ನವದೆಹಲಿ: ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ನಾಗ್ಪುರದಿಂದ ಕೋಲ್ಕತ್ತಾಗೆ ಹೊರಟಿದ್ದ ವಿಮಾನವನ್ನು ರಾಯ್‌ಪುರ (Raipur) ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಿದ ಸಿಐಎಸ್‌ಎಫ್ ಮತ್ತು ಪೊಲೀಸರು ವಿಮಾನವನ್ನು ತಪಾಸಣೆ ಮಾಡಿದರು, ತಪಾಸಣೆಯಲ್ಲಿ ಯಾವುದೇ ಸ್ಫೋಟಕ ಪತ್ತೆಯಾಗದ ಕಾರಣ ಹುಸಿ ಬಾಂಬ್ ಬೆದರಿಕೆ ಎಂದು ನಿರ್ಧರಿಸಲಾಗಿದೆ.
ಈ ಬಗ್ಗೆ ಮಾತನಾಡಿದ ರಾಯ್‌ಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಸಿಂಗ್, ವಿಮಾನಯಾನ ಸಂಸ್ಥೆಗಳಿಗೆ ಬೆದರಿಕೆ ಬಂದ ಹಿನ್ನೆಲೆ ನಾಗ್‌ಪುರದಿಂದ (Nagpur) ಕೋಲ್ಕತ್ತಾ (Kolkatta) ಕಡೆಗೆ ವಿಮಾನವನ್ನು ತಿರುಗಿಸಲಾಯಿತು. ಇಂಡಿಗೋ ವಿಮಾನದಲ್ಲಿದ್ದ 187 ಪ್ರಯಾಣಿಕರು ಮತ್ತು ಆರು ಸಿಬ್ಬಂದಿಯನ್ನು ಸ್ಥಳಾಂತರಿಸಲಾಯಿತು ಎಂದು ಹೇಳಿದರು. ಇದನ್ನೂ ಓದಿ: ಕಬ್ಬು ಬೆಲೆ ನಿಗದಿಗಾಗಿ ಹೋರಾಟ- ಸಿಎಂಗೆ ಘೇರಾವ್ ಹಾಕಲು ನಿರ್ಧರಿಸಿದ ಮುಧೋಳ ರೈತರು
Advertisement
Advertisement
ಬೆದರಿಕೆಗೆ ಸಂಬಂಧಿಸಿದಂತೆ ಒಬ್ಬ ಪ್ರಯಾಣಿಕನನ್ನು ಬಂಧಿಸಲಾಗಿದ್ದು, ಆತನನ್ನು ನಿಮೇಶ್ ಮಂಡಲ್ ಎಂದು ಗುರುತಿಸಲಾಗಿದೆ. ಆತನನ್ನು ಮನ ಪೊಲೀಸ್ ಠಾಣೆಯಲ್ಲಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ವಿಮಾನಯಾನ ಸಂಸ್ಥೆಗಳಿಂದ ದೂರು ಸ್ವೀಕರಿಸಿದ್ದರಿಂದ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ನ.20ಕ್ಕೆ ರಾಜ್ಯಾದ್ಯಂತ ಬಾರ್ ಬಂದ್