ನಾಗ್ಪುರ: ಮಾರ್ಚ್ 17 ರಂದು ಭುಗಿಲೆದ್ದ ಹಿಂಸಾಚಾರದ ಮಾಸ್ಟರ್‌ಮೈಂಡ್ ಎಂದು ಆರೋಪಿಸಲಾಗಿರುವ ಫಹೀಮ್ ಶಮೀಮ್ ಖಾನ್ (Fahim Shamim Khan) ಎಂಬಾತನನ್ನು ನಾಗಪುರ ಪೊಲೀಸರು (Nagpur Police) ಬಂಧಿಸಿದ್ದಾರೆ. ಮೈನಾರಿಟೀಸ್ ಡೆಮೋಕ್ರಟಿಕ್ ಪಾರ್ಟಿಯ (MDP) ನಗರ ಅಧ್ಯಕ್ಷನಾಗಿರುವ ಫಹೀಮ್, ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.
ಪೊಲೀಸರು ಫಹೀಮ್ ಖಾನ್‌ನ ಮೊದಲ ಚಿತ್ರಗಳನ್ನು ಬಿಡುಗಡೆ ಮಾಡಿದ್ದಾರೆ. ಗಣೇಶ್‌ಪೇಠ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್‌ಐಆರ್‌ನಲ್ಲಿ ಫಹೀಮ್ ಖಾನ್‌ನ ಹೆಸರು ಸೇರ್ಪಡೆಯಾಗಿದ್ದು, ಹಿಂಸಾಚಾರ ಪ್ರಾರಂಭವಾಗುವ ಕೆಲವೇ ಕ್ಷಣಗಳ ಮೊದಲು ಆತ ಭಾವನಾತ್ಮಕ ಭಾಷಣವೊಂದನ್ನು ಮಾಡಿರುವ ವೀಡಿಯೋ ಸಾಕ್ಷ್ಯವೊಂದು ಪೊಲೀಸರ ಕೈಗೆ ಸಿಕ್ಕಿದೆ. ಈ ಭಾಷಣವೇ ಎರಡು ಸಮುದಾಯಗಳ ನಡುವಿನ ಘರ್ಷಣೆಗೆ ಕಾರಣವಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಧರ್ಮದ ಆಧಾರದಲ್ಲಿ ಶೇ.4ರಷ್ಟು ಹೊಸ ಮೀಸಲಾತಿ ನೀಡುವುದು ಕಾನೂನುಬಾಹಿರ – ಬಿಜೆಪಿ ವಿರೋಧ
38 ವರ್ಷದ ಫಹೀಮ್ ಖಾನ್, ಯಶೋಧರ ನಗರದ ಸಂಜಯ್ ಬಾಗ್ ಕಾಲೊನಿಯ ನಿವಾಸಿಯಾಗಿದ್ದು, 2024ರ ಲೋಕಸಭಾ ಚುನಾವಣೆಯಲ್ಲಿ ನಾಗ್ಪುರ ಕ್ಷೇತ್ರದಿಂದ ಎಂಡಿಪಿ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಆದರೆ, ಕೇಂದ್ರ ಸಚಿವ ನಿತಿನ್ ಗಡ್ಕರಿ ವಿರುದ್ಧ ಸ್ಪರ್ಧಿಸಿದ ಈತ 6.5 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಸೋಲು ಕಂಡಿದ್ದ. ಇದನ್ನೂ ಓದಿ: ಹಿಂದೂ ಯುವತಿ ಹತ್ಯೆ ಕೇಸ್ – ಸ್ವಾತಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ
ಬಂಧಿತ ಫಹೀಮ್ ಖಾನ್‌ನನ್ನು ಮಾರ್ಚ್ 21 ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ನಗರದಲ್ಲಿ ಶಾಂತಿ ಸ್ಥಾಪಿಸಲು ಕರ್ಫ್ಯೂ ಜಾರಿಯಲ್ಲಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮುಂದುವರೆದಿದೆ. ಪೊಲೀಸರು ಘಟನೆಯ ತನಿಖೆಯನ್ನು ತೀವ್ರಗೊಳಿಸಿದ್ದು, ಹೆಚ್ಚಿನ ಮಾಹಿತಿಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹರಡಿರುವ ವಿಡಿಯೋಗಳು ಮತ್ತು ಸಾಕ್ಷ್ಯಗಳನ್ನು ಪರಿಶೀಲಿಸುತ್ತಿದ್ದಾರೆ. ಇದನ್ನೂ ಓದಿ: IPL ಉದ್ಘಾಟನೆಯಲ್ಲಿ ಭಾಗಿಯಾಗಲಿದ್ದಾರೆ ಬಾಲಿವುಡ್ ತಾರೆಯರು
ಔರಂಗಜೇಬ್ ಅಪ್ರಸುತ್ತ ಎಂದ ಆರ್‌ಎಸ್‌ಎಸ್:
ಹಿಂಸಾಚಾರದ ಬಗ್ಗೆ ಮಾತನಾಡಿದ ಸುನೀಲ್ ಅಂಬೇಕರ್, ಔರಂಗಜೇಬ್ ಇಂದಿನ ದಿನಗಳಲ್ಲಿ ಪ್ರಸ್ತುತವಲ್ಲ, ಯಾವುದೇ ರೀತಿಯ ಹಿಂಸಾಚಾರವು ಸಮಾಜದ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ಅವರು ಒತ್ತಿ ಹೇಳಿದ್ದಾರೆ. ಈ ಹೇಳಿಕೆಯ ಮೂಲಕ ಆರ್‌ಎಸ್‌ಎಸ್ ಹಿಂಸಾಚಾರವನ್ನು ಖಂಡಿಸುವ ಜೊತೆಗೆ ಈ ವಿವಾದದಲ್ಲಿ ಶಾಂತಿಯ ಮಾರ್ಗವನ್ನು ಸೂಚಿಸಿದೆ. ಇದನ್ನೂ ಓದಿ: ಗ್ರೇಟರ್ ಬೆಂಗಳೂರು ಬಿಲ್‌ಗೆ ಸಹಿ ಹಾಕಬೇಡಿ – ರಾಜ್ಯಪಾಲರ ಭೇಟಿ ಮಾಡಿ, ಮನವಿ ಸಲ್ಲಿಸಿದ ಬಿಜೆಪಿ