ಬೆಂಗಳೂರು: ವಿಜಯೇಂದ್ರಗೆ ಮುಂದಿನ ವಿಧಾನಸಭೆ ಚುನಾವಣೆಗೆ ಟಿಕೆಟ್ ಸಿಗುವ ಸುಳಿವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್‍ಗೆ ವಿಜಯೇಂದ್ರ ಹೆಸರೂ ಶಿಫಾರಸು ಮಾಡಲಾಗಿತ್ತು. ಆದರೆ ವಿಜಯೇಂದ್ರಗೆ ಬೇರೆ ಬೇರೆ ಅವಕಾಶಗಳು ಇರುವುದರಿಂದ ವಿಜಯೇಂದ್ರಗೆ ಟಿಕೆಟ್ ಮಿಸ್ ಆಗಿದೆ ಎಂದು ತಿಳಿಸಿದರು.
ಇಂದು ವಿಧಾನ ಪರಿಷತ್‍ಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಹೈಕಮಾಂಡ್ ಘೋಷಿಸಿದೆ. ಪರಿಷತ್ ಪ್ರವೇಶ ಪಡೆದು ಸಂಪುಟದಲ್ಲಿ ಅವಕಾಶ ಗಿಟ್ಟಿಸಿಕೊಳ್ಳಬೇಕೆಂಬ ಬಿ.ವೈ.ವಿಜಯೇಂದ್ರ ಅವರಿಗೆ ಅವಕಾಶ ದೊರೆತಿರಲಿಲ್ಲ. ಇದಕ್ಕೆ ಪ್ರತಿಕ್ರಿಯಿಸಿದ ಕಟಿಲ್, ವಿಜಯೇಂದ್ರಗೆ ಬೇರೆ ಬೇರೆ ಅವಕಾಶಗಳು ಇವೆ. ಅವರು ಪಕ್ಷದ ಉಪಾಧ್ಯಕ್ಷರು ಆಗಿದ್ದಾರೆ. ವಿಧಾನ ಪರಿಷತ್‍ಗೆ ಟಿಕೆಟ್ ಕೈತಪ್ಪಿರುವುದು ವರಿಷ್ಠರ ತೀರ್ಮಾನವಾಗಿದೆ ಎಂದು ಸಮರ್ಥಿಸಿಕೊಂಡರು. ಇದನ್ನೂ ಓದಿ: ಬಿಜೆಪಿ ಪರಿಷತ್ ಪಟ್ಟಿ ಪ್ರಕಟ – ಲಕ್ಷ್ಮಣ ಸವದಿಗೆ ಟಿಕೆಟ್
ಲಿಂಗರಾಜ ಪಾಟೀಲ್, ಮಂಜುಳಾಗೆ ಟಿಕೆಟ್ ತಪ್ಪಿದ ವಿಚಾರವಾಗಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಅವರ ಹೆಸರನ್ನು ಪರಿಗಣಿಸಲಾಗುವುದು ಎಂದರು. ಇದನ್ನೂ ಓದಿ: ವಿಜಯೇಂದ್ರಗೆ ಶಾಕ್ – ಮೇ 20ರಂದೇ ಸುಳಿವು ನೀಡಿದ್ದ ಪ್ರಧಾನಿ ಮೋದಿ