ಹಾವೇರಿ : ದೇಶದಲ್ಲಿ ಭ್ರಷ್ಟಾಚಾರವನ್ನು ಪ್ರಾರಂಭ ಮಾಡಿದ್ದೆ ಕಾಂಗ್ರೆಸ್ (Congress). ಭ್ರಷ್ಟಾಚಾರದ ಒಂದು ಫಲಾನುಭವಿ ರಾಹುಲ್ ಗಾಂಧಿಯಾಗಿದ್ದು, (Rahul Gandhi) ಅದಕ್ಕೋಸ್ಕರ ಬೇಲ್‌ನಲ್ಲಿದ್ದಾರೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ (Nalin Kumar Kateel) ವಾಗ್ದಾಳಿ ನಡೆಸಿದರು.
ಹಾವೇರಿಯ ಹುಕ್ಕೇರಿಮಠದ ಸದಾಶಿವ ಶ್ರೀ ಆಶೀರ್ವಾದ ಪಡೆದು ಮಾತನಾಡಿದ ಅವರು, ದೇಶದಲ್ಲಿ ಭ್ರಷ್ಟಾಚಾರವನ್ನು ಪ್ರಾರಂಭ ಮಾಡಿದ್ದೆ ಈ ರಾಹುಲ್ ಗಾಂಧಿಯವರ ತಾತ. ಭಯೋತ್ಪಾದನೆಯ ಇನ್ನೊಂದು ಹೆಸರು ಕಾಂಗ್ರೆಸ್ಸೇ ಆಗಿದೆ ಎಂದರು.
ಎಸ್ಸಿ ಮತ್ತು ಎಸ್‍ಟಿ ಮೀಸಲಾತಿ ಹೆಚ್ಚಳ ಮೂಗಿಗೆ ತುಪ್ಪ ಸವರೋ ಕೆಲಸ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ಅವರು ಬಹುಮತ ಪಡೆದು ಐದು ವರ್ಷ ಮುಖ್ಯಮಂತ್ರಿ ಆಗಿದ್ದರು. ಅಷ್ಟೇ ಅಲ್ಲದೇ ಅವರು ಅಹಿಂದ್ ಹೋರಾಟ ಮಾಡಿ ಆ ಕೋಟಾದ ಭೀಕ್ಷೆಯಲ್ಲಿ ಮುಖ್ಯಮಂತ್ರಿ ಆಗಿದ್ದರು. ಆದರೂ ಆಗ ಹಿಂದುಳಿದ ಸಮಾಜಗಳಿಗೆ ನ್ಯಾಯ ಕೊಡದಿದ್ದವರು, ಈಗ ಮೀಸಲಾತಿ ಕೊಟ್ಟಾಗ ಅಸಮಾಧಾನದ ಮಾತನಾಡುತ್ತಾರೆ ಎಂದು ಕಿಡಿಕಾರಿದರು.
ಬಿಜೆಪಿ ಸರ್ಕಾರವು ಎರಡು ಸಮುದಾಯದ ಬೇಡಿಕೆ ಏನಿತ್ತು ಎಂಬದನ್ನು ಅರಿತು ಅದನ್ನು ಈಡೇರಿಸುವ ಕೆಲಸವನ್ನು ಮಾಡಿದೆ. ಇನ್ನೂ ಈ ರೀತಿಯ ಹತ್ತಾರು ಬೇರೆ ಬೇರೆ ವಿಚಾರಗಳಿವೆ. ಅದನ್ನು ಬಿಜೆಪಿ ಸರ್ಕಾರ ಈಡೇರಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಶಿಕ್ಷಕರ ನೇಮಕಾತಿ ಹಗರಣ- ಮತ್ತೋರ್ವ ಟಿಎಂಸಿ ಶಾಸಕ ಬಂಧನ
ಈ ವೇಳೆ ಜನಸಂಕಲ್ಪ ಯಾತ್ರೆಯ ಬಗ್ಗೆ ಮಾತನಾಡಿದ ಅವರು, ಎರಡು ತಂಡಗಳು ಮುಂದಿನ ಚುನಾವಣೆ ದೃಷ್ಟಿಯಿಂದ ಕಾರ್ಯಕರ್ತರನ್ನು ಗಮನದಲ್ಲಿಟ್ಟುಕೊಂಡು ಪ್ರವಾಸ ಮಾಡುತ್ತಿದ್ದೇವೆ. ಒಂದು ಕಡೆ ಮಾಜಿ ಸಿಎಂ ಯಡಿಯೂರಪ್ಪನವರು ಮತ್ತೊಂದು ಕಡೆ ನಾನು ಪ್ರವಾಸ ಆರಂಭಿಸಿದ್ದೇವೆ. ಚುನಾವಣೆ ಹೇಗೆ ಎದುರಿಸಬೇಕು ಎಂಬುದರ ಕುರಿತು ಬಿಎಲ್‍ಎ2 ಹಾಗೂ ಬೂತ್ ಅಧ್ಯಕ್ಷರ ಜೊತೆ ಮಾತುಕತೆ ಮಾಡುತ್ತಿದ್ದೇವೆ. ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಕೆಲಸವನ್ನು ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಉಗ್ರ ಸಂಘಟನೆಗೆ ಬೆಂಬಲ ಆರೋಪ – ಪ್ರೊಫೆಸರ್ ಮನೆ ಮೇಲೆ NIA ದಾಳಿ