ಚಿಕ್ಕಬಳ್ಳಾಪುರ: ವೀಕೆಂಡ್ ಎಂದರೆ ಸಾಕು ಬೆಂಗಳೂರಿಗರು (Bengaluru) ನಂದಿಬೆಟ್ಟದತ್ತ (Nandi Hills) ಮುಖ ಮಾಡ್ತಾರೆ. ಆದ್ರೆ ಈ ಭಾನುವಾರ ನಂದಿಬೆಟ್ಟಕ್ಕೆ ಹೋಗಬೇಕು ಎಂದು ಪ್ಲ್ಯಾನ್ ಮಾಡಿರೋರಿಗೆ ಜಿಲ್ಲಾಡಳಿತ ಶಾಕ್ ನೀಡಿದೆ. ಆ.9 ರಂದು ನಂದಿಹಿಲ್ಸ್ ಮಾನ್ಸೂನ್ ಮ್ಯಾರಥಾನ್ (Nandi Hills Monsoon Marathon) ಕಾರ್ಯಕ್ರಮ ನಡೆಯಲಿದ್ದು, ಕಾರಹಳ್ಳಿ ಕ್ರಾಸ್‌ನಿಂದ ನಂದಿಬೆಟ್ಟದವರೆಗೂ ರಸ್ತೆಯಲ್ಲಿ ವಾಹನಗಳ ಸಂಚಾರ ಬಂದ್ ಮಾಡಿ ಚಿಕ್ಕಬಳ್ಳಾಪುರ ಡಿಸಿ ಜಿ ಪ್ರಭು ಆದೇಶ ಹೊರಡಿಸಿದ್ದಾರೆ.
ಆ.8 ರ ರಾತ್ರಿ 11 ರಿಂದ ಆಗಸ್ಟ್ 9 ರ ಮಧ್ಯಾಹ್ನ 12 ಗಂಟೆಯವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ. ನಂದಿಬೆಟ್ಟದಲ್ಲಿ ನಡೆಯಲಿರುವ ಮಾನ್ಸೂನ್ ಮ್ಯಾರಥಾನ್ ಹಿನ್ನೆಲೆಯಲ್ಲಿ, ನಂದಿಬೆಟ್ಟಕ್ಕೆ ವಾಹನಗಳ ಸಂಚಾರವನ್ನೇ ಬಂದ್ ಮಾಡಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಇದನ್ನೂ ಓದಿ: ವರ್ಕ್ ಫ್ರಂ ಹೋಮ್ ಹೆಸರಲ್ಲಿ ಜನರಿಗೆ ಕೋಟಿ ಕೋಟಿ ವಂಚನೆ – ದಂಪತಿ ಅರೆಸ್ಟ್
ನಂದಿಹಿಲ್ಸ್ ಮಾನ್ಸೂನ್ ಮ್ಯಾರಥಾನ್‌ನಲ್ಲಿ 10 ಕಿಲೋಮೀಟರ್ ಹಾಗೂ 21 ಕಿಲೋಮೀಟರ್ ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿದೆ. ಸುಮಾರು 4,500ಕ್ಕೂ ಹೆಚ್ಚು ಕ್ರೀಡಾಪಟುಗಳು ಮ್ಯಾರಥಾನ್‌ನಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಮ್ಯಾರಥಾನ್ ಯಶಸ್ವಿಯಾಗಿ ನಡೆಸಲು ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ. ನಂದಿಹಿಲ್ಸ್ ಮಾನ್ಸೂನ್ ಮ್ಯಾರಥಾನ್‌ಗೆ ಡಿಸಿಎಂ ಜಿ. ಪರಮೇಶ್ವರ್ ಚಾಲನೆ ನೀಡಲಿದ್ದಾರೆ.
ಮ್ಯಾರಥಾನ್‌ನಲ್ಲಿ ಭಾಗವಹಿಸುವ ವಾಹನಗಳಿಗೆ ಪಾಸ್ ನೀಡಲಾಗಿದ್ದು ಆ ವಾಹನಗಳಿಗೆ ಮಾತ್ರ ಅವಕಾಶ ಇರಲಿದೆ. ಇನ್ನೂ ಮ್ಯಾರಥಾನ್ ಹಿನ್ನೆಲೆಯಲ್ಲಿ, ಪ್ರವಾಸಿಗರು ಜಿಲ್ಲಾಡಳಿತದ ಸೂಚನೆ ಪಾಲಿಸುವುದು ಅನಿವಾರ್ಯವಾಗಿದೆ. ಇದನ್ನೂ ಓದಿ: ಸಚಿವ ಕೆ.ಜೆ ಜಾರ್ಜ್ ಬೆಂಗಾಲು ವಾಹನ ಅಪಘಾತ – ತಪ್ಪಿದ ಅನಾಹುತ



