ಬೆಂಗಳೂರು: ವಿದ್ವತ್ ಮೇಲೆ ಹಲ್ಲೆ ನಡೆಸಿ ಜೈಲುಪಾಲಾಗಿರುವ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಭವಿಷ್ಯ ಇಂದು ನಿರ್ಧಾರವಾಗಲಿದೆ.
ಅರ್ಜಿ ವಿಚಾರಣೆ ನಡೆಸಲಿರುವ 64ನೇ ಸಿಸಿಎಚ್ ನ್ಯಾಯಾಲಯ ನಲಪಾಡ್ ಭವಿಷ್ಯ ಪ್ರಕಟಿಸಲಿದೆ. ನಾನು ನನ್ನ ಕಕ್ಷಿದಾರ ಅಮಾಯಕ. ಅವರ ಮೇಲೆ ರಾಜಕೀಯ ಒತ್ತಡಕ್ಕೆ ಇಲ್ಲ ಸಲ್ಲದ ಕೇಸ್ ಗಳನ್ನು ಹಾಕಿದ್ದಾರೆ. ಹೀಗಾಗಿ ಅವರಿಗೆ ಜಾಮೀನು ನೀಡಿ ಅಂತ ನಲಪಾಡ್ ಪರ ವಕೀಲ ಟಾಮಿ ಸೆಬಾಸ್ಟಿಯನ್ ವಾದ ಮಂಡಿಸಿದ್ದರು. ಇದನ್ನೂ ಓದಿ: ಮೈಮೇಲೆ ಕುರ್ಚಿಗಳನ್ನು ಎಸೆದ್ರು, sorry ಎಂದರೂ ಬಿಯರ್ ಬಾಟಲಿಯಿಂದ ಬಾಯಿಗೆ ಹೊಡೆದ್ರು- ನಲಪಾಡ್ ದಾಳಿ ಬಗ್ಗೆ ವಿದ್ವತ್ Exclusive ಮಾತು
ಇದಕ್ಕೆ ಪ್ರತಿಯಾಗಿ ವಾದಿಸಿದ್ದ ವಿಶೇಷ ಅಭಿಯೋಜಕರಾಗಿ ಶ್ಯಾಮ್ ಸುಂದರ್, ಈ ಪ್ರಕರಣ ದೇಶದ ಗಮನ ಸೆಳೆದಿದೆ. ಆರೋಪಿ ಪ್ರಬಲನಾಗಿರುವುದರಿಂದ ಸಾಕ್ಷಿ ನಾಶವಾಗುವ ಸಂಭವ ಇದೆ. ಹೀಗಾಗಿ ಜಾಮೀನು ನೀಡಬಾರದು ಅಂತ ವಾದ ಮಂಡಿಸಿದ್ದರು. ಇದನ್ನೂ ಓದಿ: ಮಾ.2ಕ್ಕೆ ನಲಪಾಡ್ ಜಾಮೀನು ತೀರ್ಪು: ಕೋರ್ಟ್ ಕಲಾಪದಲ್ಲಿ ಇಂದು ವಾದ ಹೀಗಿತ್ತು
ಏನಿದು ಪ್ರಕರಣ?: ಘಟನೆ ನಡೆದ ನಗರದ ಫರ್ಜಿ ಕೆಫೆ ಯಲ್ಲಿ ಅಂದು ರಾತ್ರಿ ನಡೆದ ಪಾರ್ಟಿ ಆಯೋಜನೆಗೊಂಡಿತ್ತು. ನಗರದ ಶ್ರೀಮಂತ ಮನೆತನದ ಯುವಕ, ಯುವತಿಯರು ಪಾಲ್ಗೊಂಡಿದ್ದ ಕೆಫೆಯಲ್ಲಿ ವಿದ್ವತ್ ಹಾಗೂ ನಲ್ಪಾಡ್ ಮತ್ತು ಆತನ ಗ್ಯಾಂಗ್ ಕಾಣಿಸಿಕೊಂಡಿತ್ತು. ಈ ಪಾರ್ಟಿ ಆರಂಭದ ಸಮಯದಿಂದ ನಲಪಾಡ್ ನನ್ನು ಆತನ ಸ್ನೇಹಿತರು “ಪ್ರಿನ್ಸ್ ಪ್ರಿನ್ಸ್” ಎಂದು ಕೂಗಿ ಪಾರ್ಟಿಯಲ್ಲಿ ನೆರೆದಿದ್ದ ಯುವಕ ಯುವತಿಯರ ಮುಂದೇ ಪ್ರತಿಷ್ಠೆ ತೋರಿಸುತ್ತಿದ್ದರು ಎನ್ನಲಾಗಿತ್ತು. ಇದನ್ನೂ ಓದಿ: ಕರ್ನಾಟಕ ರಣಜಿ ಆಟಗಾರನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ರೌಡಿ ನಲಪಾಡ್!
