ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ನಂದಿಬೆಟ್ಟ (Nandihills) ಹಾಗೂ ಸ್ಕಂದಗಿರಿ ಬೆಟ್ಟಗಳನ್ನು ಭಾನುವಾರ ಹಾಗೂ ಸೋಮವಾರ ಎರಡು ದಿನಗಳ ಕಾಲ ಸಂಪೂರ್ಣವಾಗಿ ಬಂದ್ ಮಾಡಲಾಗುತ್ತಿದ್ದು, ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗುತ್ತಿದೆ.
ಜುಲೈ 2 ರ ಬೆಳಗ್ಗೆ 6 ಗಂಟೆಯಿಂದ ಜುಲೈ 3 ಸಂಜೆ 6 ಗಂಟೆವರೆಗೂ ಬಂದ್ ಮಾಡಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಆದೇಶ ಮಾಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ, ಅದರ ಬುದ್ಧಿ ಎರಡೂ ಹ್ಯಾಕ್: ಪ್ರಲ್ಹಾದ್ ಜೋಶಿ
ಜುಲೈ 3 ಸೋಮವಾರದಂದು ರಾಷ್ಟ್ರಪತಿ ದ್ರೌಪತಿ ಮುರ್ಮು (Droupadi Murmu) ಅವರು ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಗ್ರಾಮದ ಬಳಿ ಇರುವ ಶ್ರೀ ಸತ್ಯಸಾಯಿ ಲೋಕಸೇವಾ ಆಶ್ರಮಕ್ಕೆ ಆಗಮಿಸಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಹೀಗಾಗಿ ಭದ್ರತೆಯ ಹಿತದೃಷ್ಟಿಯಿಂದ ನಂದಿಗಿರಿಧಾಮ ಹಾಗೂ ಸ್ಕಂದಗಿರಿ ಬೆಟ್ಟಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧ ಮಾಡಿರುವುದಾಗಿ ಚಿಕ್ಕಬಳ್ಳಾಫುರ ಎಸ್ಪಿ ಡಿ.ಎಲ್.ನಾಗೇಶ್ ಹಾಗೂ ಡಿ ಸಿ ರವಿಂದ್ರ ತಿಳಿಸಿದ್ದಾರೆ.
ವೀಕೆಂಡ್ ಅಂತ ಪ್ರವಾಸಿಗರು ನಂದಿಬೆಟ್ಟದತ್ತ ಬರಬಾರದು. ಮಂಗಳವಾರದಿಂದ ಎಂದಿನಂತೆ ಪ್ರವಾಸಿಗರು ಆಗಮಿಸಬಹುದು ಅಂತ ತಿಳಿಸಿದ್ದಾರೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]