟ್ಟಿ, ಅಶ್ವಿನಿ ರಾವ್ ಪಲ್ಲಕ್ಕಿ, ಅರುಣ ಬಾಲರಾಜ್, ರವಿ ಭಟ್ ಸೇರಿದಂತೆ ಹಲವು ಕಲಾವಿದರು ತಾರಾ ಬಳಗದಲ್ಲಿ ಇದ್ದಾರೆ.