Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರಣಿ ಅಪಘಾತ ಮಾಡಿ ಬೆಂಟ್ಲಿ ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾದ ನಲಪಾಡ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸರಣಿ ಅಪಘಾತ ಮಾಡಿ ಬೆಂಟ್ಲಿ ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾದ ನಲಪಾಡ್

Bengaluru City

ಸರಣಿ ಅಪಘಾತ ಮಾಡಿ ಬೆಂಟ್ಲಿ ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾದ ನಲಪಾಡ್

Public TV
Last updated: February 11, 2020 1:49 pm
Public TV
Share
2 Min Read
Ravikanthe Gowda sp a
SHARE

– ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ
– ಅಪಘಾತ ಕುರಿತು ಡಿಸಿಪಿ ರವಿಕಾಂತೇಗೌಡ ಸ್ಪಷ್ಟನೆ

ಬೆಂಗಳೂರು: ಭಾನುವಾರ ಮೇಖ್ರಿ ಸರ್ಕಲ್ ಅಂಡರ್ ಪಾಸ್‍ನಲ್ಲಿ ಸರಣಿ ಅಪಘಾತ ಮಾಡಿ ಬೆಂಟ್ಲಿ ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾದ ಚಾಲಕ ಯಾರು ಎನ್ನುವುದು ತನಿಖೆಯಿಂದ ಪೊಲೀಸರಿಗೆ ಗೊತ್ತಾಗಿದೆ. ಕಾರಿನ ಚಾಲಕ ಶಾಂತಿನಗರದ ಶಾಸಕ ಎಸ್.ಎ.ಹ್ಯಾರಿಸ್ ಅವರ ಮಗ ಮೊಹಮ್ಮದ್ ನಲಪಾಡ್ ಎಂದು ತನಿಖೆ ವೇಳೆ ಪೊಲೀಸರಿಗೆ ತಿಳಿದುಬಂದಿದ್ದು, ಈಗ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿದೆ.

ಸರಣಿ ಅಪಘಾತಕ್ಕೆ ಸಂಬಂಧಿಸಿದಂತೆ ಸದಾಶಿವನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಈ ಅಪಘಾತದ ಬಗ್ಗೆ ಡಿಸಿಪಿ ರವಿಕಾಂತೇಗೌಡ ಸ್ಪಷ್ಟನೆ ಕೊಟ್ಟಿದ್ದಾರೆ.

Mohammed Nalpad

ಮೇಖ್ರಿ ಸರ್ಕಲ್ ಅಂಡರ್ ಪಾಸ್‍ನಲ್ಲಿ ಬೆಂಟ್ಲಿ ಕಾರೊಂದು ಅಪಘಾತ ಮಾಡಿದ್ದು, ದ್ವಿಚಕ್ರ ವಾಹನ ಸವಾರನೊಬ್ಬನಿಗೆ ಕಾಲು ಮುರಿದಿದ್ದು, ಒಂದು ಆಟೋ ಕೂಡ ಡ್ಯಾಮೇಜ್ ಆಗಿದೆ. ಅತಿವೇಗವಾಗಿ, ನಿರ್ಲಕ್ಷ್ಯವಾಗಿ ವಾಹನವನ್ನು ಚಾಲನೆ ಮಾಡಿದ ಕಾರಣ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿತ್ತು. ಆದರೆ ಚಾಲಕ ಅಲ್ಲಿಂದ ಓಡಿಹೋಗಿದ್ದನು. ಸೋಮವಾರ ನಾನೇ ಅಪಘಾತ ಮಾಡಿದ್ದು ಎಂದು ಓರ್ವ ಬಂದು ಶರಣಾಗಿದ್ದನು. ಆದರೆ ನಮ್ಮ ವಿಚಾರಣೆಯಲ್ಲಿ ಈತ ವಾಹನ ಚಾಲನೆ ಮಾಡಿರಲಿಲ್ಲ ಎಂಬುದು ಗೊತ್ತಾಗಿದೆ ಎಂದು ರವಿಕಾಂತೇಗೌಡ ತಿಳಿಸಿದ್ದಾರೆ.

