ಬೆಂಗಳೂರು: ಬಿಜೆಪಿ (BJP) ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ ಎಂದು ಸಂಸದ ನಳಿನ್ ಕುಮಾರ್ ಕಟೀಲ್ (Nalinkumar Katil) ಸ್ಪಷ್ಟನೆ ನೀಡಿದ್ದಾರೆ.
ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಕಟೀಲ್, ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು. ಬಳ್ಳಾರಿಯಲ್ಲಿ ವಿ. ಸೋಮಣ್ಣ (V. Somanna) ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಎಂದು ಪ್ರಕಟಿಸಿದ ಕುರಿತಾದ ಪ್ರಶ್ನೆಗೆ ಉತ್ತರಿಸುವ ವೇಳೆ ಸೋಲಿನ ನೈತಿಕ ಹೊಣೆ ಹೊರುತ್ತೇನೆ. ಸೋಲಿನ ಕಾರಣಗಳ ಕುರಿತಂತೆ ಪಕ್ಷದ ಹಿರಿಯರಿಗೆ ಮಾಹಿತಿ ನೀಡಿದ್ದೇನೆ. 4 ವರ್ಷಗಳಿಂದ ನಾನು ಅಧ್ಯಕ್ಷ ಸ್ಥಾನದಲ್ಲಿದ್ದೇನೆ ಎಂದು ತಿಳಿಸಿದ್ದೆ. ಪಕ್ಷದ ರಾಜ್ಯಾಧ್ಯಕ್ಷರ ನೇಮಕ ಕುರಿತಂತೆ ಪಕ್ಷವು ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ಸುದ್ದಿ ಬಿತ್ತರಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಹಸಿದವರ ಕೂಗಿಗೆ ಸಿದ್ದರಾಮಯ್ಯರ ಕಿವಿ ಯಾವಾಗಲೂ ತೆರೆದಿರುತ್ತದೆ: ನಾಡೋಜ ಹಂಪನಾ
Advertisement
Advertisement
ಈ ಮೂಲಕ ಒಂದೇ ದಿನದಲ್ಲಿ ಎರಡು ರೀತಿಯ ಹೇಳಿಕೆಗಳನ್ನು ಕೊಟ್ಟು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಚರ್ಚೆಗೆ ಗ್ರಾಸವಾಗಿದ್ದಾರೆ. ಶನಿವಾರ ಬೆಳಗ್ಗೆಯಷ್ಟೇ ಬಳ್ಳಾರಿಯಲ್ಲಿ ಮಾತಾಡಿದ್ದ ಅವರು, ವಿಧಾನಸಭೆ ಚುನಾವಣೆ ಸೋಲಿನ ನೈತಿಕ ಹೊಣೆ ಹೊತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ರಾಜೀನಾಮೆ ಪತ್ರ ಬರೆದಿರುವುದಾಗಿಯೂ, ಮೌಖಿಕವಾಗಿಯೂ ತಿಳಿಸಿರುವುದಾಗಿ ಹೇಳಿದ್ದರು. ಆದರೆ ಅವರ ಹೇಳಿಕೆ ಮಾಧ್ಯಮಗಳಲ್ಲಿ ದೊಡ್ಡ ಸುದ್ದಿಯಾಗುತ್ತಿದ್ದಂತೆ ಕಟೀಲ್ ಯೂಟರ್ನ್ ಹೊಡೆದಿದ್ದಾರೆ. ಇದನ್ನೂ ಓದಿ: ವ್ಹೀಲಿಂಗ್ ಮಾಡಿ ಶಾಲಾ – ಕಾಲೇಜು ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಮೂವರ ಬಂಧನ