ಮಂಡ್ಯ: ನಾಗಮಂಗಲ ಕೋಮುಗಲಭೆ ಪ್ರಕರಣಕ್ಕೆ (Nagamangala Communal Violence) ಸಂಬಂಧಿಸಿದಂತೆ ಬಂಧನಕ್ಕೆ ಒಳಗಾದ ಎಲ್ಲಾ ಆರೋಪಿಗಳಿಗೆ ಮಂಡ್ಯದ (Mandya) ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು (Bail) ಮಂಜೂರು ಮಾಡಿದೆ.
ನ್ಯಾಯಾಂಗ ಬಂಧನದಲ್ಲಿದ್ದ (Judicial Custody) ಎರಡೂ ಕೋಮಿನ ಒಟ್ಟು 55 ಆರೋಪಿಗಳಿಗೆ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಇದನ್ನೂ ಓದಿ: ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣ; 1 ಗಂಟೆ ಲೋಕಾಯುಕ್ತ ವಿಚಾರಣೆ ಎದುರಿಸಿದ ಕೇಂದ್ರ ಸಚಿವ ಹೆಚ್‌ಡಿಕೆ
ತಲಾ ಒಂದು ಲಕ್ಷ ರೂ. ಮೌಲ್ಯದ ಬಾಂಡ್, ಪ್ರತೀ ಭಾನುವಾರ ಠಾಣೆಗೆ ತೆರಳಿ ಸಹಿ ಹಾಕಬೇಕು. ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು, ಅಪರಾಧಿ ಕೃತ್ಯದಲ್ಲಿ ಭಾಗಿಯಾಗದಂತೆ ಕೋರ್ಟ್ ಆರೋಪಿಗಳಿಗೆ ಷರತ್ತು ವಿಧಿಸಿದೆ. ಇದನ್ನೂ ಓದಿ: ವಿಶ್ವಮಟ್ಟದಲ್ಲಿ ಮುಜುಗರ – ಮುಳುಗಿತು Made In China ಪರಮಾಣು ಚಾಲಿತ ಜಲಾಂತರ್ಗಾಮಿ ನೌಕೆ
ಶನಿವಾರ ಮತ್ತು ಭಾನುವಾರ ರಜೆ ಇರುವ ಕಾರಣ ಸೋಮವಾರ ಆರೋಪಿಗಳು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ. ಸೆ.11ರಂದು ಆರೋಪಿಗಳ ಬಂಧನವಾಗಿತ್ತು. ಸೆ.12 ರಿಂದ ಆರೋಪಿಗಳು ಮಂಡ್ಯ ಕಾರಾಗೃಹದಲ್ಲಿದ್ದಾರೆ.