ಅಪಘಾತ ಮಾಡಿದ್ದು, ಮೊಹಮ್ಮದ್ ನಲಪಾಡ್ ಎಂದು ಗೊತ್ತಾಗಿದೆ. ಈಗ ನಲಪಾಡ್‍ಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲು ಪೊಲೀಸರು ನಿರ್ಧಾರಿಸಿದ್ದಾರೆ. ಹೀಗಾಗಿ ಪೊಲೀಸ್ ನೋಟಿಸ್ ತಲುಪಿದ ತಕ್ಷಣ ವಿಚಾರಣೆಗೆ ಹಾಜರಾಗಬೇಕಾಗುತ್ತೆ. ವಿಚಾರಣೆಗೆ ಹಾಜರಾದಾಗ ಮುಂದಿನ ಕ್ರಮ ಕೈಗೊಳ್ಳುತ್ತೇವೆ. ನಮಗೆ ಖಚಿತ ಸಾಕ್ಷ್ಯಾಧಾರಗಳ ಮೇಲೆ ನಲಪಾಡ್‍ಯೇ ಕಾರ್ ಓಡಿಸುತ್ತಿದ್ದನು ಎಂದು ತಿಳಿದುಬಂದಿದೆ. ನ್ಯಾಯಾಲಯಕ್ಕೆ ನಾವು ದೋಷಾರೋಪಣ ಪಟ್ಟಿಯನ್ನು ಸಲ್ಲಿಸುತ್ತೇವೆ. ನ್ಯಾಯಾಲಯವು ಶಿಕ್ಷೆಯನ್ನು ತೀರ್ಮಾನ ಮಾಡುತ್ತದೆ ಎಂದು ಡಿಸಿಪಿ ವಿವರಿಸಿದರು.

car

ಏನಿದು ಪ್ರಕರಣ?
ಕಳೆದ ಭಾನುವಾರ ಮಧ್ಯಾಹ್ನ ಬಳ್ಳಾರಿ ರಸ್ತೆಯಲ್ಲಿ ಹೆಬ್ಬಾಳದ ಕಡೆಯಿಂದ ಮೇಖ್ರಿ ಸರ್ಕಲ್ ಅಂಡರ್ ಪಾಸ್ ಮೂಲಕ ಹೋಗುತ್ತಿದ್ದ ಬೆಂಟ್ಲಿ ಕಾರ್ ಬೈಕ್ ಮತ್ತು ಆಟೋಗೆ ಡಿಕ್ಕಿ ಹೊಡೆದಿತ್ತು. ಪರಿಣಾಮ ಆಟೋ ಚಾಲಕ ಸುಹೇಲ್ ಮತ್ತು ಆಟೋದಲ್ಲಿ ಪ್ರಯಾಣ ಮಾಡುತ್ತಿದ್ದ ಸಬೀಹಾ ಮತ್ತು ಅವರ ಆರು ವರ್ಷದ ಬಾಲಕನಿಗೆ ಗಾಯಗಳಾಗಿದ್ದವು. ಅಪಘಾತದ ಬಳಿಕ ಐಷಾರಾಮಿ ಕಾರಿನ ಚಾಲಕ ಸ್ಥಳದಲ್ಲೇ ಕಾರನ್ನು ಬಿಟ್ಟು ಓಡಿ ಹೋಗಿದ್ದನು. ಈ ಕುರಿತು ಎಫ್‍ಐಆರ್ ದಾಖಲಾಗಿತ್ತು.

ಅಪಘಾತವಾದಾಗ ನಲಪಾಡ್ ಯಾರ ಕಣ್ಣಿಗೂ ಕಾಣಿಸಲಿಲ್ಲ. ಆದರೆ ನಲಪಾಡ್ ಸಂಬಂಧಿ ನಫಿ ಮೊಹಮದ್ ನಸೀರ್ ಮತ್ತು ಬಾಡಿಗಾರ್ಡ್ ಬಾಲಕೃಷ್ಣ ಕಾಣಿಸಿಕೊಂಡಿದ್ದರು. ಸಂಚಾರ ಇಲಾಖೆಯ ಉನ್ನತ ಮೂಲಗಳ ಪ್ರಕಾರ, ಕಾರನ್ನು ಚಲಾಯಿಸುತ್ತಿದ್ದವನು ನಲಪಾಡ್ ಎನ್ನುವ ಸುಳಿವು ಸಿಕ್ಕಿತ್ತು. ಅಲ್ಲದೇ ಭಾನುವಾರ ಒಂದೇ ದಿನ ನಗರದ ಎರಡು ಕಡೆ ಎರಡು ಕಾರುಗಳು ಅಪಘಾತ ಮಾಡಿದ್ದವು.

