ಮುಂಬೈ: ರಸ್ತೆ ಅಪಘಾತದ ಗಲಾಟೆ ಪ್ರಕರಣದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬನನ್ನು ಅಪರಾಧಿ (Criminal) ಎಂದು ಘೋಷಿಸಿದ ಮಹಾರಾಷ್ಟ್ರದ (Maharashtra) ಮಾಲೆಗಾಂವ್‌ನ (Malegaon) ಮ್ಯಾಜಿಸ್ಟ್ರೇಟ್ ಕೋರ್ಟ್ (Court) ಜೈಲು ಶಿಕ್ಷೆಗೆ ಬದಲಾಗಿ 21 ದಿನಗಳ ಕಾಲ ದಿನಕ್ಕೆ 5 ಬಾರಿ ನಮಾಜ್ (Namaz) ಮಾಡುವಂತೆ ಮತ್ತು ನಿತ್ಯ 2 ಸಸಿಗಳನ್ನು ನೆಟ್ಟು (Planting) ಪೊಷಿಸುವಂತೆ ಸೂಚಿಸಿ ವಿಭಿನ್ನ ಆದೇಶ ಹೊರಡಿಸಿದೆ.
1958ರ ಅಪರಾಧಿಗಳ ಪ್ರೊಬೇಶನ್ ಆಕ್ಟ್‌ನ ಸೆಕ್ಷನ್ 3 ಅಪರಾಧವನ್ನು ಪುನರಾವರ್ತಿಸದಂತೆ ಎಚ್ಚರಿಕೆ ನೀಡಿ ಅಪರಾಧಿಯನ್ನು ಬಿಡುಗಡೆ ಮಾಡಲು ಮ್ಯಾಜಿಸ್ಟ್ರೇಟ್‌ಗೆ ಅಧಿಕಾರವನ್ನು ನೀಡುತ್ತದೆ ಇದರ ಅಡಿಯಲ್ಲಿ ಶಿಕ್ಷೆಯನ್ನು ಪ್ರಕಟಿಸಲಾಗಿದೆ ಎಂದು ಮ್ಯಾಜಿಸ್ಟ್ರೇಟ್ ತೇಜ್ವಂತ್ ಸಿಂಗ್ ಸಂಧು ಆದೇಶದಲ್ಲಿ ಹೇಳಿದ್ದಾರೆ.
Advertisement
Advertisement
ಕೇವಲ ಎಚ್ಚರಿಕೆ ಸಾಕಾಗುವುದಿಲ್ಲ ಮತ್ತು ಅಪರಾಧಿಯು ತನ್ನ ಕೃತ್ಯಗಳನ್ನು ಪುನರಾವರ್ತಿಸದಂತೆ ಎಚ್ಚರಿಕೆಯನ್ನು ಮತ್ತು ಅವನ ಅಪರಾಧವನ್ನು ನೆನಪಿಸಿಕೊಳ್ಳುವುದು ಮುಖ್ಯವಾಗಿದೆ. ಈ ಹಿನ್ನೆಲೆ ಮುಸ್ಲಿಂ ಧರ್ಮ ಆಚರಿಸುವ ವ್ಯಕ್ತಿಗೆ ನಮಾಜ್ ಮಾಡುವ ಹಾಗೂ ಸಸಿ ನಡುವೆ ಜವಬ್ದಾರಿ ನೀಡಿದೆ. ಇದರಿಂದ ಪ್ರತಿ ದಿನವೂ ಆತನಿಗೆ ತನ್ನ ತಪ್ಪಿನ ಅರಿವಾಗಲಿದೆ ಎಂದು ಮ್ಯಾಜಿಸ್ಟ್ರೇಟ್ ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ರಾಪರ್ ಆಗಲು ಕದ್ದ- ತನಿಖೆ ವೇಳೆ ರಾಪ್ ಸಾಂಗ್ ಹಾಡಿದ!
Advertisement
ವಿಚಾರಣೆ ವೇಳೆ ಅಪರಾಧಿಯೂ ಇಸ್ಲಾಮಿಕ್ ನಂಬಿಕೆಯನ್ನು ಅನುಸರಿಸುವ ವ್ಯಕ್ತಿಯಾಗಿದ್ದರೂ, ಧಾರ್ಮಿಕ ಗ್ರಂಥಗಳಲ್ಲಿ ಸೂಚಿಸಿದಂತೆ ತಾನು ನಿಯಮಿತವಾಗಿ ನಮಾಜ್ ಮಾಡುತ್ತಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾನೆ. ಇದೇ ಕಾರಣಕ್ಕೆ ಮುಂದಿನ 21 ದಿನಗಳ ಕಾಲ 5 ಹೊತ್ತಿನ ನಮಾಜ್ ಮಾಡಲು ಹಾಗೂ ಅಪರಾಧ ಎಸಗಿದ ಸೋನಾಪುರ ಮಸೀದಿಯ ಆವರಣದಲ್ಲಿ 2 ಮರಗಳನ್ನು ನೆಡಲು ಆದೇಶಿಸಿದೆ.
Advertisement
ಅಪರಾಧಿ 2010 ರಲ್ಲಿ ಅಪಘಾತ ಪ್ರಕರಣವೊಂದರಲ್ಲಿ ಗಲಾಟೆ ಮಾಡಿದ್ದ. ವ್ಯಕ್ತಿಯೊರ್ವನ ಮೇಲೆ ಹಲ್ಲೆ ಮಾಡಿದ್ದು, ಆತನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 325 (ಸ್ವಯಂಪ್ರೇರಿತವಾಗಿ ಘೋರವಾದ ಗಾಯವನ್ನು ಉಂಟುಮಾಡುವುದು), 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶಪೂರ್ವಕ ಅವಮಾನ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಸೆಕ್ಷನ್ 323 ರ ಅಡಿಯಲ್ಲಿ ಆರೋಪಿ ತಪ್ಪಿತಸ್ಥ ಎಂದು ಮ್ಯಾಜಿಸ್ಟ್ರೇಟ್ ಪರಿಗಣಿಸಿದ ಹಿನ್ನೆಲೆ ಉಳಿದ ಅಪರಾಧಗಳಿಂದ ಆತನನನ್ನು ಖುಲಾಸೆಗೊಳಿಸಲಾಯಿತು. ಇದನ್ನೂ ಓದಿ: ಐಷಾರಾಮಿ ಕಾರಲ್ಲಿ ಬಂದು ಜಿ20 ಕಾರ್ಯಕ್ರಮಕ್ಕಾಗಿ ಇಟ್ಟಿದ್ದ ಹೂಕುಂಡ ಕದ್ದೊಯ್ದ ಕಳ್ಳ ಅರೆಸ್ಟ್