ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆ ಎಸ್.ಡಿಎಂ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಡಾ. ಯಶೋವರ್ಮ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
Advertisement
ಉಜಿರೆ ಎಸ್.ಡಿ.ಎಂ ಪದವಿ ಕಾಲೇಜಿನ ಪ್ರಾಚಾರ್ಯರಾಗಿ ಹಲವು ವರ್ಷ ಅವರು ಸೇವೆ ಸಲ್ಲಿಸಿದ್ದರು. ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಹಲವಾರು ಸಮ್ಮೇಳನಗಳನ್ನು ನಡೆಸಿದ್ದರು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಶಾಂತನಾದ ವರುಣ, ತಗ್ಗಿದ ಪ್ರವಾಹ – ಚಿಕ್ಕಬಳ್ಳಾಪುರದ ಡ್ಯಾಮ್‍ನಲ್ಲಿ ಯುವಕನ ಕೋತಿಯಾಟ
Advertisement
ಮೃತರ ಆತ್ಮಕ್ಕೆ ಶಾಂತಿ ಲಭಿಸಲಿ. ದುಃಖತಪ್ತ ಕುಟುಂಬ, ಶಿಷ್ಯರು ಹಾಗೂ ಅಭಿಮಾನಿಗಳಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು ಪರಮಾತ್ಮನು ನೀಡಲಿ ಎಂದು ಅವರು ಪ್ರಾರ್ಥಿಸಿದ್ದಾರೆ.
Advertisement
Advertisement
66 ವರ್ಷದ ಡಾ. ಬಿ ಯಶೋವರ್ಮ ಅವರು ಕಳೆದ ಕೆಲವು ತಿಂಗಳಿನಿಂದ ಅನಾರೋಗ್ಯದ ಹಿನ್ನೆಲೆಯಲ್ಲಿ ಸಿಂಗಾಪುರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಭಾನುವಾರ ಮಧ್ಯರಾತ್ರಿ ಚಿಕಿತ್ಸೆ ಫಲಿಸದೆ ನಿಧರಾಗಿದ್ದಾರೆ. ಇದನ್ನೂ ಓದಿ: ಮದರಸಾದಲ್ಲಿ ಓದಿದ ಬಳಿಕ ಡಾಕ್ಟರ್, ಇಂಜಿನಿಯರ್ ಆಗಲು ಸಾಧ್ಯವಿಲ್ಲ: ಹಿಮಂತ್ ಬಿಸ್ವಾ ಶರ್ಮಾ
ಯಶೋವರ್ಮ ಅವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಎಸ್‍ಡಿಎಂ ಎಜುಕೇಶನ್ ಸೊಸೈಟಿ ಕಾರ್ಯದರ್ಶಿಯಾಗಿದ್ದರು. ಇವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಪತ್ನಿ, ಡಾ. ಹೇಮಾವರಿ ಹೆಗ್ಗಡೆಯವರ ಸಹೋದರರಾಗಿದ್ದಾರೆ.