ಕಲಬುರಗಿ: ಬಿಜೆಪಿ ರಾಜ್ಯಧ್ಯಾಕ್ಷ ನಳಿನ್ ಕುಮಾರ್ ಕಟೀಲ್ ಒಬ್ಬ ಜೋಕರ್ ಅವರು ಏನು ಮಾತನಾಡುತ್ತಾರೋ ಅವರಿಗೆ ಗೊತ್ತಾಗಲ್ಲ ಎಂದು ಮಾಜಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಹೇಳಿದ್ದಾರೆ.
Advertisement
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ 23 ಸ್ಥಾನಗಳನ್ನು ಗೆದ್ದಿದ್ರೆ, ಬಿಜೆಪಿ 23 ಸ್ಥಾನಗಳನ್ನು ಗೆದ್ದಿದೆ. ಆದರೆ ಕಟೀಲ್ ನಮಗೆ ಬಹುಮತ ಸಿಕ್ಕಿದೆ ಎಂದು ಹೇಳಿದ್ದಾರೆ. ಯಕ್ಷಗಾನದಲ್ಲಿ ಹೇಗೆ ನಟನೆ ಮಾಡುತ್ತಾರೋ, ಹಾಗೆ ಕಟೀಲ್ ಕೂಡ ಭಾಷಣ ಮಾಡುತ್ತಾರೆ. ಪಾಲಿಕೆಯಲ್ಲಿ ಬಹುಮತ ಸಿಕ್ಕಿದೆ ಎಂದು ಹೇಗೆ ಅಂದುಕೊಳ್ಳುತ್ತಾರೋ ಗೊತ್ತಿಲ್ಲ. ಕಲಬುರಗಿ ಉತ್ತರ ಮತ್ತು ದಕ್ಷಿಣ ಕ್ಷೇತ್ರದಲ್ಲೂ ಸಹ ಕಾಂಗ್ರೆಸ್ ಪಾರುಪತ್ಯ ಮೆರದಿದೆ. ಹೊಸ ಸಿಎಂ ಬಂದ ಖುಷಿಯಲ್ಲಿ ಬಿಜೆಪಿಯವರು ಸಿಕ್ಕಾಪಟ್ಟೆ ಹಣ ಖರ್ಚು ಮಾಡುತ್ತಿದ್ದಾರೆ ಎಂದರು. ಇದನ್ನೂ ಓದಿ:ಹಿಂದೂ ದೇವಸ್ಥಾನ ಟಾರ್ಗೆಟ್ ಮಾಡಿ ಧ್ವಂಸ ಮಾಡಲಾಗುತ್ತಿದೆ: ಪ್ರತಾಪ್ ಸಿಂಹ
Advertisement
Advertisement
ಕಲಬುರಗಿ ಪಾಳಿಕೆಯಲ್ಲಿ ಜೆಡಿಎಸ್ ಜೆಡಿಎಸ್ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳಲಿದೆ. ಈ ಬಗ್ಗೆ ಜೆಡಿಎಸ್ ಕೂಡ ಒಲವು ವ್ಯಕ್ತಪಡಿಸಿದೆ. ಪಕ್ಷದ ಮಟ್ಟದಲ್ಲಿ ಇಂದು ಮೈತ್ರಿ ಬಗ್ಗೆ ಚರ್ಚೆ ನಡೆಯಲಿದೆ ಈ ಬಗ್ಗೆ ದೇವೆಗೌಡರ ಜೊತೆ ಮಲ್ಲಿಕಾರ್ಜುನ ಖರ್ಗೆ ಮಾತನಾಡಿದ್ದಾರೆ ಎಂದರು. ಇದನ್ನೂ ಓದಿ: ಸಾಮಾನ್ಯರ ಸಿಎಂ ಬೊಮ್ಮಾಯಿ: ಡಾ.ಕೆ ಸುಧಾಕರ್
Advertisement
ಪಾಲಿಕೆ ವಿಚಾರದಲ್ಲಿ ಡಿಕೆಶಿ, ಸಿದ್ದು ಸೈಲೆಂಟ್ ಆಗಿಲ್ಲ. ಕುಮಾರಸ್ವಾಮಿ ಜೊತೆ ಡಿಕೆಶಿ ನಿರಂತರ ಚರ್ಚೆ ನಡೆಸಿದ್ದಾರೆ. ಸ್ಥಳೀಯ ಜೆಡಿಎಸ್ ನಾಯಕರು ಕೂಡ ಕಾಂಗ್ರೆಸ್ ಸದಸ್ಯರೊಂದಿಗೆ ಮೈತ್ರಿಗೆ ಸಿದ್ಧರಿದ್ದಾರೆ. ಏನೇ ಗೊಂದಲಗಳಿದ್ದರು ಕಾಂಗ್ರೆಸ್ ಜೊತೆ ಜೆಡಿಎಸ್ ಮೈತ್ರಿ 100ಕ್ಕೆ ನೂರು ಖಚಿತ. ಅಧಿಕಾರದ ಬಗ್ಗೆ ಬಿಜೆಪಿ ತಿರುಕನ ಕನಸು ಕಾಣುತ್ತಿದೆ. ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಮಾತನಾಡಬೇಕಾದರೆ ಹುಷಾರಾಗಿರಿ ಎಂದು ಕಟೀಲ್ ವಿರುದ್ಧ ಶರಣಪ್ರಕಾಶ್ ಪಾಟೀಲ್ ಕಿಡಿಕಾರಿದರು