Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇಶದಲ್ಲೇ ʻನಮ್ಮ ಮೆಟ್ರೋʼ ಬಲು ದುಬಾರಿ; ಟಿಕೆಟ್ ದರ ವಿಚಾರದಲ್ಲೂ ರಾಜ್ಯ-ಕೇಂದ್ರದ ಸಂಘರ್ಷ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದೇಶದಲ್ಲೇ ʻನಮ್ಮ ಮೆಟ್ರೋʼ ಬಲು ದುಬಾರಿ; ಟಿಕೆಟ್ ದರ ವಿಚಾರದಲ್ಲೂ ರಾಜ್ಯ-ಕೇಂದ್ರದ ಸಂಘರ್ಷ

Bengaluru City

ದೇಶದಲ್ಲೇ ʻನಮ್ಮ ಮೆಟ್ರೋʼ ಬಲು ದುಬಾರಿ; ಟಿಕೆಟ್ ದರ ವಿಚಾರದಲ್ಲೂ ರಾಜ್ಯ-ಕೇಂದ್ರದ ಸಂಘರ್ಷ

Public TV
Last updated: February 7, 2026 12:41 pm
Public TV
Share
3 Min Read
Namma Metro
SHARE

– ಹೊಣೆ ಮರೆತ್ರಾ ಬೆಂಗಳೂರಿನ ಮೂವರು ಬಿಜೆಪಿ ಸಂಸದರು?

ಬೆಂಗಳೂರು: ಸಿಲಿಕಾನ್‌ ಸಿಟಿಯ ಸಂಚಾರ ನಾಡಿ ನಮ್ಮ ಮೆಟ್ರೋ (Namma Metro) ಪ್ರಯಾಣ ಮತ್ತಷ್ಟು ದುಬಾರಿಯಾಗಿದೆ. ಪ್ರತಿವರ್ಷ ಫೆಬ್ರುವರಿ ತಿಂಗಳಲ್ಲಿ ಮೆಟ್ರೋ ದರ ಏರಿಕೆ (Metro Ticket Price Hike) ಮಾಡುವುದು ನಿಯಮವಿದೆ ಎಂಬ ನೆಪ ಹೇಳಿ ಬಿಎಂಆರ್‌ಸಿಎಲ್ ದರ ಪರಿಷ್ಕರಣೆ ಮಾಡಿ, ಪ್ರಯಾಣ ದರ ಏರಿಕೆ ಮಾಡುವುದಾಗಿ ತಿಳಿಸಿದೆ. ಈಗಾಗಲೇ 72% 72 ದರ ಏರಿಕೆ ಮಾಡಿರುವ ಬಿಎಂಆರ್‌ಸಿಎಲ್ ಮತ್ತೆ 5% ದರ ಏರಿಕೆ ಮಾಡಿದ್ದು, ಫೆಬ್ರುವರಿ 9ರಿಂದ ನೂತನ ದರ ಜಾರಿಯಾಗಲಿದೆ ಎಂದು ತಿಳಿಸಿದೆ. ಇದು ಮೆಟ್ರೋದಲ್ಲಿ ಸಂಚರಿಸುವವರಿಗೆ ಮತ್ತಷ್ಟು ಹೊರೆಯಾಗಲಿದೆ. ಸಾರ್ವಜನಿಕರ ಪ್ರಯಾಣ ತ್ರಾಸದಾಯಕವಾಗಿದೆ. ಅಲ್ಲದೇ, ಮನಸೋ ಇಚ್ಛೆ ದರ ಏರಿಕೆ ಮಾಡಿ ಪ್ರಯಾಣಿಕರ ಜೊತೆ ನಮ್ಮ ಮೆಟ್ರೋ ಚೆಲ್ಲಾಟವಾಡುತ್ತಿದೆ.

