ಮುಂಬೈ: 2024ರ ಟಿ20 ವಿಶ್ವಕಪ್ ಗೆಲುವಿನ ನೆನಪಿನಾರ್ಥವಾಗಿ ಬಿಸಿಸಿಐನಿಂದ ಪ್ರಧಾನಿ ನರೇಂದ್ರ ಮೋದಿ (PM Modi) ಅವರಿಗೆ ʻನಮೋ ನಂ.1ʼ ಎಂದು ಬರೆದ ಟೀಂ ಇಂಡಿಯಾ ಜೆರ್ಸಿಯನ್ನು (Indian Cricket Jersey) ಉಡುಗೊರೆಯಾಗಿ ನೀಡಲಾಯಿತು.
The triumphant Indian Cricket Team met with the Honourable Prime Minister of India, Shri Narendra Modiji, at his official residence today upon arrival.
Sir, we extend our heartfelt gratitude to you for your inspiring words and the invaluable support you have provided to… pic.twitter.com/9muKYmUVkU
— BCCI (@BCCI) July 4, 2024
Advertisement
ಟಿ20 ವಿಶ್ವಕಪ್ ಕ್ರಿಕೆಟ್ (T20 World Cup) ಚಾಂಪಿಯನ್ ಟೀಂ ಇಂಡಿಯಾ (Team India) ಗುರುವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಭಾರತಕ್ಕೆ ಆಗಮಿಸಿತು. ವೆಸ್ಟ್‌ಇಂಡೀಸ್‌ನ ಬಾರ್ಬಡೋಸ್‌ನಿಂದ ಹೊರಟಿದ್ದ ವಿಶೇಷ ವಿಮಾನ ದೆಹಲಿಯಲ್ಲಿರುವ (Delhi) ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಯಿತು. ಜೂ. 1ರಂದು ಬಾರ್ಬಡೋಸ್‌ಗೆ ಭೀಕರ ಚಂಡಮಾರುತ ಅಪ್ಪಳಿಸಿದ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ಭಾರತಕ್ಕೆ ಬರುವುದು ತಡವಾಯಿತು. ಬುಧವಾರ ರಾತ್ರಿ ಏರ್ ಇಂಡಿಯಾ ವಿಶೇಷ ವಿಮಾನದಿಂದ ಹೊರಟ ಟೀಂ ಇಂಡಿಯಾ ಗುರುವಾರ ಬೆಳಗ್ಗೆ 6:00 ಗಂಟೆ ಹೊತ್ತಿಗೆ ಭಾರತ ತಲುಪಿತು.
Advertisement
Advertisement
ತಾಯ್ನಾಡಿಗೆ ಮರಳಿದ ಟೀಂ ಇಂಡಿಯಾ ಆಟಗಾರರು ಮುಂಬೈಗೆ ತೆರಳುವ ಮುನ್ನ ದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ನಿವಾಸಕ್ಕೆ (Team India Arrival) ಭೇಟಿ ನೀಡಿದ್ದರು. ವಿಶ್ವಕಪ್ ಗೆಲುವಿನ ಕುರಿತು ಪ್ರಧಾನಿ ಜೊತೆ ತಮ್ಮ ಅನುಭವ ಹಂಚಿಕೊಂಡರು. ಮೋದಿ ಕೂಡ ಆಟಗಾರರೊಂದಿಗೆ ಕೆಲ ಕಾಲ ಕುಶಲೋಪರಿ ನಡೆಸಿದರು. ಜೊತೆಗೆ ವಿಶ್ವಕಪ್ ಟ್ರೋಫಿ ಹಿಡಿದು ಗ್ರೂಫ್ ಫೋಟೊ ತೆಗೆಸಿಕೊಂಡರು. ಆಟಗಾರರಿಗೆ ವಿಶೇಷ ಭೋಜನ ಕೂಟ ಸಹ ಏರ್ಪಡಿಸಲಾಗಿತ್ತು. ಈ ವೇಳೆ ಬಿಸಿಸಿಐ ಕಡೆಯಿಂದ ಮೋದಿಗೆ (PM Modi) ನಮೋ ನಂ.1 ಎಂದು ಬರೆದ ಟೀಂ ಇಂಡಿಯಾ ಜೆರ್ಸಿಯನ್ನು (Indian Cricket Jersey) ಉಡುಗೊರೆಯಾಗಿ ನೀಡಲಾಯಿತು.
Advertisement
ವಿಜಯಯಾತ್ರೆಗೆ ರೋಹಿತ್ ಆಹ್ವಾನ:
ಮುಂಬೈನವರೇ ಆಗಿರುವ ನಾಯಕ ರೋಹಿತ್ ಶರ್ಮಾ ತಮ್ಮ ತವರಿನ ಅಭಿಮಾನಿಗಳಿಗೆ ಈ ಬೃಹತ್ ಮೆರವಣಿಯಲ್ಲಿ ಪಾಲ್ಗೊಳ್ಳುವಂತೆ ವಿಶೇಷವಾಗಿ ಮನವಿ ಮಾಡಿದ್ದರು. ಭಾರತಕ್ಕೆ ಬರುವ ಮುನ್ನವೇ ರೋಹಿತ್ ‘ಇಂತಹ ವಿಶೇಷ ಸಂಭ್ರಮವನ್ನು ನಿಮ್ಮೊಂದಿಗೆ ಆಚರಿಸುವ ಬಯಕೆಯಿದೆ. ಮರೈನ್ ಡ್ರೈವ್ ಹಾಗೂ ವಾಂಖೇಡೆ ಕ್ರೀಡಾಂಗಣದಲ್ಲಿ ನಮ್ಮೊಂದಿಗೆ ನೀವೂ ಜತೆಯಾಗಿ’ ಎಂದು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಈಗಾಗಲೇ ಅಭಿಮಾನಿಗಳು ಟೀಂ ಇಂಡಿಯಾ ಜೆರ್ಸಿ ತೊಟ್ಟು ಸ್ಟೇಡಿಯಂಗೆ ಆಗಮಿಸಿದ್ದಾರೆ.