ಲಕ್ನೋ: ಉತ್ತರ ಪ್ರದೇಶದ (Uttar Pradesh) ಕುಶಿನಗರದಲ್ಲಿ ನಿಂತಿದ್ದ ರೈಲಿನ (Train) ಕಂಪಾರ್ಟ್ಮೆಂಟ್‌ನೊಳಗೆ ಕೆಲವರು ಸಾರ್ವಜನಿಕವಾಗಿ ನಮಾಜ್ (Namaz) ಮಾಡುತ್ತಿರುವ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಕಾಣಿಸಿಕೊಂಡಿದೆ. ಇದೀಗ ಮತ್ತೆ ವಿವಾದ ಭುಗಿಲೆದ್ದಿದ್ದು, ಈ ಬಗ್ಗೆ ರಾಜ್ಯ ಪೊಲೀಸ್ ಹಾಗೂ ರೈಲ್ವೇ ರಕ್ಷಣಾ ಪಡೆ ತನಿಖೆ ನಡೆಸುತ್ತಿರುವುದಾಗಿ ತಿಳಿಸಿದೆ.
ವೈರಲ್ ಆಗಿರುವ ವೀಡಿಯೋದಲ್ಲಿ ಖಡ್ಡಾ ರೈಲು ನಿಲ್ದಾಣದಲ್ಲಿ ನಿಂತಿದ್ದ ಸತ್ಯಾಗ್ರಹ ಎಕ್ಸ್ಪ್ರೆಸ್ ರೈಲಿನಲ್ಲಿ ನಾಲ್ವರು ಮುಸ್ಲಿಮರು ನಮಾಜ್ ಮಾಡುವುದು ಕಂಡುಬಂದಿದೆ. ಈ ವೇಳೆ ರೈಲಿನೊಳಗೆ ತಮ್ಮ ಸೀಟ್‌ಗಳ ಹುಡುಕಾಟದಲ್ಲಿ ತೊಡಗಿದ್ದ ಇತರ ಪ್ರಯಾಣಿಕರನ್ನು ಬದಿಯಲ್ಲಿ ಕುಳಿತಿದ್ದ ಇನ್ನೊಬ್ಬ ಮುಸ್ಲಿಂ ವ್ಯಕ್ತಿ ತಡೆದು, ನಮಾಜ್ ಮುಗಿಯುವವರೆಗೆ ಕಾಯುವಂತೆ ಹೇಳಿರುವುದು ಕಂಡುಬಂದಿದೆ. ಇದನ್ನೂ ಓದಿ: ಬೃಂದಾವನಕ್ಕೆ ಪ್ರವಾಸಿಗರ ನಿರ್ಬಂಧ – ಬೋನ್‍ನಲ್ಲಿ ನಾಯಿಯನ್ನು ಕಟ್ಟಿ ಹಾಕಿ ಕಾವಲು
Advertisement
Advertisement
ಇತ್ತೀಚೆಗೆ ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಮಾಡುವುದು ತೀವ್ರ ಚರ್ಚೆಗೊಳಗಾಗುವ ವಿಷಯವಾಗಿ ಹೊರಹೊಮ್ಮಿದೆ. ಸಾರ್ವಜನಿಕ ಪ್ರದೇಶಗಳಲ್ಲಿ ನಮಾಜ್ ಮಾಡುವುದಕ್ಕೆ ಬಲಪಂಥೀಯ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಇದನ್ನೂ ಓದಿ: ಮಹಿಳೆಗೆ ಕಪಾಳಮೋಕ್ಷ ಮಾಡಿದ ಸಚಿವ ಸೋಮಣ್ಣ
Advertisement
ಈ ವರ್ಷದ ಆರಂಭದಲ್ಲಿ ಹರಿಯಾಣದ ಸಾರ್ವಜನಿಕ ಪ್ರದೇಶದಲ್ಲಿ ನಮಾಜ್ ಮಾಡಿದ್ದಕ್ಕೆ ವಿವಾದ ಸ್ಫೋಟಗೊಂಡಿತ್ತು. ಇದನ್ನು ವಿರೋಧಿಸಿ ಹಿಂದೂ ಸಂಘಟನೆಗಳ ಗುಂಪು ಆ ಸ್ಥಳದಲ್ಲಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದರು. ಪರಿಸ್ಥಿತಿ ಘರ್ಷಣೆಗೆ ತಿರುಗದಂತೆ ತಡೆಯಲು ಪೊಲೀಸರು ಹರಸಾಹಸಪಟ್ಟಿದ್ದರು.