ಬೆಂಗಳೂರು: ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರೌಡಿ ನಲಪಾಡ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.
ಜಾಮೀನು ಕೋರಿ ನಲಪಾಡ್ ಸಲ್ಲಿಸಿರುವ ಸಂಪೂರ್ಣ ವಿವರ ಪಬ್ಲಿಕ್ ಟಿವಿಗೆ ಲಭ್ಯವಾಗಿದ್ದು, ನನ್ನ ವಿರುದ್ಧ ದಾಖಲಾಗಿರುವ ಕೇಸ್ ಸುಳ್ಳಾಗಿದ್ದು, ಇದು ವಿರೋಧ ಪಕ್ಷ, ಮಾಧ್ಯಮಗಳ ಮೇಲೆ ಗೂಬೆ ಕೂರಿಸಿದ್ದಾರೆ ಎಂದು ನಲಪಾಡ್ ಹೇಳಿದ್ದಾನೆ. ಇದನ್ನೂ ಓದಿ: ರಾಜಿ ಸಂಧಾನಕ್ಕೆ ಮಲ್ಯ ಆಸ್ಪತ್ರೆಗೆ ಬಂದ ಶಾಸಕ ಹ್ಯಾರಿಸ್
Advertisement
Advertisement
ಜಾಮೀನು ಅರ್ಜಿಯಲ್ಲೇನಿದೆ?: ರಾಜಕೀಯ ಮೈಲೇಜ್‍ಗಾಗಿ ಶತ್ರುಗಳ ಈ ರೀತಿ ಮಾಡಿದ್ದಾರೆ. ಚುನಾವಣಾ ಸಮಯವಾದ್ದರಿಂದ ನನ್ನನ್ನು ಸೋಲಿಸಲು ಈ ರೀತಿಯ ಕುತಂತ್ರ ಮಾಡಲಾಗಿದೆ. ಇದರಿಂದ ತಮ್ಮ ಕ್ಷೇತ್ರದ ಮತದಾರರನ್ನು ಸೆಳೆಯಲು ಪ್ರತಿಪಕ್ಷಗಳು ಹುನ್ನಾರ ಮಾಡಿವೆ. ಮಾಧ್ಯಮಗಳು ಅನಾವಶ್ಯಕವಾಗಿ ಇದನ್ನು ಹೈಪ್ ಮಾಡಿದೆ ಅಂತ ತಿಳಿಸಿದ್ದಾನೆ. ಇದನ್ನೂ ಓದಿ: ನಲಪಾಡ್ ಗ್ಯಾಂಗಿನಿಂದ ಜೀವಬೆದರಿಕೆ – ವಕೀಲರಿಂದ ಪೊಲೀಸರಿಗೆ ದೂರು
Advertisement
Advertisement
ನನ್ನ ಮೇಲೆ ದೂರು ದಾಖಲಿಸಿರುವುದು ಸುಳ್ಳು ಕೇಸ್. ಆಧಾರ ರಹಿತವಾದ, ರಾಜಕೀಯ ದುರುದ್ದೇಶದಿಂದ ಕೇಸ್ ದಾಖಲಿಸಲಾಗಿದೆ. ನನ್ನ ಹಾಗೂ ತಂದೆಯ ಏಳಿಗೆ ಸಹಿಸದವರು ಆಧಾರ ರಹಿತ ಕೇಸ್ ದಾಖಲಿಸಿದ್ದಾರೆ. 10 ರಿಂದ 15 ಜನ ಹಲ್ಲೆ ಅಂತಿದೆ. ನಾನೇ ಹಲ್ಲೆ ಮಾಡಿದ್ದೇನೆ ಅಂತಿಲ್ಲ. ಹೀಗಾಗಿ ಜಾಮೀನು ನೀಡಬೇಕು ಎಂದು ನಲಪಾಡ್ ಮನವಿ ಮಾಡಿದ್ದಾನೆ. ಇದನ್ನೂ ಓದಿ: ಜೈಲಿನಲ್ಲೂ ಮುಂದುವರಿದ ನಲಪಾಡ್ ಪುಂಡಾಟ- ನಿನ್ನಿಂದ ನಾವು ಜೈಲು ಸೇರುವಂತಾಯ್ತು ಎಂದ ಸ್ನೇಹಿತ ಅಬ್ರಾಸ್ ಮೇಲೆ ಹಲ್ಲೆ