ಮಂಡ್ಯ: ಕಳೆದ ಬುಧವಾರ ನಾಗಮಂಗಲದಲ್ಲಿ (Nagamangala) ನಡೆದ ಗಲಭೆಯಲ್ಲಿ ಬಾಂಗ್ಲಾದೇಶ ಲಿಂಕ್ ಇದೆ ಎಂದು ಅನುಮಾನ ವ್ಯಕ್ತಪಡಿಸಿ ಜೆಡಿಎಸ್‌ನ ಮಾಜಿ ಶಾಸಕ ಸುರೇಶ್‌ಗೌಡ (Suresh Gowda) ಹೇಳಿಕೆ ನೀಡಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಕಳೆದ ಬುಧವಾರ ನಾಗಮಂಗಲದಲ್ಲಿ ನಡೆದ ಗಲಭೆಯಲ್ಲಿ ಕೇರಳ ಹಾಗೂ ನಿಷೇಧಿತ ಪಿಎಫ್‌ಐ ಸಂಘಟನೆ ಲಿಂಕ್ ಇದೆ ಎಂಬ ಅನುಮಾನಗಳು ವ್ಯಕ್ತವಾಗಿದೆ. ಜೊತೆಗೆ ಈ ಕೃತ್ಯದಲ್ಲಿ ಬಾಂಗ್ಲಾದೇಶ (Bangladesh) ಲಿಂಕ್ ಸಹ ಇದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ಡಿ.ಕೆ.ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಕೇಸ್- ಇಂದು ಸುಪ್ರೀಂನಲ್ಲಿ ವಿಚಾರಣೆ
- Advertisement -
- Advertisement -
ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯ ವೇಳೆ ದುಷ್ಕರ್ಮಿಗಳು ಎಸಗಿರುವ ಕೃತ್ಯದಿಂದ ಇಡೀ ಪಟ್ಟಣದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ಗಲಭೆ ನಡೆದ ಬಳಿಕ ಇದಕ್ಕೆ ಯಾರು ಕಾರಣ ಎಂದು ಪೊಲೀಸ್ ಇಲಾಖೆ ತನಿಖೆ ನಡೆಸಿತ್ತು. ಈ ಸಂಬಂಧ ಈಗಾಗಲೇ 55 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರ ಪೈಕಿ ಕೇರಳದ ಮಲ್ಲಪುರಂ ಮೂಲದ ಯೂಸುಫ್ ಹಾಗೂ ನಾಸೀರ್ ಎಂಬುವವರು ಇದ್ದು, ಇವರು ನಿಷೇಧಿತ ಸಂಘಟನೆಯಾದ ಪಿಎಫ್‌ಐನಲ್ಲಿ ಗುರುತಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
- Advertisement -
ಇದೀಗ ಗಲಭೆಯಲ್ಲಿ ಕೇವಲ ಕೇರಳ ಮೂಲದ ಪಿಎಫ್‌ಐ (PFI) ಸಂಘಟನೆಯವರು ಮಾತ್ರವಲ್ಲ. ಬಾಂಗ್ಲಾದೇಶದಿಂದ ಆಕ್ರಮವಾಗಿ ಬಂದು ನಾಗಮಂಗಲ ತಾಲೂಕಿನಲ್ಲಿ ನೆಲಸಿರುವವರು ಸಹ ಭಾಗಿಯಾಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
- Advertisement -
ಕೇವಲ ಕೇರಳ ಮೂಲದವರ ಕೈವಾಡವಿಲ್ಲ. ಅಕ್ರಮವಾಗಿ ನಾಗಮಂಗಲದಲ್ಲಿ ನೆಲೆಸಿರುವ ಬಾಂಗ್ಲಾದೇಶದ ಪ್ರಜೆಗಳ ಕೈವಾಡ ಸಹ ಇದೆ ಎಂಬಂತೆ ಕಾಣುತ್ತಿದೆ. ನಾಗಮಂಗಲ ತಾಲೂಕಿನ ಹಲವೆಡೆ ತೋಟದ ಮನೆಗಳಲ್ಲಿ ಅಕ್ರಮವಾಗಿ ಬಾಂಗ್ಲಾದೇಶದ ಹಲವರು ನೆಲೆಸಿದ್ದಾರೆ. ನಾನು ಶಾಸಕನಾಗಿದ್ದ ವೇಳೆ ಪೊಲೀಸ್ ಇಲಾಖೆಗೆ ಹಾಗೂ ಆಗಿನ ಗೃಹ ಸಚಿವರಿಗೂ ಮಾಹಿತಿ ನೀಡಿದ್ದೇನೆ. ಆದರೆ ಅವರನ್ನು ಪತ್ತೆ ಹಚ್ಚುವ ಕೆಲಸ ಮಾಡಿಲ್ಲ. ಈ ತನಿಖೆಯನ್ನು ಎನ್‌ಐಎಗೆ ನೀಡಿದರೆ ಎಲ್ಲಾ ಸತ್ಯಗಳು ಹೊರಗೆ ಬರುತ್ತವೆ. ಹೀಗಾಗಿ ನಾಗಮಂಗಲ ಗಲಭೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಎನ್‌ಐಎಗೆ (NIA) ನೀಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.ಇದನ್ನೂ ಓದಿ: ರಾತ್ರೋರಾತ್ರಿ ಸ್ಮಶಾನ ಒಡೆದು ಇಂದಿರಾ ಕ್ಯಾಂಟೀನ್ ನಿರ್ಮಾಣ – ಸ್ಥಳೀಯರಿಂದ ಆಕ್ರೋಶ
ನಾಗಮಂಗಲದ ಗಲಭೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇದೀಗ ಬಾಂಗ್ಲಾದೇಶದವರ ಕೈವಾಡದ ಬಗ್ಗೆ ಗಂಭೀರ ಆರೋಪಗಳು ಕೇಳಿ ಬರುತ್ತಿದೆ. ಇದನ್ನು ರಾಜ್ಯ ಸರ್ಕಾರ ಗಂಭೀರವಾಗಿ ತೆಗೆದುಕೊಂಡು ತನಿಖೆಯ ಜವಾಬ್ದಾರಿಯನ್ನು ಎನ್‌ಐಎಗೆ ಒಪ್ಪಿಸುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ ಎಂದಿದ್ದಾರೆ.