ಕಾಂಗ್ರೆಸ್ ನಾಯಕರಿಗೆ ರಾಜ್ಯದ ಅಭಿವೃದ್ಧಿಗಿಂತ ಸ್ವಪ್ರತಿಷ್ಟೆ ಮುಖ್ಯ: ಕಟೀಲ್

Public TV
3 Min Read
nalin kumar kateel

ಬೆಂಗಳೂರು: ಕಾಂಗ್ರೆಸ್ ನಾಯಕರಿಗೆ ರಾಜ್ಯದ ಅಭಿವೃದ್ಧಿಗಿಂತ ತಮ್ಮ ಸ್ವಪ್ರತಿಷ್ಟೆ ಮುಖ್ಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಈಶ್ವರಪ್ಪ ವಜಾಕ್ಕೆ ಒತ್ತಾಯಿಸಿ ಕಾಂಗ್ರೆಸ್ ಧರಣಿ ಹಿನ್ನೆಲೆ ಕಾಂಗ್ರೆಸ್ ನಾಯಕರ ವಿರುದ್ಧ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡುವ ಮೂಲಕ ವಾಗ್ದಾಳಿ ನಡೆಸಿದ್ದಾರೆ. ಸದನದಲ್ಲಿ ಆರೋಗ್ಯಪೂರ್ಣ ಚರ್ಚೆಯಿಂದ ಕಾಂಗ್ರೆಸ್ ಪಲಾಯನ ಮಾಡಿದೆ. ಕಾಂಗ್ರೆಸ್ ನಾಯಕರಿಗೆ ರಾಜ್ಯದ ಅಭಿವೃದ್ಧಿಗಿಂತ ತಮ್ಮ ಸ್ವಪ್ರತಿಷ್ಟೆ ಮುಖ್ಯವಾಗಿದೆ. ಕೋವಿಡ್ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಯಶಸ್ವಿ ಕ್ರಮಗಳು, ಅಭಿವೃದ್ಧಿ ಯೋಜನೆಗಳಿಂದ ಕಂಗೆಟ್ಟಿದೆ ಕಾಂಗ್ರೆಸ್ ವಿಷಯಾಂತರ ಮಾಡಲು ಧರಣಿಯ ನಾಟಕಕ್ಕೆ ಕೈ ಹಾಕಿರುವುದು ಸ್ಪಷ್ಟವಾಗಿದೆ ಎಂದಿದ್ದಾರೆ.

ಕಾಂಗ್ರೆಸ್ ಶಾಸಕರು ವಿಧಾನಸೌಧದಲ್ಲಿ ಮಲಗುವುದರಿಂದ, ಅವರು ಅದಕ್ಕೆ ಮಾತ್ರ ಲಾಯಕ್ ಎಂದು ರಾಜ್ಯದ ನಾಗರಿಕರಿಗೆ ಅನಿಸಿದೆ. ಕಾಂಗ್ರೆಸ್ ಶಾಸಕರನ್ನು ಆರಿಸಿ ಕಳುಹಿಸಿದ ಮತದಾರ ಇವರ ಬೇಜವಾಬ್ದಾರಿ ನಡೆಯಿಂದ ಭ್ರಮನಿರಸನಗೊಂಡಿದ್ದಾನೆ. ಕಾಂಗ್ರೆಸ್ ಸದನದಲ್ಲಿ ಜನರ ಪರವಾಗಿಲ್ಲ. ಸದನದ ಕಲಾಪಗಳಿಗೆ ಅಡ್ಡಿ ಮಾಡುವ ಮೂಲಕ ಜನರಿಗೆ ಅನ್ಯಾಯವೆಸಗಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ವಿರಾಟ್ ಅಭಿಮಾನಿಗಳಿಗಿಲ್ಲ ಗಡಿರೇಖೆ – ಪಾಕ್ ಕ್ರಿಕೆಟ್ ಲೀಗ್‍ನಲ್ಲಿ ರಾರಾಜಿಸಿದ ಕೊಹ್ಲಿ ಪೋಸ್ಟರ್

ಜನರ ದಿಕ್ಕು ತಪ್ಪಿಸಲು ಅಹೋರಾತ್ರಿ ನಿದ್ರಾ ಧರಣಿ. ಆ ಮೂಲಕ ಕಾಂಗ್ರೆಸ್ ಅನಗತ್ಯ ಕೆಲಸಕ್ಕೆ ಕೈ ಹಾಕಿದೆ. ಪಂಚರಾಜ್ಯಗಳ ಚುನಾವಣೆಯ ಫಲಿತಾಂಶದ ಬಳಿಕ, ರಾಜ್ಯದಲ್ಲಿಯೂ ಕಾಂಗ್ರೆಸನ್ನು ಶಾಶ್ವತ ನಿದ್ರೆಗೆ ಕಳುಹಿಸಲು ನಾಗರಿಕರು ಸಜ್ಜಾಗಿದ್ದಾರೆ. ಜನರ ವಿಶ್ವಾಸವನ್ನು ಕಳೆದುಕೊಂಡಿದೆ. ಕಾಂಗ್ರೆಸ್ ಈಗ ರಾಜ್ಯ ಸರ್ಕಾರದ ವಿರುದ್ಧ ಯಾವುದೇ ವಿಷಯ ಇಲ್ಲ ಎಂದಿದ್ದಾರೆ.

ಜವಾಬ್ದಾರಿಯುತ ವಿಪಕ್ಷ ಯಾವ ವಿಷಯಕ್ಕೆ ಹೋರಾಡುತ್ತೆ ಎಂದು ರಾಜ್ಯದ ಪ್ರಜ್ಞಾವಂತ ನಾಗರಿಕರು ಗಮನಿಸುತ್ತಾರೆ. ವಿವಾದವೇ ಇಲ್ಲದ ವಿಷಯಗಳಿಗೆ ಸದನದಲ್ಲಿ ಮಲಗುವುದರಿಂದ ರಾಜ್ಯದ ಜನತೆಗೆ ಏನು ಪ್ರಯೋಜನವಾಗುತ್ತೆ ಎನ್ನುವುದಕ್ಕೆ ಕಾಂಗ್ರೆಸ್ ಮುಖಂಡರ ಬಳಿ ಉತ್ತರ ಇಲ್ಲ. ಅನಗತ್ಯ ಧರಣಿ ಕಾಂಗ್ರೆಸ್ ಬೌದ್ಧಿಕ ದಿವಾಳಿಯಾಗಿರುವುದಕ್ಕೆ ಸಾಕ್ಷಿ ಎಂದು ಹೇಳಿದ್ದಾರೆ. ಇದನ್ನೂ ಓದಿ: Ranji Trophy: ಚೊಚ್ಚಲ ಪಂದ್ಯದಲ್ಲೇ ಶತಕ ಸಿಡಿಸಿ ಮಿಂಚಿದ ಯಶ್ ಧುಲ್

Share This Article
Leave a Comment

Leave a Reply

Your email address will not be published. Required fields are marked *