ದರ ವಿಚಾರದಲ್ಲೂ ರಾಜ್ಯ-ಕೇಂದ್ರದ ಸಂಘರ್ಷ
ಮೆಟ್ರೋ ಟಿಕೆಟ್ ದರ ಏರಿಕೆ ವಿಚಾರದಲ್ಲಿಯೂ ಪೊಲಿಟಿಕಲ್ ಫೈಟ್ (Political Fight) ಮುಂದುವರೆದಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಡುವೆ ಸಂಘರ್ಷ ಜೋರಾಗಿದೆ. ಮೆಟ್ರೋ ಪ್ರಯಾಣದರ ಹೆಚ್ಚಳದಲ್ಲಿ ರಾಜ್ಯ-ಕೇಂದ್ರ ಸರ್ಕಾರಗಳ ನಡುವೆ ಮುಸುಕಿನ ಗುದ್ದಾಟ ಶುರುವಾಗಿದೆ. ಮೆಟ್ರೋ ಪ್ರಯಾಣ ದರ ಏರಿಕೆ ಮಾಡಿದ್ದು ರಾಜ್ಯ ಸರ್ಕಾರ ಎಂದು ಹೇಳುವ ಮೂಲಕ ಬೆಂಗಳೂರಿನ ಮೂವರು ಸಂಸದರಾದ ತೇಜಸ್ವಿ ಸೂರ್ಯ, ಶೋಭಾ ಕರಂದ್ಲಾಜೆ, ಪಿ.ಸಿ ಮೋಹನ್ ಕೈ ತೊಳೆದುಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ಆರೋಪ-ಪ್ರತ್ಯಾರೋಪಗಳ ನಡುವೆ ಸಿಲಿಕಾನ್ ಸಿಟಿ ಜನರಂತೂ ಸಿಕ್ಕಾಪಟ್ಟೆ ಹೈರಾಣಾಗಿದ್ದಾರೆ.

Namma Metro Greenline

`ಕೇಂದ್ರ ಮಾಡಿಲ್ಲ, ಮೆಟ್ರೋ ದರ ಏರಿಕೆಗೆ ರಾಜ್ಯ ರ್ಕಾರ ಕಾರಣ
ಇನ್ನು, ಮೆಟ್ರೋ ದರ ಪರಿಷ್ಕರಣೆ ವಿಚಾರವಾಗಿ ಸಂಸದ ಪಿ.ಸಿ ಮೋಹನ್ ಪಬ್ಲಿಕ್ ಟಿವಿಗೆ ರಿಯಾಕ್ಟ್ ಮಾಡಿದ್ದಾರೆ. ದರ ಏರಿಕೆ ಕೇಂದ್ರ ಸರಕಾರ ಮಾಡಿಲ್ಲ. ರಾಜ್ಯ ಸರ್ಕಾರವೇ ದರ ಏರಿಕೆ ಮಾಡಿರೋದು. ಈ ಸರ್ಕಾರ ದಿವಾಳಿ ಆಗಿದೆ. ಅದರ ಹೊರೆ ರಾಜ್ಯದ ಜನರ ಮೇಲೆ ಹಾಕ್ತಾ ಇದ್ದಾರೆ. ಕೇಂದ್ರ ಸರ್ಕಾರ ಮೆಟ್ರೋ ಯೋಜನೆಗೆ ಫಂಡಿಂಗ್ ಮಾತ್ರ ಮಾಡೋದು. ದರ ಏರಿಕೆ ಬೋರ್ಡ್‌ನಲ್ಲಿ ರಾಜ್ಯ ಸರ್ಕಾರದ ಪರವೇ ಓಟಿಂಗ್ ಪವರ್ ಜಾಸ್ತಿ ಇದೆ. ನಾವು 3 ಸಂಸದರೇ ಮೆಟ್ರೋ ಯೋಜನೆಗೆ ಅತಿ ಹೆಚ್ಚು ಅನುದಾನ ತಂದಿರುವುದು ಅಂತೇಳಿದ್ರು. ಅಲ್ಲದೇ, ದರ ಏರಿಕೆ ವಿಚಾರವಾಗಿ ಬಿಎಂಆರ್‌ಸಿಎಲ್ ಎಂಡಿ ಚರ್ಚೆಗೆ ಬರಲಿ, ಅದಕ್ಕೆ ನಾನು ಸಿದ್ಧನಿದ್ದೇನೆ ಎಂದು ಸವಾಲು ಹಾಕಿದ್ರು.

