– ಹಿಂದೂಗಳ ರಕ್ಷಣೆಗೆ ಹೊರಟವರನ್ನ ಹತ್ಯೆ ಮಾಡಲಾಗ್ತಿದೆ
– ಕಾಶ್ಮೀರದ ಉಗ್ರರ ಚಟುವಟಿಕೆಗೂ, ಮಂಗಳೂರಿನ ಘಟನೆಗೂ ವ್ಯತ್ಯಾಸ ಇಲ್ಲ; ಕಿಡಿ
ಉಡುಪಿ: ಕಾಂಗ್ರೆಸ್ ಸರ್ಕಾರದಲ್ಲಿರುವ ಎಲ್ಲಾ ಮಂತ್ರಿಗಳು ರೌಡಿಗಳೇ. ಜೈಲಿಗೆ ಹೋಗಿ ಬಂದವರೇ ಜಾಸ್ತಿ ಇದ್ದಾರೆ. ಸಿದ್ದರಾಮಯ್ಯ(Siddaramaiah) ಹಾಗೂ ಡಿಕೆಶಿಯಿಂದ ಆರಂಭಿಸಿ ಎಲ್ಲರ ಮೇಲೆ ಕೇಸ್ ಇದೆ. ಹಾಗಿದ್ದರೆ ಸರ್ಕಾರದಲ್ಲಿ ಇರುವವರೆಲ್ಲರೂ ರೌಡಿಗಳಾ ಉತ್ತರ ಕೊಡಿ ಎಂದು ಬಿಜೆಪಿ ನಾಯಕ ನಳಿನ್ ಕುಮಾರ್ ಕಟೀಲ್ (Nalin Kumar Kateel) ವಾಗ್ದಾಳಿ ನಡೆಸಿದರು.
ಉಡುಪಿಯಲ್ಲಿ(Udupi) ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಸುಹಾಸ್ ಶೆಟ್ಟಿ(Suhas Shetty) ಮೇಲೆ ಎರಡು ವರ್ಷದಿಂದ ಯಾವುದೇ ಕೇಸ್ ಇಲ್ಲ. ಯಾವುದೇ ಘಟನೆಗಳಲ್ಲಿ ಸುಹಾಸ್ ಭಾಗಿಯಾಗಿಲ್ಲ. ರೌಡಿಶೀಟರ್ ಎಂದು ತೀರ್ಮಾನ ಮಾಡಬೇಕಾಗಿರೋದು ನ್ಯಾಯಾಲಯ, ಗೃಹ ಸಚಿವರಲ್ಲ. ಹಿಂದೂ ಸಂಘಟನೆಯಲ್ಲಿ ಕೆಲಸ ಮಾಡುತ್ತಾನೆ ಎಂಬ ಕಾರಣಕ್ಕೆ ಕೊಲೆಯಾಗಿದೆ. ಹಿಂದೂಗಳ ರಕ್ಷಣೆ ಮಾಡಲು ಹೊರಟವರನ್ನು ಹತ್ಯೆ ಮಾಡುತ್ತಿದ್ದಾರೆ. ಈಗಾಗಲೇ ಟಾರ್ಗೆಟ್ ಗ್ರೂಪ್ ರಚನೆಯಾಗಿದೆ. ಟಾರ್ಗೆಟ್ ಗ್ರೂಪಿನ ಒಂದು ಅಂಶದ ಕೆಲಸ ಆರಂಭವಾಗಿದೆ. ಸುಹಾಸ್ ಮೇಲೆ ಗೂಬೆಕೂರಿಸುವ ಕೆಲಸವನ್ನು ಬಿಟ್ಟು, ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಯುದ್ಧ ನಡೆದರೆ ನಾವು ಭಾರತದ ಜೊತೆ ನಿಲ್ಲಬೇಕು – ಪಾಕ್‌ನಲ್ಲಿರುವ ಪಶ್ತೂನ್ ಮುಸ್ಲಿಮರಿಗೆ ಕರೆ
ಹಿಂದೂಗಳನ್ನ ಬಂಧಿಸಲು ಟಾಸ್ಕ್ ಫೋರ್ಸ್
