ಲಕ್ನೋ: ಕಳೆದ ವರ್ಷ ನಮೀಬಿಯಾದಿಂದ (Namibia) ತರಲಾಗಿದ್ದ ಚೀತಾಗಳಲ್ಲೊಂದು 4 ಮರಿಗಳಿಗೆ (Cubs) ಜನ್ಮ ನೀಡಿದೆ.
ಅಳಿವಿನಂಚಿನಲ್ಲಿರುವ ವನ್ಯಜೀವಿಗಳನ್ನು ಸಂರಕ್ಷಣೆ ಮಾಡುವ ಯೋಜನೆಯಡಿ ನಮೀಬಿಯಾದಿಂದ ಭಾರತಕ್ಕೆ 3 ಗಂಡು ಹಾಗೂ 5 ಹೆಣ್ಣು ಚೀತಾಗಳನ್ನು (Cheetah) ವಿಶೇಷ ವಿಮಾನಗಳಲ್ಲಿ ಭಾರತಕ್ಕೆ ತರಲಾಗಿತ್ತು. ಇದೀಗ ಒಂದು ಚೀತಾ 4 ಮರಿಗಳಿಗೆ ಜನ್ಮ ನೀಡಿರುವ ಮಾಹಿತಿಯನ್ನು ಕೇಂದ್ರ ಸಚಿವ ಭೂಪೇಂದರ್ ಯಾದವ್ ತಿಳಿಸಿದ್ದಾರೆ. ಮರಿಗಳ ಮುದ್ದಾದ ಚಿತ್ರಗಳನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ.
Advertisement
Congratulations ????????
A momentous event in our wildlife conservation history during Amrit Kaal!
I am delighted to share that four cubs have been born to one of the cheetahs translocated to India on 17th September 2022, under the visionary leadership of PM Shri @narendramodi ji. pic.twitter.com/a1YXqi7kTt
— Bhupender Yadav (@byadavbjp) March 29, 2023
Advertisement
ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಜನ್ಮದಿನವಾದ ಸೆಪ್ಟೆಂಬರ್ 17ರಂದು ನಮೀಬಿಯಾದಿಂದ 8 ಚೀತಾಗಳನ್ನು ಭಾರತಕ್ಕೆ ತರಲಾಗಿತ್ತು. ಅವುಗಳನ್ನು ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ (Kuno National Park) ಬಿಡಲಾಗಿತ್ತು. ಬಳಿಕ ಚೀತಾಗಳು ಕಾಡಿನ ವಾತಾವರಣಕ್ಕೆ ಹೊಂದಿಕೊಂಡು ಸ್ವತಃ ಬೇಟೆಯಾಡಲು ಆರಂಭಿಸಿದ್ದವು. ಇದನ್ನೂ ಓದಿ: ಕಿಡ್ನಿ ಸೋಂಕು – ನಮೀಬಿಯಾದಿಂದ ತಂದಿದ್ದ 8ರಲ್ಲಿ ಒಂದು ಚಿರತೆ ಸಾವು
Advertisement
Advertisement
ಕಳೆದ 2 ದಿನಗಳ ಹಿಂದೆ ಭಾರತಕ್ಕೆ ತರಲಾಗಿದ್ದ 8 ಚೀತಾಗಳ ಪೈಕಿ ಕಿಡ್ನಿ ಸೋಂಕಿನಿಂದ ಬಳಲುತ್ತಿದ್ದ ಸಾಶಾ ಹೆಸರಿನ 3 ವರ್ಷದ ಚೀತಾ ಮೃತಪಟ್ಟಿದೆ. ಸಾಶಾ ಭಾರತಕ್ಕೆ ಕರೆತರುವ ಮುನ್ನವೇ ಅನಾರೋಗ್ಯದಿಂದ ಬಳಲುತ್ತಿತ್ತು ಎಂದು ಹೇಳಲಾಗಿದೆ.
ಚೀತಾ ವಿಶೇಷತೆಯೇನು?
ಮಚ್ಚೆ ಗುರುತಿನ ಚೀತಾಗಳ ಸಂತತಿಯನ್ನು 1952ರಲ್ಲಿ ಭಾರತದಲ್ಲಿ ಅಳಿದುಹೋದ ಸಂತತಿ ಎಂದು ಘೋಷಣೆ ಮಾಡಲಾಗಿತ್ತು. ಭಾರತದಲ್ಲಿದ್ದ ಕೊನೆಯ ಚೀತಾ 1947ರಲ್ಲಿ ಸಾವನ್ನಪ್ಪಿತ್ತು. 2009ರಲ್ಲಿ ಆಫ್ರಿಕನ್ ಚೀತಾ ಯೋಜನೆ ಮಾಡಲಾಗಿತ್ತು, ಆದರೆ ಕಾರಣಾಂತರಗಳಿಂದ ಅನುಷ್ಠಾನವಾಗಿರಲಿಲ್ಲ. ಅದಾದ 75 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಿದ ಚೀತಾಗಳಿಗೆ ಕುನೋ ಉದ್ಯಾನವನ ಪರಿಸರ ಅನುಕೂಲಕರವಾಗಿದ್ದು, ಅಲ್ಲಿನ ಸುತ್ತಮುತ್ತಲ 24 ಗ್ರಾಮಗಳ ಜನರನ್ನು ಖಾಲಿ ಮಾಡಿಸಲಾಗಿದೆ. 8 ಚೀತಾಗಳ ಸ್ಥಳಾಂತರಕ್ಕೆ 75 ಕೋಟಿ ರೂ. ಖರ್ಚು ಮಾಡಲಾಗಿದೆ. ಇದನ್ನೂ ಓದಿ: ಹಿರಿಯ ಅಧಿಕಾರಿಯಿಂದ ಬೆದರಿಕೆ, 2 ವಾರದೊಳಗೆ ನನ್ನ ಕೊಲ್ಬೋದು – ಅತೀಕ್ ಸಹೋದರ ಅಶ್ರಫ್