ಗ್ಯಾರಂಟಿಗಳ ಮಧ್ಯೆ ಸಿಲುಕಿ ದರ ಏರಿಕೆ; ಜನ ಸಿಡಿಮಿಡಿ
ಇತ್ತ ಪ್ರಯಾಣಿಕರು ಕೂಡ ರಾಜ್ಯ ಸರ್ಕಾರ ಹಾಗೂ ಬಿಎಂಆರ್‌ಸಿಎಲ್ ವಿರುದ್ಧ ನಿಗಿನಿಗಿ ಕೆಂಡವಾಗಿದ್ದಾರೆ. ಬೆಂಗಳೂರಿನಲ್ಲಿ ಮೂವರು ಸಂಸದರು ಇದ್ದರೂ ಯಾವ್ದೇ ಪ್ರಯೋಜನೆ ಇಲ್ಲ. ಇತ್ತ ರಾಜ್ಯ ಸರ್ಕಾರ ಗ್ಯಾರಂಟಿಗಳನ್ನ ನೀಡಿ, ಆರ್ಥಿಕ ಸಂಕಷ್ಟದಲ್ಲಿದೆ. ಅದರ ಹೊರೆ ತಗ್ಗಿಸಲು ಪ್ರಯಾಣಿಕರ ಮೇಲೆ ಹಾಕುತ್ತಿದೆ. ಪ್ರಯಾಣಿಕರನ್ನ ದಿನೇ-ದಿನೇ ಇಕ್ಕಟ್ಟಿಗೆ ಸಿಲುಕಿಸುತ್ತಿದೆ. ವೇತನ ಮಾತ್ರ ಹಂಗೇ ಇದೆ, ಇಲ್ಲಿ ನೋಡಿದ್ರೆ ಸರ್ಕಾರ ತಮಗೆ ಇಷ್ಟ ಬಂದಂತೆ ದರ ಏರಿಕೆ ಮಾಡ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

NAMMA METRO 2

ನಿರ್ದೇಶಕರ ಮಂಡಳಿಯವರು ವಿರೋಧಿಸಲಿಲ್ವಾ?
ಟಿಕೆಟ್ ದರ ಏರಿಕೆಯಲ್ಲಿ ರಾಜ್ಯದ ಪಾತ್ರ ಇಲ್ಲ ಅಂತ ಸಿಎಂ ಸಿದ್ದರಾಮಯ್ಯ ಹೇಳ್ತಿದ್ದಾರೆ. ಆದರೆ ಟಿಕೆಟ್ ದರ ಏರಿಕೆಗೆ ವಿರೋಧ ಏಕೆ ಮಾಡಲಿಲ್ಲ? ಎಂಬ ಪ್ರಶ್ನೆ ಎದ್ದಿದೆ. ಅಲ್ಲದೇ, ನಿರ್ದೇಶಕರ ಮಂಡಳಿಯಲ್ಲಿ ಒಟ್ಟು 14 ಮಂದಿ ಸದಸ್ಯರಲ್ಲಿ ರಾಜ್ಯದವರೇ ಹೆಚ್ಚು ಇದ್ದಾರೆ. ಐದು ಮಂದಿ ಮಾತ್ರ ಕೇಂದ್ರ ಸರ್ಕಾರದ ಅಧಿಕಾರಿಗಳು ಇದ್ದಾರೆ. ಹೀಗಿರುವಾಗ ನಿರ್ದೇಶಕ ಮಂಡಳಿಯಲ್ಲಿರುವ ರಾಜ್ಯದ ಅಧಿಕಾರಿಗಳು ದರ ಏರಿಕೆ ಬಗ್ಗೆ ಏಕೆ ಒಪ್ಪಿದರು? ನಿರ್ದೇಶಕರ ಮಂಡಳಿ ದರ ಏರಿಕೆ ವರದಿ ಸರ್ಕಾರಕ್ಕೆ ಸಲ್ಲಿಸಿಲ್ಲವಾ? ಅಥವಾ ಸಲ್ಲಿಸಿದ್ರೂ ಕೇಂದ್ರ ಕಡೆ ಬೊಟ್ಟು ಮಾಡ್ತಿದ್ಯಾ ರಾಜ್ಯ ಸರ್ಕಾರ? ಎಂಬ ಪ್ರಶ್ನೆ ಎದ್ದಿದೆ. ಇನ್ನೊಂದ್ಕಡೆ ದರ ಏರಿಕೆಯಲ್ಲಿ ನಗರಾಭಿವೃದ್ಧಿ ಇಲಾಖೆ ಒಪ್ಪಿಗೆ ಪಡೆಯಲೇಬೇಕು, ಆಗಲಾದರೂ ರಾಜ್ಯ ಸರ್ಕಾರ ದರ ಏರಿಕೆಗೆ ವಿರೋಧ ಮಾಡಬಹುದಿತ್ತು. ಕೇಂದ್ರದತ್ತಲೇ ಬೊಟ್ಟು ಮಾಡ್ತಿರೋ ಸರ್ಕಾರ ಈಗ ಏನ್ ಹೇಳುತ್ತೇ ಎಂಬುದು ಜನರ ಪ್ರಶ್ನೆಯಾಗಿದೆ.

