ಬೆಂಗಳೂರು: ಮೆಟ್ರೋ (Namma Metro) ಹಸಿರು ವಿಭಾಗದ ನಾಗಸಂದ್ರ – ಮಾದಾವರ (Nagasandra – Madavara) ವಿಸ್ತರಿತ ಮಾರ್ಗ ನಾಳೆ(ನ.7) ಸಾರ್ವಜನಿಕರ ಸೇವೆಗೆ ಲಭ್ಯವಾಗಲಿದೆ.
ಇಂದು ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಮತ್ತು ಬೆಂಗಳೂರಿನ ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ (Tejasvi Surya) ಅವರು ಯಶವಂತಪುರದಿಂದ ಮಾದಾವರದವರೆಗೆ ಪ್ರಾಯೋಗಿಕ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿದರು.
Advertisement
ನಾಗಸಂದ್ರದಿಂದ ಮಾದಾವರ ಮೆಟ್ರೋ ನಿಲ್ದಾಣದವರೆಗಿನ ವಿಸ್ತರಿತ 3.14 ಕಿಮೀ ಮಾರ್ಗವನ್ನು ಇಂದು ಪರಿಶೀಲನೆ ನಡೆಸಿದೆ. ನಾಗರಿಕರನ್ನು ಹೆಚ್ಚು ಕಾಯಿಸುವುದು ಸರಿಯಲ್ಲ ಎನ್ನುವ ಕಾರಣಕ್ಕೆ ಈಗಲೇ ಹೊಸ ಮಾರ್ಗದ ಸೇವೆಯನ್ನು ಆರಂಭಿಸಲಾಗಿದ್ದು, ಸದ್ಯದಲ್ಲೇ ಅಧಿಕೃತವಾಗಿ ಉದ್ಘಾಟಿಸಲಾಗುವುದು. ಇಡೀ ದೇಶದಲ್ಲೇ ಅತಿ ಹೆಚ್ಚು ಮೆಟ್ರೋ ಪ್ರಯಾಣಿಕರನ್ನು… pic.twitter.com/rG1Ua8dCEZ
— DK Shivakumar (@DKShivakumar) November 6, 2024
Advertisement
ಮಾದಾವರದಿಂದ ನಾಳಗೆ ಬೆಳಗ್ಗೆ 5 ಗಂಟೆಗೆ ಮೊದಲ ಮೆಟ್ರೋ ಸೇವೆ ಆರಂಭವಾದರೆ ರಾತ್ರಿ 11 ಗಂಟೆ ಕೊನೆಯ ಮೆಟ್ರೋ ರೈಲು ಹೊರಡಲಿದೆ. 10 ನಿಮಿಷಕ್ಕೊಮ್ಮೆ ಮಾದಾವರ ಟು ನಾಗಸಂದ್ರ ನಡುವೆ ಮೆಟ್ರೋ ರೈಲು ಸಂಚಾರ ಮಾಡಲಿದೆ.
Advertisement
ಮಂಗಳವಾರ ನಗರಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಭೇಟಿಯಾದ ನಂತರ ವಿಸ್ತರಿತ ಹಸಿರು ಮಾರ್ಗದ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸುವ ಸಂತಸದ ವಿಷಯವನ್ನು ಸಂಸದ ತೇಜಸ್ವಿ ಸೂರ್ಯ ಅವರು ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದರು.
Advertisement
Grateful to PM Shri @narendramodi Ji for expediting approvals for Namma Metro’s Green Line from Nagasandra to Madavara.
Today, along with DCM Shri @DKShivakumar, took the trial metro run to Madavara & oversaw preparations for tomorrow’s opening.
Operations on the line are all… pic.twitter.com/W8Sv8QPYDc
— Tejasvi Surya (@Tejasvi_Surya) November 6, 2024
ವಿಸ್ತರಿತ ಹಸಿರು ಮಾರ್ಗದಲ್ಲಿ ಮಂಜುನಾಥ ನಗರ, ಚಿಕ್ಕಬಿದರುಕಲ್ಲು, ಮಾದಾವರ ಗಳನ್ನು ಒಳಗೊಂಡ 3 ಮೆಟ್ರೋ ನಿಲ್ದಾಣಗಳಿವೆ. ತುಮಕೂರು ರಸ್ತೆಯಲ್ಲಿನ ಸಂಚಾರ ದಟ್ಟಣೆ ನಿಯಂತ್ರಣದಲ್ಲಿ ಈ ಮಾರ್ಗವು ಬಹುಮುಖ್ಯ ಪಾತ್ರ ವಹಿಸಲಿದೆ. 91 ತಿಂಗಳ ಅವಧಿ ತೆಗೆದುಕೊಂಡ ನಂತರ ಇದೀಗ ಸಾರ್ವಜನಿಕರ ಸೇವೆಗೆ ಮುಕ್ತವಾಗಿದೆ.
ವಿಸ್ತರಿತ 3.14 ಕಿ.ಮೀ ಸೇರಿ ಬೆಂಗಳೂರು ಮೆಟ್ರೋ 76.95 ಕಿ.ಮೀ. ವ್ಯಾಪ್ತಿಯನ್ನು ಹೊಂದಿದೆ. ಮೆಟ್ರೋ ಕಾಮಗಾರಿಯನ್ನು ತ್ವರಿತವಾಗಿ ಮುಗಿಸಲು ಆದ್ಯತೆ ನೀಡಲಾಗುತ್ತಿದ್ದು, ಮುಂದಿನ ವರ್ಷಕ್ಕೆ ಇನ್ನೂ 30 ಕಿ.ಮೀ. ಸೇರ್ಪಡೆಯಾಗಲಿದೆ. 2026ಕ್ಕೆ ಬೆಂಗಳೂರು ಮೆಟ್ರೋದ ಒಟ್ಟು ವ್ಯಾಪ್ತಿ 175 ಕಿ.ಮೀ ಆಗಲಿದೆ.