ChikkamagaluruDistrictsKarnatakaLatestMain Post

ದತ್ತಪೀಠ ವಿವಾದಿತ ಸ್ಥಳದಲ್ಲಿ ನಮಾಜ್?

ಚಿಕ್ಕಮಗಳೂರು: ಇಲ್ಲಿನ ದತ್ತಪೀಠದ ವಿವಾದಿತ ಸ್ಥಳದಲ್ಲಿ ಮಾಂಸದೂಟ, ಗೋರಿ ಪೂಜೆ ಬಳಿಕ ಮತ್ತೊಂದು ವಿವಾದ ಸೃಷ್ಟಿಯಾಗಿದ್ದು, ದತ್ತಪೀಠದ ಆವರಣದಲ್ಲಿ ನಮಾಜ್ ಮಾಡುವಂತೆ ಕಾಣುತ್ತಿರುವ ವೀಡಿಯೋವೊಂದು ಜಾಲತಾಣದಲ್ಲಿ ಹರಿದಾಡುತ್ತಿದೆ.

ಚಿಕ್ಕಮಗಳೂರು ತಾಲೂಕಿನ ಇನಾಂ ದತ್ತಾತ್ರೇಯ ಬಾಬಾಬುಡನ್ ದರ್ಗಾದಲ್ಲಿ ಮುಜರಾಯಿ ಇಲಾಖೆ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದಾಗಿ ದತ್ತಪೀಠದ ಆವರಣದಲ್ಲೇ ನಮಾಜ್ ಮಾಡುತ್ತಿದ್ದಾರೆ. ಆವರಣ ಮಾತ್ರವಲ್ಲ, ಗುಹೆಯ ಒಳಗೂ ನಮಾಜ್ ಮಾಡುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಟೀಕೆ ವ್ಯಕ್ತವಾಗಿದೆ.

ಕೋರ್ಟ್ ಜಿಲ್ಲಾಡಳಿತದಿಂದ ನೇಮಿಸಲ್ಪಟ್ಟ ಮುಜಾವರ್‌ರಿಂದ ಮಾತ್ರ ದತ್ತ ಪಾದುಕೆ, ಗೋರಿಗಳಿಗೆ ಪೂಜೆಗೆ ಅವಕಾಶ ನೀಡಿತ್ತು. ಆದರೆ, ಕೋರ್ಟ್ ಆದೇಶವನ್ನು ಗಾಳಿಗೆ ತೂರಿ ಪೂಜೆ ಸಲ್ಲಿಸಿದ್ದರು. ಕೋರ್ಟ್ ಆದೇಶದ ಅನ್ವಯ ಆವರಣ ಸೇರಿ ಗುಹೆ ಒಳಗೆ ಪ್ರಾರ್ಥನೆ, ನಮಾಜ್, ಪೂಜೆ ಸಲ್ಲಿಸಲು ಅವಕಾಶವಿಲ್ಲ. ಇದನ್ನೂ ಓದಿ: ಈಶ್ವರಪ್ಪಗೆ ಒಂದು ನ್ಯಾಯ, ಶ್ರೀರಾಮುಲುಗೆ ಒಂದು ನ್ಯಾಯನಾ: ತಿಪ್ಪೇಸ್ವಾಮಿ

ದತ್ತಪೀಠದ ಭಕ್ತರು ಸೇರಿದಂತೆ ಯಾರಿಗೂ ಯಾವುದೇ ಪೂಜೆ ಪುನಸ್ಕಾರಕ್ಕೆ ಅವಕಾಶವಿಲ್ಲ. ಆದರೂ ನಮಾಜ್ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಈ ವೀಡಿಯೋ ನಿಜವೊ ಸುಳ್ಳೋ ಎನ್ನುವುದು ಅಧಿಕಾರಿಗಳ ಸ್ಪಷ್ಟನೆಯ ನಂತರವಷ್ಟೇ ತಿಳಿಯಬೇಕಿದೆ. ಇದನ್ನೂ ಓದಿ: ಶಾಲೆ ಇಲ್ಲದೇ 2 ವರ್ಷದಿಂದ ಮನೆ-ಮನೆ ಅಲೆಯುತ್ತಿರುವ ಶಿಕ್ಷಕರು, ಮಕ್ಕಳು

Leave a Reply

Your email address will not be published.

Back to top button