ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೊರೊನಾ ಧೃಢವಾಗಿದ್ದು, ಈ ಬಗ್ಗೆ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಟ್ವಿಟ್ಟರ್ನಲ್ಲಿ ಏನಿದೆ?: ನನಗೆ ಕೋವಿಡ್ ದೃಢವಾಗಿದ್ದು, ಯಾವುದೇ ಲಕ್ಷಣಗಳಿಲ್ಲದೆ ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ತಿಳಿಸಿದ್ದಾರೆ.
Advertisement
ನನಗೆ ಕೋವಿಡ್ ದೃಢವಾಗಿದ್ದು, ಯಾವುದೇ ಲಕ್ಷಣಗಳಿಲ್ಲದೆ ಆರೋಗ್ಯವಾಗಿದ್ದೇನೆ.
ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ.
— Nalinkumar Kateel (@nalinkateel) January 10, 2022
Advertisement
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಹೆಚ್ಚಾಗುತ್ತಿದೆ. ಅಷ್ಟೇ ಅಲ್ಲದೇ ಜ. 7ರಂದು ಸಚಿವ ಆರ್. ಅಶೋಕ್ ಅವರಿಗೆ ಕೊರೊನಾ ದೃಢವಾಗಿತ್ತು. ಈ ಮಧ್ಯೆ ಸೋಂಕು ನಿಯಂತ್ರಿಸಲು ಸರ್ಕಾರ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳುವ ಕುರಿತು ಚಿಂತನೆ ನಡೆಸಿದ್ದು, ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಗಿನ ಜಾವ 5 ಗಂಟೆಯವರೆಗೂ ಈಗಾಗಲೇ ಕರ್ಫ್ಯೂವನ್ನು ವಿಧಿಸಿದೆ. ಇದನ್ನೂ ಓದಿ: ನನ್ನನ್ನು ನೋಡಿದ್ರೆ ಕೊರೊನಾ ಇದೆ ಅಂತ ಅನ್ನಿಸುತ್ತಾ?: ಡಿ.ಕೆ. ಶಿವಕುಮಾರ್