ಈ ಸಂದರ್ಭದಲ್ಲಿ ಗಾಯಗೊಂಡಿದ್ದ ವಿದ್ವತ್ ಕಾಲು ಚಾಚಿ ಕುಳಿತ್ತಿದ್ದರು. ಇದನ್ನು ಕಂಡ ನಲಪಾಡ್ ನನ್ನ ಮುಂದೆ ದರ್ಪದಿಂದ ಕಾಲು ಚಾಚಿಕೊಂಡು ಕೂತಿದ್ದೀಯಾ ಎಂದು ವಿದ್ವತ್ ಮೇಲೆ ಜಗಳಕ್ಕೆ ನಿಂತಿದ್ದಾನೆ. ಅನಂತರ ಕ್ಷಮೆ ಕೇಳುವಂತೆ ಹೇಳಿದ್ದಕ್ಕೆ ವಿದ್ವತ್ ನಿರಾಕರಿಸಿದ್ದಾರೆ. ಇದರಿದ ರೊಚ್ಚಿಗೆದ್ದ ನಲಪಾಡ್ ಮೊದಲು ವಿದ್ವತ್ ಹೊಟ್ಟೆ ಮತ್ತು ಮುಖದ ಭಾಗಕ್ಕೆ ಏಟು ಹೊಡೆದಿದ್ದಾನೆ. ನಲಪಾಡ್ ಹೊಡೆದ ಬಳಿಕ ಆತನ ಗ್ಯಾಂಗ್ ನವರು ವಿದ್ವತ್ ಮೇಲೆ ಮನಸೋ ಇಚ್ಚೇ ಹಲ್ಲೆ ನಡೆಸಿದ್ದಾರೆ. ಪಾರ್ಟಿಯಲ್ಲಿ ಹಲ್ಲೆ ನಡೆಸುವ ವೇಳೆ ಸಾಕಷ್ಟು ಜನ ಅಲ್ಲಿ ನೆರೆದಿದ್ದರೂ ಯಾರು ಗಲಾಟೆ ತಡೆಯುವ ಪ್ರಯತ್ನ ನಡೆಸಲಿಲ್ಲ ಎನ್ನುವ ಮಾಹಿತಿ ಲಭ್ಯವಾಗಿತ್ತು. ಇದನ್ನೂ ಓದಿ: ನಲಪಾಡ್‍ಗೆ ಜೈಲೇ ಗತಿ: ಆರೋಪಿಯ ಪರ ವಕೀಲರ ವಾದ ಏನಿತ್ತು? ಕೋರ್ಟ್ ಕಲಾಪದ ಡಿಟೇಲ್ ಇಲ್ಲಿದೆ
ನಲಪಾಡ್ ಮೇಲೆ ಯಾವೆಲ್ಲ ಕೇಸ್ ಹಾಕಲಾಗಿದೆ?
ಐಪಿಸಿ ಸೆಕ್ಷನ್ 307(ಕೊಲೆ ಯತ್ನ) ಜಾಮೀನು ರಹಿತ ಕೇಸಾಗಿದ್ದು ಉಳಿದ ಸೆಕ್ಷನ್ ಗಳಾದ 341(ಅಕ್ರಮ ಬಂಧನ), 504(ಅವ್ಯಾಚ್ಯ ಶಬ್ಧಗಳಿಂದ ನಿಂದನೆ), 143, 144- 146, 147, 149 (ಅಕ್ರಮ ಗುಂಪುಗಾರಿಕೆ), 326(ಗಂಭೀರ ಗಾಯ), 506 ಬಿ (ಪ್ರಾಣಬೆದರಿಕೆ) ಜಾಮೀನು ಸಿಗುವ ಕೇಸುಗಳಾಗಿವೆ.
https://www.youtube.com/watch?v=B-erXK9nl1M
https://www.youtube.com/watch?v=TIPtfcxi6O4