ಕರಾವಳಿಯಲ್ಲಿ ಕೋಮು ನಿಗ್ರಹದಳ ರಚನೆ ವಿಚಾರವಾಗಿ ಪ್ರತಿಕ್ರಿಯಿಸಿ, ಈ ಸರ್ಕಾರದ ಯೋಚನೆಯೇ ತಪ್ಪಾಗಿದೆ. ಇದು ಹಿಂದೂಗಳ ವಿರೋಧ ನೀತಿಗೆ ರಚನೆಯಾಗುತ್ತಿರುವ ಫೋರ್ಸ್. ಹಿಂದೂಗಳನ್ನು ಬಂಧಿಸಲು ಈ ದಳ ರಚಿಸುತ್ತಾರೆ. ಎಲ್ಲಾ ಸಮುದಾಯಗಳಿಗೆ ಸರಿಯಾದ ನ್ಯಾಯ ಕೊಡುವ ದಳವನ್ನು ಜಾರಿಗೆ ತರಲಿ. ಕಾಂಗ್ರೆಸ್ ಸರ್ಕಾರದ ಈ ದಳ ಒಂದೇ ಸಮುದಾಯಕ್ಕೆ ಸೀಮಿತವಾಗಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಕಾಶ್ಮೀರದಲ್ಲಿ 2 ಜಲವಿದ್ಯುತ್ ಯೋಜನೆಗಳಿಗೆ ಚಾಲನೆ – ಪಾಕ್‌ಗೆ ಶಾಕ್
ಶರಣ್ ಪಂಪ್‌ವೆಲ್, ಭರತ್ ಕುಮ್ಡೇಲ್‌ಗೆ ಬೆದರಿಕೆ ವಿಚಾರವಾಗಿ ಮಾತನಾಡಿದ ಅವರು, ಈ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಇದೆಯಾ? ತನಿಖೆ, ಬಂಧನ ಮಾಡುವ ಯಾವುದೇ ಪ್ರಕ್ರಿಯೆಗಳು ನಡೆಯುತ್ತಿಲ್ಲ. ಇಬ್ಬರೂ ಕಾರ್ಯಕರ್ತರಿಗೆ ಪೊಲೀಸರನ್ನು ನಿಯೋಜನೆ ಮಾಡಿ, ರಕ್ಷಣೆ ಮಾಡಬೇಕು. ಧಮ್ಕಿ ಹಾಕಿದವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ವಕ್ಫ್ ತಿದ್ದುಪಡಿ ಕಾಯ್ದೆ – ಮುಂದಿನ ಸಿಜೆಐ ಪೀಠಕ್ಕೆ ಅರ್ಜಿ ವರ್ಗಾವಣೆ
ಸಿದ್ದರಾಮಯ್ಯ ಅವರ ಆಡಳಿತ ಇದ್ದಾಗ ಹಿಂದೂಗಳ ಸರಣಿ ಕಗ್ಗೊಲೆಗಳು ನಡೆಯುತ್ತದೆ. ಹಿಂದೂಗಳ ಮೇಲೆ ನಿರಂತರ ದಾಳಿ ಆಗುತ್ತಿದೆ. ಪಾಕಿಸ್ತಾನ(Pakistan) ಧ್ವಜ ಹಿಡಿದರೆ, ಜಿಂದಾಬಾದ್ ಹೇಳಿದ್ದಕ್ಕೆ ಕೇಸ್ ಆಗಲ್ಲ. ಟ್ವೀಟ್ ಮೂಲಕ ಹಿಂದೂಗಳ ಹತ್ಯೆ ಮಾಡುವ ಎಚ್ಚರಿಕೆ ನಿರಂತರವಾಗಿ ನಡೆಯುತ್ತಿದೆ. ಕಾಶ್ಮೀರದ ಭಯೋತ್ಪಾದನಾ ಚಟುವಟಿಕೆಗೂ, ಮಂಗಳೂರಿನ ಚಟುವಟಿಕೆಗೂ ಯಾವ ವ್ಯತ್ಯಾಸವು ಇಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ರಾಜ್ಯದ ಜಾತಿ ಜನಗಣತಿ ವರದಿ ಬಗ್ಗೆ ಮೇ 9ಕ್ಕೆ ನಿರ್ಧಾರ – ಹೆಚ್.ಕೆ ಪಾಟೀಲ್
