ಬೆಂಗಳೂರು: ಉದ್ಯಮಿ ಲೋಕನಾಥ್ ಅವರ ಮಗ ವಿದ್ವತ್ ಮೇಲೆ ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುಬಿ ಸಿಟಿ ಸಿಬ್ಬಂದಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಮುಂದಾಗಿದ್ದರು ಎಂಬ ವಿಚಾರ ಬಯಲಾಗಿದೆ.ಇದನ್ನೂ ಓದಿ: ಕರ್ನಾಟಕ ರಣಜಿ ಆಟಗಾರನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ರೌಡಿ ನಲಪಾಡ್!
Advertisement
ಹಲ್ಲೆ ನಡೆಸಿದ ಸಿಸಿಟಿವಿ ಬಚ್ಚಿಟ್ಟ ಸಿಬ್ಬಂದಿ ಮತ್ತೊಂದು ವಿಡಿಯೋ ಕೊಟ್ಟು ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರ ದಿಕ್ಕು ತಪ್ಪಿಸಲು ಮುಂದಾಗಿದ್ದರು. ಈ ಮೊದಲು ಸಿಸಿಟಿವಿ ಪರಿಶೀಲನೆ ವೇಳೆ ಹಲ್ಲೆ ದೃಶ್ಯಾವಳಿಗಳನ್ನ ಯುಬಿ ಸಿಟಿ ಸಿಬ್ಬಂದಿ ತೋರಿಸಿದ್ದರು. ನಂತರ ಆ ವಿಡಿಯೋಗಳನ್ನ ನೀಡುವಂತೆ ಸಿಸಿಬಿ ಪೊಲೀಸರು ಸೂಚಿಸಿದ್ದರು. ಆಗ ಸಿಬ್ಬಂದಿ ಪೊಲೀಸರು ಹೇಳಿದ್ದ ವಿಡಿಯೋ ಮುಚ್ಚಿಟ್ಟು ಮತ್ತೊಂದು ವಿಡಿಯೋ ಕೊಟ್ಟಿದ್ದಾರೆ. ಇದನ್ನೂ ಓದಿ: ಖಾಸಗಿ ವಿಮಾನ ಖರೀದಿಸಲು ಮುಂದಾಗಿದ್ದ ರೌಡಿ ನಲಪಾಡ್!
Advertisement
Advertisement
ನಂತರ ಸಿಸಿಬಿ ಕಚೇರಿಯಲ್ಲಿ ವಿಡಿಯೋ ಪರಿಶೀಲನೆ ವೇಳೆ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿರುವುದು ಬೆಳಕಿಗೆ ಬಂದಿದೆ. ಇದೇ ವಿಚಾರವಾಗಿ ಭಾನುವಾರದಂದು ಪೊಲೀಸರು ಯುಬಿ ಸಿಟಿಯ ಫರ್ಜಿ ರೆಸ್ಟೋರೆಂಟ್ ಸಿಬ್ಬಂದಿ ಹಾಗೂ ಯುಬಿ ಸಿಟಿ ಸಿಬ್ಬಂದಿಯ ವಿಚಾರಣೆ ನಡೆಸಿದ್ದಾರೆ. ವಿಚಾರಣೆ ನಂತರ ಸಿಸಿಬಿ ಪೊಲೀಸರು ಯುಬಿ ಸಿಟಿಯ ಸಂಪೂರ್ಣ ಡಿವಿಆರ್ ವಶಕ್ಕೆ ಪಡೆದಿದ್ದಾರೆ.ಇದನ್ನೂ ಓದಿ: ಮೈಮೇಲೆ ಕುರ್ಚಿಗಳನ್ನು ಎಸೆದ್ರು, sorry ಎಂದರೂ ಬಿಯರ್ ಬಾಟಲಿಯಿಂದ ಬಾಯಿಗೆ ಹೊಡೆದ್ರು- ನಲಪಾಡ್ ದಾಳಿ ಬಗ್ಗೆ ವಿದ್ವತ್ Exclusive ಮಾತು
Advertisement
ಸಿಸಿಟಿವಿ ದೃಶ್ಯಗಳೇ ಈ ಘಟನೆಗೆ ಪ್ರಮುಖ ಸಾಕ್ಷ್ಯಗಳಾಗಿತ್ತು. ಈ ಹಿನ್ನೆಲೆಯಲ್ಲಿ ಅರೋಪಿ ನಲಪಾಡ್ ರಕ್ಷಣೆಗೆ ಯುಬಿ ಸಿಟಿ ಸಿಬ್ಬಂದಿ ನಿಂತಿದ್ದಾರಾ ಎಂಬ ಶಂಕೆ ಮೂಡಿದೆ. ಇದನ್ನೂ ಓದಿ: ಜೈಲಿಗೆ ಹೋದ ಎರಡೇ ದಿನಕ್ಕೆ ನಲಪಾಡ್ ಕೈಗೆ ಸಿಕ್ತು ಮೊಬೈಲ್ ಫೋನ್!
ಇದನ್ನೂ ಓದಿ: ಜೈಲಿನಲ್ಲೂ ಮುಂದುವರಿದ ನಲಪಾಡ್ ಪುಂಡಾಟ- ನಿನ್ನಿಂದ ನಾವು ಜೈಲು ಸೇರುವಂತಾಯ್ತು ಎಂದ ಸ್ನೇಹಿತ ಅಬ್ರಾಸ್ ಮೇಲೆ ಹಲ್ಲೆ
ವಿದ್ವತ್- ಹಲ್ಲೆಗೊಳಗಾದ ಯುವಕ.