ಚಿಕ್ಕಬಳ್ಳಾಪುರ: ಶನಿವಾರ, ಭಾನುವಾರ ಬಿಟ್ಟು ಉಳಿದ ದಿನಗಳಲ್ಲಿ ಪ್ರವಾಸಿಗರಿಗೆ ನಂದಿಬೆಟ್ಟಕ್ಕೆ ತೆರಳಲು ಜಿಲ್ಲಾಡಳಿತ ಅನುಮತಿ ನೀಡಿದೆ.
ಆಗಸ್ಟ್ 24 ರಂದು ರಾತ್ರಿ ಭಾರೀ ಮಳೆಯಾದ ಕಾರಣ ನಂದಿಬೆಟ್ಟದ ಪಕ್ಕದ ಬ್ರಹ್ಮಗಿರಿ ಬೆಟ್ಟದಿಂದ ಭೂಕುಸಿತವಾಗಿತ್ತು. ಪರಿಣಾಮ ನಂದಿಬೆಟ್ಟದ ರಸ್ತೆ ಕೊಚ್ಚಿ ಹೋಗಿತ್ತು. ಇದರಿಂದ ವಾಹನಗಳ ಸಂಚಾರ ಸಂಪೂರ್ಣ ಕಡಿತಗೊಂಡಿತ್ತು. ಈಗ 80 ಲಕ್ಷ ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆ ಕೊಚ್ಚಿ ಹೋದ ರಸ್ತೆ ದುರಸ್ಥಿ ಕಾರ್ಯ ಪೂರ್ಣಗೊಳಿಸಿದೆ. ಹೀಗಾಗಿ ನಂದಿಬೆಟ್ಟಕ್ಕೆ ನಾಳೆಯಿಂದ ಪ್ರವಾಸಿಗರ ವಾಹನಗಳ ಪ್ರವೇಶಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಅವಕಾಶ ನೀಡುತ್ತಿದೆ.
ವಿಕೇಂಡ್‍ನಲ್ಲಿ ನಿರ್ಬಂಧ:
ನಾಳೆಯಿಂದ ವೀಕ್ ಡೇಸ್ ನಲ್ಲಿ ಮಾತ್ರ ಪ್ರವಾಸಿಗರ ಪ್ರವೇಶಕ್ಕೆ ಅನುಮತಿ ಇದೆ. ಕೊರೊನಾ ಹಾಗೂ ಓಮಿಕ್ರಾನ್ ವೈರಸ್ ಆತಂಕದ ಹಿನ್ನೆಲೆಯಲ್ಲಿ ವೀಕೆಂಡ್‍ನಲ್ಲಿ ನಿರ್ಬಂಧ ವಿಧಿಸಲಾಗಿದೆ. 100 ದಿನಗಳ ನಂತರ ಪ್ರವಾಸಿಗರಿಗೆ ಅನುಮತಿ ಕಲ್ಪಿಸುತ್ತಿರುವ ಕಾರಣ ಒಮ್ಮೆಲೆ ಜಾಸ್ತಿ ಪ್ರವಾಸಿಗರ ಆಗಮಿಸುವ ಸಾಧ್ಯತೆ ಇದೆ. ಅದರಲ್ಲೂ ವಿಕೇಂಡ್ ನಲ್ಲಿ ಸಹಜವಾಗಿ ಹೆಚ್ಚಾಗಿ ಪ್ರವಾಸಿಗರು ಬರೋದ್ರಿಂದ ನಂದಿಬೆಟ್ಟದ ಮೇಲ್ಭಾಗದಲ್ಲಿ ವಾಹನಗಳ ನಿಲುಗಡೆಗೆ ಪಾರ್ಕಿಂಗ್ ಸ್ಥಳಾವಕಾಕಾಶದ ಕೊರತೆ ಇದೆ. ಹೀಗಾಗಿ ವಿಕೇಂಡ್ ಪ್ರವಾಸಿಗರ ಪ್ರವೇಶ ನಿರ್ಬಂಧಿಸಲಾಗಿದೆ ಅಂತ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್ ಲತಾ ಪಬ್ಲಿಕ್ ಟಿವಿ ಗೆ ತಿಳಿಸಿದ್ದಾರೆ. ಇದನ್ನೂ ಓದಿ: ಮಗು ಮಾರಾಟ ಮಾಡಿದ ಕೆಲವೇ ನಿಮಿಷದಲ್ಲಿ ಹಣ ಕಳೆದುಕೊಂಡ ತಾಯಿ!
ಎರಡು-ಮೂರು ವಾರಗಳ ಕಾಲ ಪ್ರವಾಸಿಗರ ಆಗಮನದ ಸಂಖ್ಯೆಗೆ ಅನುಗುಣವಾಗಿ ವೀಕೆಂಡ್ ನಲ್ಲಿ ಅವಕಾಶ ಕಲ್ಪಿಸಲು ಮುಂದಿನ ದಿನಗಳಲ್ಲಿ ತೀರ್ಮಾನ ಕೈಗೊಳ್ಳುವುದಾಗಿ ಸ್ಪಷ್ಟಪಡಿಸಿದರು. ಇದನ್ನೂ ಓದಿ: ಕೇಂದ್ರ ತೆಗೆದುಕೊಳ್ಳೋ ತೀರ್ಮಾನದ ಮೇಲೆ ಬೂಸ್ಟರ್ ಡೋಸ್ ನೀಡೋ ಬಗ್ಗೆ ತೀರ್ಮಾನ: ಸುಧಾಕರ್