ಕಾನೂನು, ಜನರ ರಕ್ಷಣೆ ಎರಡರಲ್ಲೂ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಗೃಹ ಸಚಿವರ ಸಭೆಯಲ್ಲಿ ಶಾಸಕರಿಗೆ ಅವಕಾಶ ಇಲ್ಲ. ಆದರೆ ಮುಸ್ಲಿಂ ಪ್ರಮುಖರು ಬಂದು ಗಲಾಟೆಯನ್ನು ನಡೆಸಿದ್ದಾರೆ. ಇದಕ್ಕೆ ಯಾವ ಕ್ರಮ ಕೈಗೊಂಡಿದ್ದೀರಾ? ಗೃಹ ಸಚಿವರಿಗೆ ಭಯ ಹುಟ್ಟಿಸುವ ರೀತಿಯಲ್ಲಿ ಆಕ್ರಮಣ ನಡೆದಿದೆ. ರಾಜ್ಯದಲ್ಲಿ ಸರ್ಕಾರ ಇದೇಯೋ ಅಥವಾ ಸತ್ತು ಹೋಗಿದೆಯೋ ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ನಾಯಕರು(Congress Leaders) ಸುಹಾಸ್ ಮನೆಗೆ ಹೋಗಲು ತಡೆಯಿದೆ. ಕಾಂಗ್ರೆಸ್‌ನ ಮುಸ್ಲಿಂ ಮುಖಂಡರೊಬ್ಬರು ಸಾಮೂಹಿಕ ರಾಜೀನಾಮೆಯ ಎಚ್ಚರಿಕೆ ನೀಡಿದ್ದಾರೆ. ಇಂತಹ ರಾಜಕೀಯಕ್ಕೆ ಕಾಂಗ್ರೆಸ್ ತುಪ್ಪ ಸುರಿಯುತ್ತಿದೆ. ಸರ್ಕಾರ ಇರುವುದೇ ಹಿಂದೂ ಸಮಾಜದ ಧಮನಕ್ಕಾಗಿ ಎಂದು ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ಕೃಷ್ಣ ನ್ಯಾಯಾಧಿಕರಣದ ಮುಂದೆ ರಾಜ್ಯದ ಹಕ್ಕೋತ್ತಾಯ ಮಂಡನೆ – ಡಿಕೆಶಿ
ಹಿಂದೂ ಸಮಾಜ ಪರ ಇರುವ ಎಲ್ಲರ ಮೇಲೆ ದಾಳಿ ನಡೆಯುತ್ತಿದೆ. ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ಬೆದರಿಕೆ ಹಾಕಿದರೆ ಬಂಧಿಸುತ್ತಾರೆ. ಗೃಹ ಸಚಿವರ ಸಭೆಯಲ್ಲಿ ಧಮ್ಕಿ ಹಾಕಿದವರನ್ನು ಬಂಧಿಸಲು ತಾಕತ್ತಿಲ್ಲ. ಗುಂಡು ಹೊಡೆಯಿರಿ ಎಂದು ಹೇಳಿಲ್ಲ, ಬಂಧನ ಮಾಡಿ ಅಂತಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಚುನಾವಣಾ ಪ್ರಣಾಳಿಕೆಯಲ್ಲಿ ನಾವು ಘೋಷಿಸಿದ್ದಂತೆ ಒಳಮೀಸಲಾತಿ ಜಾರಿಗೆ ಬದ್ಧ: ಸಿದ್ದರಾಮಯ್ಯ
ಪಹಲ್ಗಾಮ್ ಘಟನೆಯನ್ನು(Pahalgam Terror Attack) ಕೇಂದ್ರ ಸರ್ಕಾರ ನಿಯಂತ್ರಣ ಮಾಡಿದೆ. ಪಾಕಿಸ್ತಾನ ಭಯಭೀತ ಆಗಿದೆ. ಸೇನೆಯು ಉಗ್ರರನ್ನು ಹುಡುಕಿ ಹೊಡೆಯುತ್ತಿದ್ದಾರೆ. 2014ರ ನಂತರ ಉಗ್ರರನ್ನು ಹತೋಟಿಯಲ್ಲಿಡುವ ಕೆಲಸ ನಡೆಯುತ್ತಿದೆ ಎಂದರು.