ಮುಂಬೈ: ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪ್ರಾಧ್ಯಾಪಕನೊಬ್ಬನನ್ನು ಅಮಾನತುಗೊಳಿಸಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದ ಖಾಸಗಿ ಕಾಲೇಜವೊಂದರಲ್ಲಿ ನಡೆದಿದೆ.
Advertisement
ದಾದಾ ರಾಮ್‍ಚಂದ್ ಬಖ್ರು ಸಿಂಧು ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ ಪ್ರೋಫೆಸರ್ ರಾಕೇಶ್ ಗೆಡಮ್ ಅಮಾನತುಗೊಂಡಿರುವ ಪ್ರಾಧ್ಯಾಪಕ. ತನ್ನ ವಿಭಾಗದ ವಿದ್ಯಾರ್ಥಿನಿಯರನ್ನು ಲೈಂಗಿಕವಾಗಿ ಸಹಕರಿಸುವಂತೆ ಒತ್ತಾಯಿಸಿದ್ದ. ಅದಕ್ಕೆ ವಿರೋಧ ವ್ಯಕ್ತಪಡಿಸಿದರೆ ಫೇಲ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ. ಅಲ್ಲದೇ ಕೆಲ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಆ್ಯಸಿಡ್ ಎರಚಿದ ಕಿರಾತಕನಿಗೆ ಲುಕ್‍ಔಟ್ ನೊಟೀಸ್ ಜಾರಿ
Advertisement
ಶಿವಸೇನೆಯ ಯುವ ಘಟಕ ಯುವಸೇನೆಯ ಪದಾಧಿಕಾರಿಗಳು ಕಾಲೇಜು ಅಧಿಕಾರಿಗಳ ಮುಂದೆ ವಿಷಯ ಪ್ರಸ್ತಾಪಿಸಿದ್ದ ಬೆನ್ನಲ್ಲೇ ಹಲವಾರು ವಿದ್ಯಾರ್ಥಿನಿಯರು, ರಾಕೇಶ್ ವಿರುದ್ಧ ದೂರು ನೀಡಲು ಮುಂದಾದರು. ವಿದ್ಯಾರ್ಥಿನಿಯರು ಪ್ರೋಫೆಸರ್ ವಿರುದ್ಧ ನಾಗಪುರದ ಪಚ್‍ಪೋಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದಾಗ ವಿಷಯ ಬೆಳಕಿಗೆ ಬಂದಿದ್ದು, ಅದರ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.
Advertisement
ವಿಶ್ವವಿದ್ಯಾಲಯದ ಆಡಳಿತವು ಪ್ರೋಫೆಸರ್ ರಾಕೇಶ್ ವಿರುದ್ಧದ ಆರೋಪಗಳ ಹಿನ್ನೆಲೆಯಲ್ಲಿ ಅಮಾನತುಗೊಳಿಸಿದೆ. ಆತ ತಲೆಮರೆಸಿಕೊಂಡಿದ್ದಾನೆ. ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಆ್ಯಸಿಡ್ ದಾಳಿಗೆ ತುತ್ತಾದ ಯುವತಿಯ ಚಿಕಿತ್ಸೆಗೆ 1 ಲಕ್ಷ ರೂ. ಪರಿಹಾರ ಘೋಷಿಸಿದ ಮುರುಗೇಶ್ ನಿರಾಣಿ
Advertisement
ಪಚ್‍ಪೋಲಿ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಸಂಜಯ್ ಮೆಂಧೆ ಅವರು ಘಟನೆ ಕುರಿತು ಪ್ರತಿಕ್ರಿಯಿಸಿದ್ದು, ಈ ಪ್ರಕರಣದಲ್ಲಿ ಪ್ರಾದ್ಯಾಪಕನಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಮೂವರು ವಿದ್ಯಾರ್ಥಿನಿಯರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ. ಇತರ ಸಂತ್ರಸ್ತರೂ ದೂರು ನೀಡಲು ಮುಂದೆ ಬರುವಂತೆ ಪೊಲೀಸರು ಮನವಿ ಮಾಡಿದ್ದಾರೆ.