RSS ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಇರಲ್ಲ: ನಳಿನ್ ಕುಮಾರ್ ಕಟೀಲ್

Public TV
1 Min Read
NALINKUMAR KATEEL 1

ಮಂಗಳೂರು: ಬಜರಂಗದಳ (Bajrangdal), ಆರ್.ಎಸ್.ಎಸ್ ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಇರಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಆರ್.ಎಸ್.ಎಸ್ ನಿಷೇಧದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹೇಳಿಕೆಗೆ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಆರ್.ಎಸ್.ಎಸ್ (RSS) ಈ ದೇಶದಲ್ಲಿ ರಾಷ್ಟ್ರ ಭಕ್ತಿ ಕಲಿಸಿದೆ. ಈ ದೇಶ ನಡೆಸುವ ಪ್ರಧಾನ ಮಂತ್ರಿ ಆರ್.ಎಸ್.ಎಸ್ ಸ್ವಯಂ ಸೇವಕ, ಕೇಂದ್ರದ ಮಂತ್ರಿಗಳು, ನಾವೆಲ್ಲರೂ ಆರ್.ಎಸ್.ಎಸ್ ಸ್ವಯಂ ಸೇವಕರು ಎಂದರು. ಇದನ್ನೂ ಓದಿ: ಅಶ್ವಥ್ ನಾರಾಯಣ್ ಕೇಸ್ ಮೈಸೂರಿನಿಂದ ಮಂಡ್ಯಗೆ ವರ್ಗಾವಣೆ

SIDDARAMAIAH 1 3

ಸಿದ್ದರಾಮಯ್ಯ (Siddramaiah) ರಾಜಕೀಯ ಮುಗಿಯುತ್ತೆ, ಸಿದ್ದರಾಮಯ್ಯ ಮತ್ತು ಪ್ರಿಯಾಂಕ್ ಖರ್ಗೆಗೆ ತಾಕತ್ ಇದ್ರೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರನ್ನ ಬಂಧಿಸಲಿ. ಕಾಂಗ್ರೆಸ್‍ನ ಮೆರವಣಿಗೆ, ವಿಜಯೋತ್ಸವ, ಸಭೆಗಳಲ್ಲೇ ಪಾಕಿಸ್ತಾನ ಪರ ಘೋಷಣೆ ಬಂದಿದೆ. ಪ್ರಿಯಾಂಕ್ ಖರ್ಗೆ ಬಾಯಿಗೆ ಹಿಡಿತ ಇಟ್ಟುಕೊಂಡು, ನಾಲಿಗೆ ಹಿಡಿತದಲ್ಲಿ ಮಾತನಾಡಲಿ ಎಂದು ಕಿಡಿಕಾರಿದರು.

ಬಜರಂಗದಳ, ಆರ್.ಎಸ್.ಎಸ್ ನಿಷೇಧ ಮಾಡಲು ನಿಮಗೆ ಹಕ್ಕಿಲ್ಲ. ನೆಹರೂ, ಇಂದಿರಾ ಗಾಂಧಿ ಎಲ್ಲರೂ ನಿಷೇಧಕ್ಕೆ ಕೈ ಹಾಕಿ ಕೈ ಸುಟ್ಟುಕೊಂಡಿದ್ದಾರೆ. ನಿಷೇಧದ ಕೆಲಸ ಮಾಡಿದಾಗಲೆಲ್ಲ ದೇಶದಲ್ಲಿ ಕಾಂಗ್ರೆಸ್ ಸರ್ಕಾರವೇ ಬಂದಿಲ್ಲ. ಆರ್.ಎಸ್.ಎಸ್ ರಾಷ್ಟ್ರಭಕ್ತಿ ಸಂಕೇತ ಅಂತ ಕಾಂಗ್ರೆಸ್ (Congress) ನಲ್ಲೇ ಹೇಳಿದ್ದಾರೆ. ವಿಧಾನಸೌಧದಲ್ಲಿ ಡಿಕೆಶಿಯವರೇ ಪ್ರಾರ್ಥನೆ ಹೇಳಿದ್ದಾರೆ. ಅದರಲ್ಲೇ ಇದೆ. ಆ ಪ್ರಾರ್ಥನೆಯಲ್ಲಿ ಏನಿದೆ ಅಂತ ಖರ್ಗೆಯವರು ಡಿಕೆಶಿ ಬಳಿ ಕೇಳಲಿ ಎಂದಿದ್ದಾರೆ.

Share This Article