ಮಂಗಳೂರು: ರಾಜ್ಯದಲ್ಲಿ ಗೋ ಕಳ್ಳತನ ಮತ್ತು ಗೋ ಸಾಗಾಟದ ವಿರುದ್ಧ ಪೊಲೀಸ್ ಇಲಾಖೆ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಸಂಸದರಾದ ನಳಿನ್ ಕುಮಾರ್ ಕಟೀಲ್ ಹೇಳಿದರು.
Advertisement
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಇಂಧನ ಮತ್ತು ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸುನಿಲ್ ಕುಮಾರ್ ಅವರ ನೂತನ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಯಾತ್ಮಕ ಯುವ ಸಚಿವರಾದ ಸುನಿಲ್ ಕುಮಾರ್ ಅವರು ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದು, ಅವರ ಉಸ್ತುವಾರಿಯಲ್ಲಿ ಈಗಾಗಲೇ ಇಲಾಖೆಯಲ್ಲಿ ಹಲವಾರು ಪರಿವರ್ತನೆ ಹಾಗೂ ಸುಧಾರಣೆಯನ್ನು ತಂದಿದ್ದಾರೆ ಎಂದರು. ಇದನ್ನೂ ಓದಿ: ‘ಚುನವಿ ಹಿಂದೂ’ – ‘ಗಂಗಾ ಆರತಿ’ ಪೂಜೆಗೈದ ರಾಗಾ ವಿರುದ್ಧ ಬಿಜೆಪಿ ವ್ಯಂಗ್ಯ
Advertisement
ಇಂಧನ ಹಾಗೂ ಸಂಸ್ಕೃತಿ ಸಚಿವಾಲಯದಲ್ಲಿಯೂ ಕೂಡ ಅವರು ಕಾರ್ಯತತ್ಪರತೆಯನ್ನು ಜನತೆಗೆ ತೋರಿಸಿದ್ದಾರೆ. ಹಿರಿಯರ ಕನಸನ್ನು ನನಸು ಮಾಡಿದ್ದಾರೆ ಈ ಕ್ಷೇತ್ರವನ್ನು ಅಭಿವೃದ್ಧಿಯಲ್ಲಿ ಮುನ್ನಡೆಸುವಂತಹ ಸಾಮರಸ್ಯದ ಮುಖಾಂತರ ಈ ಕ್ಷೇತ್ರವನ್ನು ಒಂದು ಮಾದರಿ ಕ್ಷೇತ್ರವನ್ನಾಗಿ ಪರಿವರ್ತನೆ ಮಾಡುವ ಶಕ್ತಿ ಅವರಿಗೆ ಇದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
Advertisement
Advertisement
ಸುನಿಲ್ ಕುಮಾರ್ ಮಾತನಾಡಿ, ಜಿಲ್ಲೆಯ ಸಂಪೂರ್ಣ ಅಭಿವೃದ್ಧಿಯ ಹೊಣೆ ನನ್ನ ಮೇಲಿದೆ ಈ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಲು ಪ್ರಯತ್ನವನ್ನು ಮಾಡುತ್ತೇನೆ. ಜಿಲ್ಲೆಗೆ ಬೇಕಾದ ಎಲ್ಲಾ ರೀತಿಯ ಸವಲತ್ತುಗಳನ್ನು ಒದಗಿಸುವ ಕರ್ತವ್ಯ ನನ್ನದು. ಇದರೊಂದಿಗೆ ಜಿಲ್ಲೆಯನ್ನು ಒಂದು ಉತ್ತಮ ಜಿಲ್ಲೆಯನ್ನಾಗಿಸುವಲ್ಲಿ ಶ್ರಮಿಸುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಫೆ.19 ರಿಂದ 28ವರೆಗೆ ದ.ಕ ಜಿಲ್ಲೆಯಲ್ಲಿ ಕಡತ ವಿಲೇವಾರಿ, ಕಂದಾಯ ಮೇಳ
ಶಾಸಕರುಗಳಾದ ವೇದವ್ಯಾಸ ಕಾಮತ್, ವೈ. ಭರತ್ ಶೆಟ್ಟಿ, ಹರೀಶ್ ಪೂಂಜಾ, ರಾಜೇಶ್ ನಾಯ್ಕ್, ಮೇಯರ್ ಪ್ರೇಮಾನಂದ ಶೆಟ್ಟಿ, ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.