– ಬ್ರೈನ್‌ಸ್ಟ್ರೋಕ್‌ನಿಂದ ಆಸ್ಪತ್ರೆಯಲ್ಲಿ ಕೊನೆಯುಸಿರು
ಮಂಡ್ಯ: ನಾಗಮಂಗಲ ಗಲಭೆ (Nagamangala Violence) ಪ್ರಕರಣದಲ್ಲಿ ಬಂಧನ ಭೀತಿಯಲ್ಲಿ ಗ್ರಾಮ ತೊರೆದಿದ್ದ ಯುವಕ ಸಾವಿಗೀಡಾಗಿರುವ ಘಟನೆ ನಡೆದಿದೆ.
ನಾಗಮಂಗಲದ ಬದ್ರಿಕೊಪ್ಪಲು ಗ್ರಾಮದ ಕಿರಣ್ (23) ಸಾವನ್ನಪ್ಪಿದ ಯುವಕ. ಬ್ರೈನ್‌ಸ್ಟ್ರೋಕ್‌ನಿಂದಾಗಿ ಮೃತಪಟ್ಟಿದ್ದಾನೆ. ಇದನ್ನೂ ಓದಿ: ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣ – ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರ್ಕಾರ
ಸೆ.11 ರ ರಾತ್ರಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಾಗಮಂಗಲದಲ್ಲಿ ಗಲಭೆ ಆಗಿತ್ತು. ಘಟನೆ ನಡೆದ ನಂತರ ಯುವಕ ಗ್ರಾಮ ತೊರೆದಿದ್ದ. ನಿನ್ನೆ ಕಿರಣ್‌ಗೆ ಬ್ರೈನ್‌ಸ್ಟ್ರೋಕ್ ಆಗಿತ್ತು. ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.
ಈಗಾಗಲೇ ಪ್ರಕರಣ ಸಂಬಂಧ ಮೃತ ಕಿರಣ್ ತಂದೆ ಬಂಧನವಾಗಿದ್ದಾರೆ. ಕುಮಾರ್ ಪ್ರಕರಣದ ಎ17 ಆರೋಪಿಯಾಗಿದ್ದಾರೆ. ಮಂಡ್ಯ ಜಿಲ್ಲಾ ಕಾರಗೃಹದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಇಡೀ ರಾಜ್ಯಕ್ಕೆ ಬೆಳಕು ನೀಡುವ ರಾಯಚೂರಿನಲ್ಲೇ ಬೆಳಕಿಲ್ಲ – ಸಾರ್ವಜನಿಕರಿಂದ ತೀವ್ರ ಆಕ್ರೋಶ