ನವದೆಹಲಿ: ಮಣಿಪುರದಲ್ಲಿ (Manipur) ಇಬ್ಬರು ಮಹಿಳೆಯರ (Women) ಬೆತ್ತಲೆ ಮೆರವಣಿಗೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸ್ವಯಂ ದೂರು ದಾಖಲಿಸಿಕೊಂಡಿರುವ ಸುಪ್ರೀಂಕೋರ್ಟ್ (Supreme Court) ಆರೋಪಿಗಳ ವಿರುದ್ಧ ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಸ್ವಯಂ ದೂರು ದಾಖಲಿಸಿದ ಬಳಿಕ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಮತ್ತು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಿಚಾರಣೆ ವೇಳೆ ಉಪಸ್ಥಿತರಿರುವಂತೆ ಮುಖ್ಯ ನ್ಯಾಯಾಧೀಶ ಡಿ.ವೈ ಚಂದ್ರಚೂಡ್ (D.Y.Chandrachud) ಸೂಚನೆ ನೀಡಿದ್ದರು. ಬಳಿಕ ವಿಚಾರಣೆ ಆರಂಭಿಸಿದ ಸಿಜೆಐ ನಾವು ವಿಡಿಯೋ ನೋಡಿ ವಿಚಲಿತರಾಗಿದ್ದೇವೆ, ಹಿಂಸಾಚಾರ ಪ್ರದೇಶದಲ್ಲಿ ಮಹಿಳೆಯನ್ನು ಸಾಧನವಾಗಿ ಬಳಸಿಕೊಂಡಿರುವುದು ತೀವ್ರ ಕಳವಳಕಾರಿ ಸಂಗತಿ ಎಂದರು. ಇದನ್ನೂ ಓದಿ: 2002 ರ ಗುಜರಾತ್ ಗಲಭೆ ಪ್ರಕರಣ – ತೀಸ್ತಾ ಸೆಟಲ್ವಾಡ್‌ಗೆ ಸುಪ್ರೀಂ ಜಾಮೀನು
ಇದು ಮಾನವ ಹಕ್ಕುಗಳ ಉಲ್ಲಂಘನೆ. ಪ್ರಜಾಪುಭುತ್ವ ವ್ಯವಸ್ಥೆಯಲ್ಲಿ ಇದು ಸ್ವೀಕಾರವಲ್ಲ. ಸರ್ಕಾರಕ್ಕೆ ಕ್ರಮ ತೆಗೆದುಕೊಳ್ಳಲು ಸ್ವಲ್ಪ ಸಮಯ ನೀಡುತ್ತೇವೆ. ಅಪರಾಧಿಗಳನ್ನು ಬಂಧಿಸಲು ಅಧಿಕಾರಿಗಳು ಮೇ ತಿಂಗಳಿನಿಂದ ಕೈಗೊಂಡ ಕ್ರಮಗಳು ಏನು? ಘಟನೆಗಳು ಪುನಾರವರ್ತನೆಯಾಗದಿರಲು ತೆಗೆದುಕೊಂಡ ನಿರ್ಧಾರಗಳೇನು ಎಂಬ ವಿವರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಸೂಚನೆ ನೀಡಿದರು. ಇದನ್ನೂ ಓದಿ: ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಶಿಕ್ಷೆ – ಶುಕ್ರವಾರ ಅರ್ಜಿ ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್
ಮುಂದಿನ ಶುಕ್ರವಾರ ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರಕರಣಗಳಲ್ಲಿ ನ್ಯಾಯಾಲಯವು ಈ ವಿಷಯವನ್ನು ಪರಿಗಣನೆಗೆ ತೆಗೆದುಕೊಳ್ಳುತ್ತಿದೆ. ಅಂದು ನ್ಯಾಯಾಲಯಕ್ಕೆ ಸರ್ಕಾರ ಉತ್ತರವನ್ನು ನೀಡಬೇಕು ಎಂದು ನಿರ್ದೇಶಿಸಿದರು. ಇದನ್ನೂ ಓದಿ: ಕುಸ್ತಿ ಫೆಡರೇಷನ್ ಚುನಾವಣೆ – ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ
Web Stories