ದೇಶದಲ್ಲೇ ನಮ್ಮ ಮೆಟ್ರೋ ಬಲು ದುಬಾರಿ – ಎಲ್ಲೆಲ್ಲಿ ಎಷ್ಟಿದೆ?

ಬೆಂಗಳೂರು ಮೆಟ್ರೋ
ಗರಿಷ್ಠ- 90 ರೂ.
(45-50 ಕಿ.ಮೀ)

ದೆಹಲಿ ಮೆಟ್ರೋ
ಗರಿಷ್ಠ- 64 ರೂ.
(70 ಕಿ.ಮೀ)

ಚೆನ್ನೈ ಮೆಟ್ರೋ
ಗರಿಷ್ಠ- 64 ರೂ.
(54 ಕಿ.ಮೀ)

ಹೈದ್ರಾಬಾದ್ ಮೆಟ್ರೋ
ಗರಿಷ್ಠ- 60 ರೂ.
(71 ಕಿ.ಮೀ)

ಮುಂಬೈ ಮೆಟ್ರೋ
ಗರಿಷ್ಠ- 80 ರೂ.
(42 ಕಿ.ಮೀ).

TAGGED:bengalurubjpcongressDK ShivakumarMetro Ticket Price Hikenamma metroಕಾಂಗ್ರೆಸ್ಡಿಕೆ ಶಿವಕುಮಾರ್ನಮ್ಮ ಮೆಟ್ರೋಬಿಜೆಪಿಬೆಂಗಳೂರುಮೆಟ್ರೋ ಟಿಕೆಟ್‌ ದರ ಏರಿಕೆ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

supreme Court 1
Court

ಏಕರೂಪ ನಾಗರಿಕ ಸಂಹಿತೆ ಜಾರಿಗೆ ‘ಸುಪ್ರೀಂ’ ಅಸ್ತು

Public TV
By Public TV
6 hours ago
d.k.shivakumar dinner party
Bengaluru City

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ 6 ವರ್ಷ – ಕಾಂಗ್ರೆಸ್ ಶಾಸಕರಿಗೆ ಡಿನ್ನರ್ ಪಾರ್ಟಿ

Public TV
By Public TV
7 hours ago
Gas Emergency
Latest

ಎಲ್‌ಪಿಜಿ ಸಿಲಿಂಡರ್‌ಗಳ ಕೃತಕ ಅಭಾವ – ಬುಕ್ಕಿಂಗ್ ಅವಧಿಯನ್ನು 21ರಿಂದ 25 ದಿನಕ್ಕೆ ಹೆಚ್ಚಿಸಿದ ಕೇಂದ್ರ

Public TV
By Public TV
8 hours ago
OPD
Bengaluru City

ಮುಷ್ಕರದಿಂದ ಹಿಂದೆ ಸರಿದ ವೈದ್ಯರು – ನಾಳೆಯಿಂದ ಎಂದಿನಂತೆ ಓಪಿಡಿ ಓಪನ್

Public TV
By Public TV
8 hours ago
smriti irani lakshmi hebbalkar
Bengaluru City

ಸ್ಮೃತಿ ಇರಾನಿ ಕಾಣುತ್ತಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವ್ಯಂಗ್ಯ

Public TV
By Public TV
9 hours ago
Eshwar Khandre
Bengaluru City

1 ಮರ ಕಡಿದರೆ 10 ಸಸಿ ನೆಡಲು ವಿಧಿಸುವ ಶುಲ್ಕಕ್ಕೆ ವಿನಾಯಿತಿ ಇಲ್ಲ: ಈಶ್ವರ ಖಂಡ್ರೆ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?