Nagamangala Violence | 52 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

Public TV
1 Min Read
Nagamangala Voilence

ಮಂಡ್ಯ: ಗಣೇಶ ವಿಸರ್ಜನೆ ವೇಳೆ ನಾಗಮಂಗಲ ಗಲಭೆ ಪ್ರಕರಣದ ಹಿನ್ನೆಲೆ ಬಂಧಿತ 52 ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ (Judicial Custody) ವಿಧಿಸಿ ನ್ಯಾಯಾಲಯ ಆದೇಶಿಸಿದೆ.

ಸೆ.11ರಂದು ನಾಗಮಂಗಲದ ಬದರಿಕೊಪ್ಪಲಿನಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿ ಬುಧವಾರ ಅದ್ದೂರಿ ಮೆರವಣಿಗೆ ಮೂಲಕ ವಿಸರ್ಜನೆ ಮಾಡಲಾಗ್ತಿತ್ತು. ಈ ವೇಳೆ ಕಿಡಿಗೇಡಿಗಳು ಏಕಾಏಕಿ ಕಲ್ಲು ತೂರಾಟ ನಡೆಸಿದ್ದರು. ಎರಡು ಗುಂಪುಗಳ ನಡುವಿನ ಘರ್ಷಣೆಯಿಂದ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ತಡರಾತ್ರಿ ಪೊಲೀಸರು ಕಾರ್ಯಾಚರಣೆ ನಡೆಸಿ ಪರಿಸ್ಥಿತಿ ಹತೋಟಿಗೆ ತಂದರು. ಪ್ರಕರಣ ಸಂಬಂಧ ಇದುವರೆಗೆ 53 ಜನರನ್ನು ಬಂಧಿಸಲಾಗಿತ್ತು.ಇದನ್ನೂ ಓದಿ: Nagamangala| ಗಣೇಶ ವಿಸರ್ಜನೆ ವೇಳೆ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟ

ಬಂಧಿಸಲಾಗಿದ್ದ 52 ಆರೋಪಿಗಳನ್ನು ಹಿರಿಯ ಸಿವಿಲ್ ನ್ಯಾಯಾಲಯಕ್ಕೆ ಕರೆತರಲಾಗಿತ್ತು. ಬಳಿಕ ನ್ಯಾಯಾಧೀಶರ ಮುಂದೆ ಬಂಧಿತರನ್ನು ಪೊಲೀಸರು ಹಾಜರುಪಡಿಸಿದ್ದರು. ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಹಿರಿಯ ಸಿವಿಲ್ ನ್ಯಾಯಾಧೀಶರು ಆದೇಶಿಸಿದ್ದಾರೆ.

52 ಆರೋಪಿಗಳ ಪೈಕಿ, 23 ಹಿಂದೂ ಹಾಗೂ 39 ಮುಸ್ಲಿಮರಿದ್ದಾರೆ. ಸದ್ಯ ಆರೋಪಿಗಳನ್ನು ನಾಗಮಂಗಲದಿಂದ ಮಂಡ್ಯ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಆರೋಪಿಗಳಿಗೆ ಸೆ.25ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.ಇದನ್ನೂ ಓದಿ: ತಪ್ಪಿತಸ್ಥರ ವಿರುದ್ಧ ಕ್ರಮ, ಬಂಧನ ಆಗುತ್ತೆ: ಗಣೇಶ ವಿಸರ್ಜನೆ ಗಲಾಟೆ ಬಗ್ಗೆ ಚಲುವರಾಯಸ್ವಾಮಿ ಪ್ರತಿಕ್ರಿಯೆ

ಗಲಭೆ ಪ್ರಕರಣದಲ್ಲಿ ಪುತ್ರ ಜೈಲು ಪಾಲಾಗಿದ್ದರಿಂದ ಆತನ ತಾಯಿ ನಾಗಮಂಗಲ ನ್ಯಾಯಾಲಯದ ಎದುರು ಕುಸಿದು ಬಿದ್ದಿದ್ದಾರೆ. ಮತ್ತೊಂದೆಡೆ ಜೈಲುಸೇರಿದವರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು,ಆ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಸಂದರ್ಭದಲ್ಲಿ ಬಂಧಿತ ಆರೋಪಿಗಳ ಪೋಷಕರು ನ್ಯಾಯಾಲಯ ಮುಂದೆ ಜಮಾಯಿಸಿದ್ದರು.

Share This Article