dcp

ಈ ಬಗ್ಗೆ ಮಾಧ್ಯಮವೊಂದು ನಲಪಾಡ್‍ನನ್ನು ಪ್ರಶ್ನೆ ಮಾಡಿದಾಗ, ಮೊದಲಿಗೆ ನನಗೂ ಅಪಘಾತಕ್ಕೂ ಯಾವುದೇ ಸಂಬಂಧವಿಲ್ಲ. ಹೀಗಾಗಿ ಅಪಘಾತಕ್ಕೂ ನನಗೂ ಸಂಬಂಧ ಕಲ್ಪಿಸಬೇಡಿ. ನನಗೆ ಯಾವ ಬಾಡಿಗಾರ್ಡ್ ಕೂಡ ಇಲ್ಲ ಎಂದು ಹೇಳಿದ್ದನು. ನಂತರ ಶಾಸಕರ ಮಗ ಆಗಿದ್ದೇನೆ ಎಂಬ ಮಾತ್ರಕ್ಕೆ ಅಪಘಾತ ಆಗಬಾರದಾ? ಬೇರೆಯವರು ಅಪಘಾತ ಮಾಡುವುದನ್ನು ಸುದ್ದಿ ಮಾಡುವುದಿಲ್ಲ. ಆದರೆ ಶಾಸಕರ ಮಗ ಅಪಘಾತ ಮಾಡಿದರೆ ಮಾತ್ರ ಏಕೆ ಸುದ್ದಿ ಆಗಬೇಕು ಎಂದು ಪ್ರಶ್ನಿಸಿದ್ದನು.

ಈ ಹಿಂದೆ ಮೊಹಮ್ಮದ್ ನಲಪಾಡ್ ಯುವಕನೊಬ್ಬನ ಮೇಲೆ ಬಾರಿನಲ್ಲಿ ಹಲ್ಲೆ ನಡೆಸಿ 116 ದಿನ ಜೈಲು ಪಾಲಾಗಿದ್ದನು.

TAGGED:accidentbengalurucarinvestigationnalapadpolicePublic TVಅಪಘಾತಕಾರುತನಿಖೆನಲಪಾಡ್ಪಬ್ಲಿಕ್ ಟಿವಿಪೊಲೀಸ್ಬೆಂಗಳೂರು
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Mandya Youth Death
Districts

ಕೆರೆಯಲ್ಲಿ ಮೀನು ಹಿಡಿಯಲು ಹೋಗಿ ಯುವಕ ಸಾವು

Public TV
By Public TV
2 minutes ago
Fruits
Bengaluru City

ಮಾವು, ಬಾಳೆಹಣ್ಣು, ಪಪ್ಪಾಯ ಹಣ್ಣಿಗೆ ಕ್ಯಾಲ್ಸಿಯಂ ಕಾರ್ಬೈಡ್ ಬಳಕೆ – ಕ್ರಮ ಕೈಗೊಳ್ಳಲು FSSAI ಸೂಚನೆ

Public TV
By Public TV
23 minutes ago
Electricity
Bengaluru City

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್ – ಯೂನಿಟ್‌ಗೆ 56 ಪೈಸೆ ಹೆಚ್ಚಳ

Public TV
By Public TV
1 hour ago
Rahul Gandhi 3
Latest

ದ್ವಿಪೌರತ್ವ ಪ್ರಕರಣ – ರಾಹುಲ್ ಗಾಂಧಿ ವಿರುದ್ಧ FIR ದಾಖಲಿಸಲು ಅಲಹಾಬಾದ್ ಹೈಕೋರ್ಟ್ ಆದೇಶ

Public TV
By Public TV
1 hour ago
Loksabha
Latest

ಲೋಕಸಭೆಯಲ್ಲಿ ʻನಾರಿಶಕ್ತಿ ಬಿಲ್ʼ ತಿರಸ್ಕಾರ – ಗೆದ್ದ ವಿಪಕ್ಷಗಳ ಹಠ; NDA ಸರ್ಕಾರಕ್ಕೆ ಮುಖಭಂಗ

Public TV
By Public TV
2 hours ago
Chandra Layout Kidnap
Bengaluru City

ಸಾಲ ಪಡೆದಿದ್ದ ಹಣ ಮರಳಿ ಕೊಡದಿದ್ದಕ್ಕೆ ಸ್ವಂತ ಅಕ್ಕ, ಭಾವನಿಂದ ತಂಗಿ-ಮೈದುನನ ಕಿಡ್ನ್ಯಾಪ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?