ಚಿಕ್ಕಬಳ್ಳಾಪುರ: ಪ್ರೇಮಿಗಳ ದಿನದಂದು (Valentine’s Day) ವಿಶ್ವವಿಖ್ಯಾತ ನಂದಿ ಗಿರಿಧಾಮ (Nandi Hills) ಬಂದ್ ಮಾಡಲಾಗಿದೆ.
ಇದೇ ಫೆ.14 ರಂದು ಪ್ರೇಮಿಗಳ ಪಾಲಿನ ಪ್ರೇಮಧಾಮ ಬಂದ್ ಆಗಲಿದೆ. ಬೆಳಗ್ಗೆ 6ರಿಂದ ಸಂಜೆ 6 ಗಂಟೆಯವರೆಗೂ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ. ಇದನ್ನೂ ಓದಿ: ದಾವಣಗೆರೆ | ಸನ್ಯಾಸತ್ವ ಸ್ವೀಕರಿಸಿದ ಇಂಜಿನಿಯರಿಂಗ್ ವಿದ್ಯಾರ್ಥಿನಿ
ನಿರ್ಬಂಧ ವಿಧಿಸಿರುವ ಕ್ರಮ ಪ್ರೇಮಿಗಳಿಗೆ ಶಾಕ್ ನೀಡಿದೆ. ಪ್ರೇಮಿಗಳ ದಿನ ಅತಿ ಹೆಚ್ಚಿನ ಪ್ರವಾಸಿಗರು ಗಿರಿಧಾಮಕ್ಕೆ ಭೇಟಿ ನೀಡಲಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ನಿರ್ಬಂಧ ಹೇರಲಾಗುವುದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಜಿ ಪ್ರಭು ಆದೇಶದಲ್ಲಿ ತಿಳಿಸಿದ್ದಾರೆ.

