ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಯೋಜನೆಗಳನ್ನು ವಿಳಂಬಕ್ಕೆ ಆಸ್ಪದವಿಲ್ಲದಂತೆ ಪೂರ್ಣಗೊಳಿಸಲು ಸಂಬಂಧಿಸಿದ ಅಧಿಕಾರಿಗಳು ಶ್ರಮಿಸಬೇಕು ಎಂದು ದ.ಕ ಸಂಸದ ನಳೀನ್ ಕುಮಾರ್ ಕಟೀಲ್ ಅವರು ಸೂಚಿಸಿದ್ದಾರೆ.
ಇಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಅನುಷ್ಠಾನ ಕುರಿತಂತೆ ಹಮ್ಮಿಕೊಳ್ಳಲಾಗಿದ್ದ, ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಡ್ಡಹೊಳೆ-ಪೆರಿಯಶಾಂತಿ, ಪೆರಿಯಶಾಂತಿ-ಬಂಟ್ವಾಳ ಹಾಗೂ ಸನ್ನೂರು-ಬಿಕರ್ನಕಟ್ಟೆ ವ್ಯಾಪ್ತಿಯ ರಸ್ತೆ ನಿರ್ಮಾಣ ಯೋಜನೆಗಳನ್ನು ಕೈಗೊಳ್ಳಲಾಗಿದ್ದು,ಈ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಿ,ಸಾರ್ವಜನಿಕ ಸಂಚಾರಕ್ಕೆ ಅವಕಾಶ ಮಾಡಿ ಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದನ್ನೂ ಓದಿ: ಕೃಷಿಕರ ಮಗಳಾಗಿದ್ದರಿಂದ ನನಗೆ ಕೃಷಿ ಖಾತೆ ಸಿಕ್ಕಿದೆ: ಶೋಭಾ ಕರಂದ್ಲಾಜೆ
Advertisement
Advertisement
ಆಗಾಗ ಸಭೆ ನಡೆಸಿ, ಯೋಜನೆ ಅನುಷ್ಠಾನದಲ್ಲಿ ಆದ ಪ್ರಗತಿಯ ಕುರಿತು ಚರ್ಚಿಸಬೇಕು. ಈ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ತಿರುವು ರಸ್ತೆಗಳನ್ನು ಗುರುತಿಸಿ, ಆ ಪ್ರದೇಶಗಳಲ್ಲಿ ಸುರಕ್ಷತಾ ಕ್ರಮಗಳನ್ನು ಅಳವಡಿಸಬೇಕು ಎಂದರು. ಇದನ್ನೂ ಓದಿ: ಮನೆ ಬಾಗಿಲಲ್ಲೇ ಪಾಲಿಟೆಕ್ನಿಕ್ ಕೋರ್ಸ್‍ಗೆ ದಾಖಲಾದ ವಿದ್ಯಾರ್ಥಿಗೆ ಪೂರ್ಣ ಉಚಿತ ಶಿಕ್ಷಣ: ಅಶ್ವಥ್ ನಾರಾಯ
Advertisement
ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರ್ಗಿ ಮಹಾನಗರ ಪಾಲಿಕೆಯಲ್ಲಿ ಮತದಾನ ಮಾಡಿದ ಮತದಾರ ಬಂಧುಗಳಿಗೆ, ಪಕ್ಷದ ಗೆಲುವಿಗೆ
ಅರ್ಹನಿಶಿ ದುಡಿದ ಮುಖಂಡರಿಗೆ, ಕಾರ್ಯಕರ್ತರಿಗೆ ಧನ್ಯವಾದಗಳು.
— Nalinkumar Kateel (@nalinkateel) September 3, 2021
Advertisement
ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಶಿಶು ಮೋಹನ್, ಯೋಜನಾ ನಿರ್ದೇಶಕ ದೀಪಕ್ ಕುಮಾರ್, ಎಸ್.ಎಂ. ಔತಾಡೆ ನಿರ್ಮಾಣ ಕಂಪನಿಯ ಯೋಜನಾ ನಿರ್ದೇಶಕ ಮಹೇಂದ್ರ ರೆಡ್ಡಿ, ದಿಲೀಪ್ ಬಿಲ್ಡರ್ಸ್‍ನ ರತ್ನಾಕರ ಸಭೆಯಲ್ಲಿದ್ದರು.ಇದನ್ನೂ ಓದಿ: ಮಕ್ಕಳೊಂದಿಗೆ ತವರಿಗೆ ಹೊರಟ ಕರೀನಾ