– ನಷ್ಟದ ವರದಿ ಸಿದ್ಧಪಡಿಸಿದ ಜಿಲ್ಲಾಡಳಿತ
ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲದ ಗಲಭೆಯಲ್ಲಿ (Nagamangala Violence) ಹಲವು ಅಂಗಡಿಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಇದರಿಂದ ಹಲವರ ಬದುಕು ಬೀದಿಗೆ ಬಂದಿದೆ. ಸದ್ಯ ಇವರಿಗೆ ಸರ್ಕಾರ ಪರಿಹಾರ ನೀಡಲು ಮುಂದಾಗಿದ್ದು, ಮಂಡ್ಯ ಜಿಲ್ಲಾಡಳಿತ ಗಲಭೆಯಿಂದ ನಷ್ಟವಾಗಿರುವ ಆಸ್ತಿ ಮೌಲ್ಯವನ್ಮು ಅಂದಾಜಿಸಿದೆ.
Advertisement
ಮಂಡ್ಯ (Mandya) ಜಿಲ್ಲೆ ನಾಗಮಂಗಲದ ಗಲಭೆಯಲ್ಲಿ ಕಿಡಿಗೇಡಿಳು ಹಚ್ಚಿದ ಬೆಂಕಿಯಿಂದ ಇಡೀ ಪಟ್ಟಣದಲ್ಲಿ ಅಶಾಂತಿ ಉಂಟಾದರೆ, ಇದರಿಂದ ಹಲವು ಜನರ ಬದುಕು ಬೀದಿಗೆ ಬಂದಿದೆ. ತಮ್ಮ ಬದುಕು ರೂಪಿಸಿಕೊಳ್ಳಲು ಲಕ್ಷಾಂತರ ರೂಪಾಯಿ ಬಂಡವಾಳ ಹೂಡಿಕೆ ಮಾಡಿ ತಮಗಿಷ್ಟದ ವ್ಯಾಪಾರ ಮಾಡಿ ಬದುಕು ಕಟ್ಟಿಕೊಂಡಿದ್ದರು ಇಲ್ಲಿನ ಜನ. ಇದೀಗ ಕೋಮು ದಳ್ಳುರಿಗೆ ಗಲಭೆಕೋರರು ಹಚ್ಚಿದ ಬೆಂಕಿಯಿಂದ ಇಲ್ಲಿನ ಹಲವು ವ್ಯಾಪಾರಿಗಳ ಕನಸು ಬೆಂಕಿಯಲ್ಲಿ ಸುಟ್ಟು ಕರಕಲಾಗಿದೆ. ಇದನ್ನೂ ಓದಿ: Mandya | ನಾಗಮಂಗಲದಲ್ಲಿ ಖಾಕಿ ಹೈ ಅಲರ್ಟ್ – ಈದ್ ಮಿಲಾದ್ ಹಿನ್ನೆಲೆ ಪೊಲೀಸ್ ಸರ್ಪಗಾವಲು
Advertisement
Advertisement
ಇದರಿಂದ ಈ ವ್ಯಾಪರವನ್ನೇ ನಂಬಿಕೊಂಡಿದ್ದ ಜನರ ಬದುಕು ಬೀದಿಗೆ ಬಂದಿದೆ. ಸದ್ಯ ಈ ಜನರಿಗೆ ಕೇಂದ್ರ ಸಚಿವ ಕುಮಾರಸ್ವಾಮಿ ವೈಯಕ್ತಿಕವಾಗಿ ಅವರ ಒಂದಿಷ್ಟು ಪರಿಹಾರ ನೀಡಿದ್ದಾರೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರವೂ (Karnataka Government) ಹಾನಿಗೊಳಗಾದ ಕಟ್ಟದ ಮಾಲೀಕರು ಹಾಗೂ ವ್ಯಾಪಾರಸ್ಥರಿಗೆ ಪರಿಹಾರ ನೀಡಲು ಮುಂದಾಗಿದೆ. ಈ ಸಂಬಂಧ ಮಂಡ್ಯ ಜಿಲ್ಲಾಡಳಿತ ಸಮೀಕ್ಷೆ ಮಾಡಿ ಹಾನಿಯಾದ ಕಟ್ಟಡ ಹಾಗೂ ವಸ್ತುಗಳಿಗೆ ಮೌಲ್ಯವನ್ನು ಅಂದಾಜು ಮಾಡಿ ವರದಿಯೊಂದನ್ನು ಸಿದ್ಧಪಡಿಸಿದೆ.
Advertisement
ಈ ಸಂಬಂಧ ನಾಗಮಂಗಲ ತಹಶೀಲ್ದಾರ್ ನೇತೃತ್ವದಲ್ಲಿ ಪಿಡ್ಲ್ಯೂಡಿ ಸೇರಿದಂತೆ ಇತರೆ ಇಲಾಖೆ ಅಧಿಕಾರಿಗಳನ್ನು ಒಳಗೊಂಡ ಒಂದು ತಂಡ ರಚನೆ ಮಾಡಲಾಗಿತ್ತು. ಈ ತಂಡ ಎಸ್‌ಆರ್ ರೇಟ್ ಪ್ರಕಾರ ಹಾನಿಯ ಅಂದಾಜನ್ನು ಮಾಡಿದ್ದಾರೆ. ಎಸ್‌ಆರ್ ರೇಟ್ ಪ್ರಕಾರ ಗಲಭೆಯಿಂದ ಹಾನಿಗೆ ಒಳಗಾಗಿರುವ ಕಟ್ಟದ ಪ್ರಮಾಣ ಮೌಲ್ಯ 1.47 ಕೋಟಿ ರೂ. ಹಾಗೂ ಬೆಂಕಿಯ ಕೆನ್ನಾಲೆಗೆ ಸುಟ್ಟು ಕರಕಲಾದ ಸರಕಿನ ಮೌಲ್ಯ 1.18 ಕೋಟಿ ರೂ. ಎಂದು ಅಂದಾಜು ಮಾಡಲಾಗಿದೆ. ಈ ವರದಿಯನ್ನು ಸರ್ಕಾರಕ್ಕೆ ನೀಡಿ, ಸೂಕ್ತ ಪರಿಹಾರ ನೀಡವಂತೆ ಮಂಡ್ಯ ಡಿಸಿ ಡಾ.ಕುಮಾರ್ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ನಾಗಮಂಗಲ ಗಲಭೆ; ಕಿಡಿಗೇಡಿಗಳು ಅಂಗಡಿಗೆ ಪೆಟ್ರೋಲ್ ಬಾಂಬ್ ಎಸೆಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗಮಂಗಲ ಗಲಭೆಯಿಂದ ಅಪಾರ ಪ್ರಮಾಣ ಕಟ್ಟಡ ಹಾಗೂ ಸರಕುಗಳು ಹಾನಿಯಾಗಿವೆ. ಸರ್ಕಾರ ಈ ವರದಿಯನ್ನು ಆಧರಿಸಿ ಎಷ್ಟು ಪರಿಹಾರವನ್ನು ಘೋಷಣೆ ಮಾಡಲಿದೆಯೇ ಅನ್ನೋದನ್ನು ಕಾದುನೋಡಬೇಕಿದೆ. ಇದನ್ನೂ ಓದಿ: Nagamangala Violence | ಪಿಎಫ್‌ಐ ಸಂಘಟನೆಯವರು ಮಾತ್ರವಲ್ಲ, ಅಕ್ರಮ ಬಾಂಗ್ಲಾ ವಲಸಿಗರಿದ್ದಾರೆ – ಸುರೇಶ್‌ಗೌಡ