– ಔಷಧಿ ಕೊರತೆ ಕಾರಣ ಅಲ್ಲಗೆಳೆದ ಡೀನ್
ಮುಂಬೈ: ಮಹಾರಾಷ್ಟ್ರದಲ್ಲಿರುವ ನಾಂದೆಡ್ ಸರ್ಕಾರಿ ಆಸ್ಪತ್ರೆಯಲ್ಲಿ (Maharastra Govt Hospital) ಕಳೆದ 8 ದಿನಗಳಲ್ಲಿ 108 ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಈ ಘಟನೆ ಇದೀಗ ಭಾರೀ ಸಂಚಲನ ಮೂಡಿಸಿದೆ.
ವರದಿಗಳ ಪ್ರಕಾರ, 24 ಗಂಟೆಯಲ್ಲಿ ನವಜಾತ ಶಿಶು (Infant babies) ಸೇರಿ 11 ಮಂದಿ ರೋಗಿಗಳು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಈ ಸಂಬಂಧ ಆಸ್ಪತ್ರೆಯ ಡೀನ್ ಡಾ. ಶಂಕರ್ ರಾವ್ ಚವಾಣ್ ಮಾತನಾಡಿ, ಆಸ್ಪತ್ರೆಯಲ್ಲಿ ಔಷಧಿ ಕೊರತೆ ಇಲ್ಲ ಎಂದು ಹೇಳಿದ್ದಾರೆ. ಆದರೆ ರೋಗಿಗಳು ಮಾತ್ರ ಸಾವನ್ನಪ್ಪುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ.
Advertisement
Advertisement
ಕಳೆದ 24 ಗಂಟೆಯಲ್ಲಿ 1,100ಕ್ಕೂ ಹೆಚ್ಚು ಮಂದಿಯನ್ನು ವೈದ್ಯರು ಪರೀಕ್ಷೆಗೆ ಒಳಪಡಿಸಿದ್ದಾರೆ. ಇದರಲ್ಲಿ 191 ಮಂದಿ ರೋಗಿಗಳನ್ನು ಆಸ್ಪತ್ರೆಗೆ ದಾಖಲು ಮಾಡಿಕೊಳ್ಳಲಾಗಿದೆ ಎಂದು ಡೀನ್ ತಿಳಿಸಿದ್ದಾರೆ. ಇದನ್ನೂ ಓದಿ: ಹೈಪರ್ ಟೆನ್ಷನ್, ಮೂಡ್ ಸ್ವಿಂಗ್ ಖಾಯಿಲೆಯಿಂದ ಬಳಲುತ್ತಿರೋ ಪತ್ನಿಯಿಂದ ಪತಿಗೆ ಕಿರುಕುಳ
Advertisement
24 ಗಂಟೆಗಳಲ್ಲಿ ಸರಾಸರಿ ಸಾವಿನ ಪ್ರಮಾಣ 13 ಆಗಿತ್ತು. ಈ ಹಿಂದೆ ಔಷಧಿ ಕೊರತೆಯೇ ರೋಗಿಗಳ ಸಾವಿಗೆ ಕಾರಣ ಎಂದು ವೈದ್ಯರು ಹೇಳುತ್ತಿದ್ದರು. ಆದರೆ ಇದೀಗ ಡೀನ್ ಈ ಆರೋಪವನ್ನು ತಳ್ಳಿ ಹಾಕಿದ್ದಾರೆ.
Advertisement
ಯಾವುದೇ ರೋಗಿಯೂ ಔಷಧಿ ಕೊರತೆಯಿಂದ ಸಾವನ್ನಪಿಲ್ಲ. ಬದಲಿಗೆ ಅವರ ಸ್ಥಿತಿ ಹದಗೆಟ್ಟಿದ್ದರಿಂದ ಮೃತಪಟ್ಟಿದ್ದಾರೆ ಎಂದು ಡೀನ್ ಸ್ಪಷ್ಟನೆ ನೀಡಿದ್ದಾರೆ. ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ 60ಕ್ಕೂ ಹೆಚ್ಚು ಶಿಶುಗಳು ದಾಖಲಾಗಿದೆ. ಈ ಶಿಶುಗಳನ್ನು ನೋಡಿಕೊಳ್ಳಲು ಕೇವಲ ಮೂವರು ದಾದಿಯರು ಮಾತ್ರ ಇದ್ದಾರೆ ಎಂದು ಸಿಎಂ ಅಶೋಕ್ ಚೌಹಾಣ್ ತಿಳಿಸಿದರು.
Web Stories