– ಸಮಗ್ರ ಮಾಹಿತಿ ಕಲೆಹಾಕಿದ ನಂತರ ಸರ್ಕಾರಕ್ಕೆ ವರದಿ ಸಲ್ಲಿಕೆ
ಮಂಡ್ಯ: ಮಾಜಿ ಡಿಸಿಎಂ ಅಶ್ವಥ್ ನಾರಾಯಣ್ (Ashwath Narayan), ಭೈರತಿ ಬಸವರಾಜ್, ನಾರಾಯಣಗೌಡ ಹಾಗೂ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಒಳಗೊಂಡ ಬಿಜೆಪಿ ಸತ್ಯಶೋಧನಾ ಸಮಿತಿ ಸೋಮವಾರ (ಇಂದು) ನಾಗಮಂಗಲ ಗಲಭೆ (Nagamangala Violence) ನಡೆದ ಸ್ಥಳಕ್ಕೆ ಭೇಟಿ ನೀಡಲಿದೆ.
ಇತ್ತೀಚೆಗಷ್ಟೇ ಗಣೇಶ ಮೂರ್ತಿ (Ganesh Idol) ಮೆರವಣಿಗೆ ವೇಳೆ ಕಲ್ಲು ತೂರಾಟದಿಂದ ಉಂಟಾಗಿದ್ದ ನಾಗಮಂಗಲ ಗಲಭೆಯ ಬೆಳವಣಿಗೆಗಳ ಬಗ್ಗೆ ಸಮಗ್ರ ಮಾಹಿತಿ ಕಲೆಹಾಕಲು ಬಿಜೆಪಿ ನಿಯೋಗ ಭೇಟಿ ನೀಡಲಿದೆ. ಆ ದಿನ ಏನಾಯ್ತು ಅನ್ನೋ ಬಗ್ಗೆ ಇಂಚಿಂಚೂ ಮಾಹಿತಿ ಕಲೆಹಾಕಲಿದೆ. ಇದರೊಂದಿಗೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದ ಬದ್ರಿಕೊಪ್ಪಲು ಬಡಾವಣೆಗೂ ಸಮಿತಿ ಭೇಟಿ ನೀಡಲಿದೆ. ಗಣೇಶ ಮೂರ್ತಿ ವಿಸರ್ಜನಾ ಮೆರವಣಿಯು ಆರಂಭದಿಂದ ಅಂತ್ಯದ ವರೆಗೆ ಏನೆಲ್ಲಾ ಆಯ್ತು ಅನ್ನೋದರ ಬಗ್ಗೆ ಸತ್ಯಶೋಧನಾ ಸಮಿತಿ ಮಾಹಿತಿ ಕಲೆಹಾಕಲಿದೆ.
ನಂತರ ಗಲಭೆಯಲ್ಲಿ ಹಾನಿಗೊಳಗಾದ ಅಂಗಡಿ ಮಳಿಗೆಗಳ ಪರಿಶೀಲನೆ ನಡೆಸಲಾಗುತ್ತದೆ. ಜೊತೆಗೆ ಸಂತ್ರಸ್ತರ ಆರ್ಥಿಕ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಿ ಸಾಂತ್ವನ ಹೇಳಲಾಗುತ್ತದೆ. ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯಗಳ ಸಂಗ್ರಹ ಮಾಡಲಿರುವ ಸತ್ಯಶೋಧನಾ ತಂಡ, ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಅಮಾಯಕರ ಬಗ್ಗೆಯೂ ವಿಚಾರಿಸಿ, ಮುಂದಿನ ಕಾನೂನು ಹೋರಾಟದ ಬಗ್ಗೆ ಕುಟುಂಬಸ್ಥರೊಂದಿಗೆ ಚರ್ಚಿಸಲಿದೆ. ಇದನ್ನೂ ಓದಿ: ಕಲಬುರಗಿಯಲ್ಲಿ ದಶಕದ ಬಳಿಕ ಸಚಿವ ಸಂಪುಟ ಸಭೆ – ಮಿನಿವಿಧಾನಸೌಧದಲ್ಲಿ ಸರ್ಕಾರದಿಂದ ಭರ್ಜರಿ ಸಿದ್ಧತೆ!
ಸಮಗ್ರವಾಗಿ ಮಾಹಿತಿ ಸಂಗ್ರಹಿಸಿ ವರದಿ ಸಿದ್ಧಪಡಿಸಿದ ನಂತರ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಹೈಕಮಾಂಡ್‌ಗೆ ಸಲ್ಲಿಕೆ ಮಾಡಲಿದೆ. ಬಿಜೆಪಿ ನಾಯಕರ ನೇತೃತ್ವದ ಸಮಿತಿಗೆ ಜೆಡಿಎಸ್ ಮುಖಂಡರೂ ಸಾಥ್ ನೀಡಲಿದ್ದಾರೆ. ಇದನ್ನೂ ಓದಿ: Mandya | ನಾಗಮಂಗಲದಲ್ಲಿ ಖಾಕಿ ಹೈ ಅಲರ್ಟ್ – ಈದ್ ಮಿಲಾದ್ ಹಿನ್ನೆಲೆ ಪೊಲೀಸ್ ಸರ್ಪಗಾವಲು
ಒಂದು ದಿನದ ಹಿಂದೆಯಷ್ಟೇ ನಿಗಿನಿಗಿ ಕೆಂಡವಾಗಿದ್ದ ನಾಗಮಂಗಲ (Nagamangala) ಈಗ ಸಹಜ ಸ್ಥಿತಿಗೆ ಮರಳಿದೆ. ಎರಡೂ ಸಮುದಾಯದ ಮುಖಂಡರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಚಲುವನಾರಾಯಣಸ್ವಾಮಿ (Chaluvarayaswamy) ನೇತೃತ್ವದಲ್ಲಿ ನಡೆದ ಶಾಂತಿಸಭೆ ಯಶಸ್ವಿಯಾಗಿದೆ. ಅಲ್ಲದೇ ಭಾನುವಾರ (ಸೆ.15) ನಿಷೇಧಾಜ್ಞೆ ಮುಕ್ತಾಯವಾಗಿದ್ದು, ನಾಗಮಂಗಲದಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಗೆ ಅವಕಾಶ ನೀಡಲಾಗಿದೆ.