ಬೆಂಗಳೂರು: ಪಕ್ಷದಲ್ಲಿ ತಲೆಗೊಬ್ಬ ನಾಯಕರು ನಾಲಿಗೆ ಹರಿಬಿಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಕೊನೆಗೂ ಮಧ್ಯಪ್ರವೇಶ ಮಾಡಿದ್ದಾರೆ.
ವಿಧಾನಸಭೆ ವಿರೋಧ ಪಕ್ಷದ ನಾಯಕನ ಸ್ಥಾನ, ಪಕ್ಷದ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ನೇಮಕ ಕುರಿತು ಪಕ್ಷದ ನಾಯಕರು ಹೇಳಿಕೆಗಳನ್ನು ನೀಡಿ ಪಕ್ಷದ ಘನತೆಗೆ ಧಕ್ಕೆ ತರಬಾರದು ಎಂದು ಕಟೀಲ್ ಸೂಚಿಸಿದ್ದಾರೆ.
Advertisement
Advertisement
ವಿಪಕ್ಷ ನಾಯಕನ ಸ್ಥಾನ ಮತ್ತಿತರ ಹುದ್ದೆಗೆ ಸಂಬಂಧಿಸಿ ಪಕ್ಷದ ಕೇಂದ್ರ ಸಂಸದೀಯ ಮಂಡಳಿಯು ಸೂಕ್ತ ಸಮಯದಲ್ಲಿ ಸಮರ್ಥ ನಿರ್ಧಾರವನ್ನು ಪ್ರಕಟಿಸಲಿದೆ. ಪಕ್ಷದ ಕೆಲವು ನಾಯಕರು ಈ ನಡುವೆ ಮಾಧ್ಯಮಗಳ ಮುಂದೆ ವಿವಿಧ ಹುದ್ದೆ ಕುರಿತು ಆಕಾಂಕ್ಷೆ ವ್ಯಕ್ತಪಡಿಸುವುದು ಗಮನಕ್ಕೆ ಬಂದಿದೆ. ಅಲ್ಲದೆ ಪಕ್ಷದ ಸಭೆಗಳಲ್ಲಿ ಈ ವಿಷಯವಾಗಿ ಚರ್ಚಿಸುತ್ತಿರುವುದು ಸರಿಯಲ್ಲ ಎಂದು ಅವರು ತಿಳಿಸಿದ್ದಾರೆ.
Advertisement
Advertisement
ಪಕ್ಷದ ಘನತೆಗೆ ಧಕ್ಕೆ ಉಂಟಾಗದಂತೆ ನಾಯಕರು ನೋಡಿಕೊಳ್ಳಬೇಕು. ಪಕ್ಷದ ಆಂತರಿಕ ವಿಚಾರಗಳನ್ನು ಮಾಧ್ಯಮಗಳ ಮುಂದೆ ಚರ್ಚಿಸುವುದು ಸೂಕ್ತವಲ್ಲ ಎಂದು ಅವರು ಸೂಚಿಸಿದ್ದಾರೆ. ಇದನ್ನೂ ಓದಿ: ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ಸಮರ್ಥನಿದ್ದೇನೆ: ರೇಣುಕಾಚಾರ್ಯ