ಲಕ್ನೋ: ಕೆಲವು ದಿನಗಳ ಹಿಂದೆಯಷ್ಟೇ ಉದ್ಘಾಟನೆಗೊಂಡಿದ್ದ ಉತ್ತರ ಪ್ರದೇಶದ ಲಕ್ನೋದಲ್ಲಿರುವ ಲುಲು ಮಾಲ್‌ನಲ್ಲಿ ಕೆಲವರು ನಮಾಜ್ ಮಾಡುತ್ತಿರುವ ವೀಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಇದೀಗ ಮಾಲ್ ಒಳಗಡೆಯೇ ನಾಮಾಜ್ ಮಾಡಿರುವುದಕ್ಕೆ ಹಿಂದೂ ಸಮುದಾಯ ಆಕ್ಷೇಪ ವ್ಯಕ್ತಪಡಿಸಿದೆ.
ಮಾಲ್‌ನಲ್ಲಿ ನಮಾಜ್ ಮಾಡಿದ ಹಿನ್ನೆಲೆ ಭಾರತ ಹಿಂದೂ ಮಹಾಸಭಾ ಆಕ್ಷೇಪ ವ್ಯಕ್ತಪಡಿಸಿ, ಹಿಂದೂಗಳು ಮಾಲ್‌ಗಳನ್ನು ಬಹಿಷ್ಕರಿಸುವಂತೆ ಕೇಳಿಕೊಂಡಿದೆ.
Advertisement
ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಮಾಡುವಂತಿಲ್ಲ ಎಂದು ಸರ್ಕಾರ ಆದೇಶಿಸಿದೆ. ಇದೀಗ ಲುಲು ಮಾಲ್‌ನಲ್ಲಿ ಜನರು ನೆಲದಲ್ಲಿ ಕುಳಿತುಕೊಂಡು ನಮಾಜ್ ಮಾಡಿದ್ದಾರೆ. ಇದು ಸರ್ಕಾರದ ಆದೇಶದ ಉಲ್ಲಂಘನೆ ಎಂಬುದು ವೀಡಿಯೋದಲ್ಲಿ ಸ್ಪಷ್ಟವಾಗಿ ತೋರುತ್ತಿದೆ ಎಂದು ಹಿಂದೂ ಮಹಾಸಭೆಯ ರಾಷ್ಟ್ರೀಯ ವಕ್ತಾರ ಶಿಶಿರ್ ಚತುರ್ವೇದಿ ತಿಳಿಸಿದ್ದಾರೆ. ಇದನ್ನೂ ಓದಿ: ಹಿಂದೂ ಯುವತಿಯ ಅಪಹರಣ, ಬಲವಂತದಿಂದ ಮತಾಂತರ ಮಾಡಿ ಮುಸ್ಲಿಂ ಯುವಕನೊಂದಿಗೆ ಮದುವೆ
Advertisement
Namaz inside Lulu Mall, Lucknow …. even malls are not spared now ???? pic.twitter.com/lES84Sqhuy
— Vikas (@VikasPronamo) July 13, 2022
Advertisement
ಇಂತಹ ಘಟನೆಗಳ ಬಗ್ಗೆ ಕ್ರಮ ಕೈಗೊಳ್ಳಲು ಹಾಗೂ ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಲು ಚತುರ್ವೇದಿ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ವಿನಂತಿಸಿದ್ದಾರೆ. ವೈರಲ್ ವೀಡಿಯೋ ಕುರಿತು ಲುಲು ಮಾಲ್ ವಿರುದ್ಧ ಹಿಂದೂ ಸಂಘಟನೆ ಲಕ್ನೋ ಪೊಲೀಸರಿಗೆ ದೂರು ಸಲ್ಲಿದೆ. ಇದನ್ನೂ ಓದಿ: ಸಂಸತ್ ಕಲಾಪದಲ್ಲಿ ಅಸಂಸದೀಯ ಪದಗಳಿಗೆ ಕತ್ತರಿ – ಈ ಪದಗಳು ಬ್ಯಾನ್
Advertisement
11 ಅಂತಸ್ತಿನ ಪಾಕಿಂಗ್ ಸ್ಥಳ, 2.2 ಮಿಲಿಯನ್ ಚದರ ಅಡಿಗಳಲ್ಲಿ ಸುಮಾರು 300 ಅಂಗಡಿಗಳನ್ನು ಹೊಂದಿರುವ ಲಕ್ನೋವಿನ ಲುಲು ಮಾಲ್ ಅನ್ನು ಜುಲೈ 10 ರಂದು ಯೋಗಿ ಆದಿತ್ಯನಾಥ್ ಅವರು ಉದ್ಘಾಟಿಸಿದ್ದರು.