ಮೈಸೂರು: ಬಿಜೆಪಿ (BJP) ಅಭ್ಯರ್ಥಿ ಯದುವೀರ್ ಒಡೆಯರ್ (Yaduveer Wadiyar) ಅವರು ಲೋಕಸಭಾ ಚುನಾವಣೆಯಲ್ಲಿ ಗೆಲುವಿನತ್ತ (Lok Sabha Elections Resuts 2024) ದಾಪುಗಾಲಿಡುತ್ತಿದ್ದಾರೆ. 80 ಸಾವಿರ ಮತಗಳ ಲೀಡ್ ಬರುತ್ತಿದ್ದಂತೆ ಯದುವೀರ್, ಸಂಸದರು ಎಂಬ ನಾಮಫಲಕಕ್ಕೆ ಚಾಮುಂಡೇಶ್ವರಿ ದೇವಾಲಯದಲ್ಲಿ ಅಭಿಮಾನಿಗಳು ಪೂಜೆ ಸಲ್ಲಿಸಿದ್ದಾರೆ.
ಪೂಜೆ ಸಲ್ಲಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಲೀಡ್ ಬರುತ್ತಿದ್ದಂತೆ ಅಭಿಮಾನಿಗಳು ನಾಮಫಲಕ ಮಾಡಿಸಿ ಪೂಜೆ ಸಲ್ಲಿಸಿದ್ದಾರೆ. ವೈರಲ್ ಆಗಿರುವ ಫೋಟೋದಲ್ಲಿ ಯದುವೀರ್ ಕೃಷ್ಣದತ್ತ ಒಡೆಯರ್, ಸಂಸದರು, ಮೈಸೂರು – ಕೊಡಗು ಕ್ಷೇತ್ರ ಎಂದು ಬರೆಯಲಾಗಿದೆ.
Advertisement
Advertisement
ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಯದುವೀರ್ ಸ್ಪರ್ಧಿಸಿದ್ದರೆ, ಕಾಂಗ್ರೆಸ್‍ನಿಂದ ಎಂ.ಲಕ್ಷ್ಮಣ್ ಕಣಕ್ಕಿಳಿದಿದ್ದಾರೆ. ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಮಧ್ಯಾಹ್ನ 12 ಗಂಟೆಯ ಹೊತ್ತಿಗೆ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ -343636 ಮತ ಪಡೆದಿದ್ದು, ಬಿಜೆಪಿ ಅಭ್ಯರ್ಥಿ ಯದುವೀರ್-439967 ಮತಗಳಿಸಿ 96331 ಮತಗಳ ಮುನ್ನಡೆಯಲ್ಲಿದ್ದಾರೆ. 7,61,184 ಮತಗಳ ಎಣಿಕೆ ಪೂರ್ಣಗೊಂಡಿದ್ದು, 14,77,751 ಮತ ಚಲಾವಣೆಯಾಗಿತ್ತು. ಇನ್ನೂ 7,16,567 ಮತ ಎಣಿಕೆ ಬಾಕಿ ಇದೆ.