ಬೆಂಗಳೂರು: ನಮ್ಮ ಮೆಟ್ರೋ (Namma Metro) ಪ್ರಯಾಣಿಕರ ಓಡಾಟದಲ್ಲಿ ಸಾರ್ವಕಾಲಿಕ ದಾಖಲೆ ಬರೆದಿದೆ. ಒಂದೇ ದಿನ ಮೆಟ್ರೋದಲ್ಲಿ ಸಂಚರಿಸುವವರ ಸಂಖ್ಯೆ ಭಾರೀ ಏರಿಕೆ ಕಂಡಿದ್ದು, ಗರಿಷ್ಠ ಪ್ರಮಾಣ ತಲುಪಿದೆ.
ಈ ಬಗ್ಗೆ ಎಕ್ಸ್‌ನಲ್ಲಿ ಮಾಹಿತಿ ನೀಡಿರುವ ನಮ್ಮ ಮೆಟ್ರೋ, ಡಿಸೆಂಬರ್ 06 ರಂದು ಒಂದೇ ದಿನ ಬೆಂಗಳೂರು ನಮ್ಮ ಮೆಟ್ರೋ ರೈಲಿನಲ್ಲಿ ಬರೋಬ್ಬರಿ 9,20,562 ಲಕ್ಷಕ್ಕೂ ಅಧಿಕ ಮಂದಿ ಸಂಚಾರ ಮಾಡಿದ್ದಾರೆ. ಇದು ಈವರೆಗಿನ ಅತೀ ಹೆಚ್ಚು ಪ್ರಯಾಣಿಕರು ಓಡಾಟ ಮಾಡಿದ ಸಂಖ್ಯೆಯಾಗಿದೆ ಎಂದು ತಿಳಿಸಿದೆ.ಇದನ್ನೂ ಓದಿ: ನಾನು ರಾಜಕೀಯ ಕೊನೆಗಾಲದಲ್ಲಿದ್ದೇನೆ: ಸಿಎಂ ಸಿದ್ದರಾಮಯ್ಯ ಅಚ್ಚರಿ ಹೇಳಿಕೆ
ನೇರಳೆ ಮಾರ್ಗದಲ್ಲಿ 4,39,616 ಜನ ಪ್ರಯಾಣಿಸಿದ್ದು, ಹಸಿರು ಮಾರ್ಗದಲ್ಲಿ 3,12,248 ಜನ ಪ್ರಯಾಣಿಸಿದ್ದಾರೆ. ಕೆಂಪೇಗೌಡ ನಿಲ್ದಾಣದಿಂದ ಮಾರ್ಗ ಬದಲಿಸುವ ಮೂಲಕ 1,67,617 ಜನ ಪ್ರಯಾಣಿಸಿದ್ದಾರೆ ಎಂದು ಬಿಎಂಆರ್‌ಸಿಎಲ್ (BMRCL) ಮಾಹಿತಿ ಹಂಚಿಕೊಂಡಿದೆ.
ನಮ್ಮ ಮೆಟ್ರೋ’ ಪ್ರಯಾಣಿಕರ ಸಂಚಾರದಲ್ಲಿ ಹೊಸ ದಾಖಲೆ.!
ಡಿ. 6 ರಂದು ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ 9.20 ಲಕ್ಷ ಕ್ಕೂ ಅಧಿಕ ಪ್ರಯಾಣಿಕರು ಸಂಚಾರ ಮಾಡುವ ಮೂಲಕ ಹೊಸ ದಾಖಲೆ ನಿರ್ಮಾಣವಾಗಿದೆ. pic.twitter.com/iIyU7H41CP
— ನಮ್ಮ ಮೆಟ್ರೋ (@OfficialBMRCL) December 7, 2024
ಕಳೆದ ಆಗಸ್ಟ್ 14ರಂದು ನಮ್ಮ ಮೆಟ್ರೋದಲ್ಲಿ ಒಂದೇ ದಿನ ಬರೋಬ್ಬರಿ 9.17 ಲಕ್ಷ ಮಂದಿ ಸಂಚರಿಸುವ ಮೂಲಕ ದಾಖಲೆ ಸೃಷ್ಟಿಸಿತ್ತು. ಇದೀಗ ನಮ್ಮ ಮೆಟ್ರೋದಲ್ಲಿ 9.20 ಲಕ್ಷಕ್ಕೂ ಅಧಿಕ ಜನ ಪ್ರಯಾಣಿಸುವ ದಾಖಲೆಯನ್ನು ಮುರಿದಿದೆ.ಇದನ್ನೂ ಓದಿ: ಮಣಿಪಾಲ ಬಾಣಸಿಗನ ಸಾವಿಗೆ ಬಿಗ್ ಟ್ವಿಸ್ಟ್ – ಬಾಟಲಿಯಿಂದ ಕತ್ತು ಇರಿದುಕೊಂಡು ಆತ್ಮಹತ್ಯೆ?