ಟಾಲಿವುಡ್ (Tollywood) ನಟ ನಂದಮೂರಿ ತಾರಕ ರತ್ನ (Nandamuri Tarak Ratna) ಅವರು ಪಾದಯಾತ್ರೆ ವೇಳೆ ಕುಸಿದು ಬಿದ್ದು ತೀವ್ರ ಅಸ್ವಸ್ಥರಾಗಿದ್ದಾರೆ. ತಕ್ಷಣ ಅವರನ್ನು ಅಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಹಿನ್ನೆಲೆ ನಟನನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.
Advertisement
ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಕುಪ್ಪಂನಲ್ಲಿ ಟಿಡಿಪಿ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್ (Nara Lokesh) ಅವರ ಪಾದಯಾತ್ರೆಯಲ್ಲಿ ನಂದಮೂರಿ ತಾರಕ ರತ್ನ ಅವರು ಭಾಗವಹಿಸಿದ್ದರು. ಈ ವೇಳೆ ಈ ಘಟನೆ ಸಂಭವಿಸಿದೆ. ಸದ್ಯ ಕುಪ್ಪಂನ ಖಾಸಗಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕರೆತರುವ ಸಾದ್ಯತೆ ಇದೆ. ಇದನ್ನೂ ಓದಿ: ಮುನಿಸು ಮರೆತು ಮತ್ತೆ ಒಂದಾದ್ರಾ ಮೋಹಕತಾರೆ ರಮ್ಯಾ- ಜಗ್ಗೇಶ್?
Advertisement
Advertisement
ನಾರಾ ಲೋಕೇಶ್ ತಮ್ಮ 4000 ಕಿಮೀ ಪಾದಯಾತ್ರೆಯನ್ನು ಪ್ರಾರಂಭಿಸುತ್ತಿದ್ದಂತೆ ಮಸೀದಿಯ ಹೊರಗೆ ಕಾಲ್ತುಳಿತ ಸಂಭವಿಸಿತು. ಆಗ ಪರಿಸ್ಥಿತಿ ಗಂಭೀರವಾಗಿದ್ದು ನಂದಮೂರಿ ತಾರಕ ರತ್ನ ಪ್ರಜ್ಞೆ ತಪ್ಪಿ ಕುಸಿದು ಬಿದ್ದರು. ನಾರಾ ಲೋಕೇಶ್ ಹೊರಬರುತ್ತಿದ್ದಂತೆ ಸಾವಿರಾರು ಸಂಖ್ಯೆಯ ತೆಲುಗು ದೇಶಂ ಪಕ್ಷದ ಕಾರ್ಯಕರ್ತರು ಒಮ್ಮೆಗೆ ನುಗ್ಗಿದರು. ನೂಕುನುಗ್ಗಲಿನಲ್ಲಿ ನಟ ಮೂರ್ಛೆ ತಪ್ಪಿ ಕೆಳಗೆ ಬಿದ್ದರು. ತಕ್ಷಣ ಅವರನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಿದರು.
Advertisement
ಇನ್ನೂ ತಾರಕ ರತ್ನ ಅವರ ಆರೋಗ್ಯ ವಿಚಾರಿಸಲು ಚಿಕ್ಕಪ್ಪ ನಂದಮೂರಿ ಬಾಲಕೃಷ್ಣ ಈಗಾಗಲೇ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k