ಬೆಂಗಳೂರು: ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ. ಮುಂದಿನ 2023ರ ಚುನಾವಣೆ ವೇಳೆಗೂ ಬೊಮ್ಮಾಯಿಯವರೇ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಈ ಕುರಿತಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಂದಿನ 2023ರ ಚುನಾವಣೆ ವೇಳೆಗೂ ಬೊಮ್ಮಾಯಿಯವರೇ ಮುಖ್ಯಮಂತ್ರಿ ಆಗಿರುತ್ತಾರೆ. ಮುಖ್ಯಮಂತ್ರಿ ಬದಲಾವಣೆ ಕೇವಲ ಕಪೋಲಕಲ್ಪಿತ. ಬಿಜೆಪಿ ಸರ್ಕಾರದಲ್ಲಿ ಅರಾಜಕತೆ ಹುಟ್ಟುಹಾಕಲು ಇಂತಹ ಸುದ್ದಿ ಹರಡಿಸುತ್ತಾರೆ. ಮುಂದಿನ ಚುನಾವಣೆ ಸಾಮೂಹಿಕ ನಾಯಕತ್ವದಲ್ಲಿ ಎದುರಿಸುತ್ತೇವೆ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ. ಸಿಎಂಗೆ ಯಾವುದೇ ಅನಾರೋಗ್ಯ ಇಲ್ಲ, ಕಾಲು ನೋವು ಮಾತ್ರ ಇದೆ. ಅದಕ್ಕೆ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಬೊಮ್ಮಾಯಿ ಅವರು ವಿದೇಶಕ್ಕೂ ಹೋಗಲ್ಲ, ಅವರ ಕಾಲಿನ ಸಮಸ್ಯೆಗೆ ಇಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳುತ್ತಾರೆ ಎಂದು ಹೇಳಿದರು. ಇದನ್ನೂ ಓದಿ: ಮೋದಿ ಫೋಬಿಯಾ ಎನ್ನುವಂತೆ ಕಾಂಗ್ರೆಸ್‍ನವರು ನಡೆದುಕೊಳ್ಳುತ್ತಿದ್ದಾರೆ: ಪ್ರಹ್ಲಾದ್ ಜೋಶಿ
Advertisement
Advertisement
ಇದೇ ವೇಳೆ ಸಚಿವ ಸಂಪುಟ ಪುನರ್ ರಚನೆ ಬೊಮ್ಮಾಯಿ ಅವರ ವಿವೇಚನೆಗೆ ಬಿಟ್ಟ ವಿಚಾರ. ಒಂದು ವೇಳೆ ಪುನರ್ ರಚನೆ ಆಗುವುದಾದರೆ ನಮ್ಮ ಜೊತೆ ಚರ್ಚೆ ಮಾಡುತ್ತಾರೆ. ಮರುದಿನ ಅದರ ಬಗ್ಗೆ ನಿಮಗೆ ತಿಳಿಸುತ್ತೇನೆ ಎಂದರು. ಇದನ್ನೂ ಓದಿ: ಮಹಿಳೆಯಿಂದ ವಂಚನೆ – ಪೊಲೀಸ್ ಠಾಣೆ ಮೆಟ್ಟಿಲೇರಿದ ನಿರ್ದೇಶಕ ನಾಗಶೇಖರ್
Advertisement
Advertisement
ಮತಾಂತರದಿಂದ ಸಾಮಾಜಿಕ ಕಲಹ ಆಗುತ್ತಿತ್ತು. ಅದಕ್ಕೆ ತಡೆಯೊಡ್ಡಲು ಕಾಯ್ದೆ ಜಾರಿ ಮಾಡಲಾಗಿದೆ. ಬಡತನ, ನಿರುದ್ಯೋಗದಿಂದ ನಗರದಲ್ಲಿ ಇದ್ದ ಮತಾಂತರ ಹಳ್ಳಿಗೂ ವ್ಯಾಪಿಸಿದೆ. ಹಾಗಾಗಿ ಬೊಮ್ಮಾಯಿ ಒಳ್ಳೆ ನಿರ್ಧಾರ ಮಾಡಿದ್ದಾರೆ. ಕಾಂಗ್ರೆಸ್ ವಿರೋಧ ಮಾಡುವುದು ಸಹಜ. ಸಿದ್ದರಾಮಣ್ಣನೇ ಮತಾಂತರ ನಿಷೇಧ ಕಾಯ್ದೆಗೆ ಸಹಿ ಹಾಕಿದ್ದಾರೆ. ಅಧಿಕಾರ ಇದ್ದಾಗ ಒಂದು, ಇಲ್ಲದಾಗ ಒಂದು. ಅವರಿಗೆ ಮರೆವು. ಅರಳು, ಮರಳು ಇಲ್ಲಿ ಬಂದು ವಿರೋಧ ಮಾಡುತ್ತಾರೆ. ಕಾಂಗ್ರೆಸ್ ಶಾಸಕರೇ ನಾವು ತಂದ ಕಾಯ್ದೆ ಪರವಾಗಿದ್ದಾರೆ ಎಂದು ಟಾಂಗ್ ನೀಡಿದರು.