ಚಿಕ್ಕಬಳ್ಳಾಪುರ: ನಗರದ (Chikkaballapura) ಪಶುವೈದ್ಯ ಇಲಾಖೆ ಕಚೇರಿ ಸಮೀಪ ಇರುವ ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ (Nandhini Milk Parlour) ಅಗ್ನಿ ಅವಘಡ (Fire Accident) ಸಂಭವಿಸಿದೆ. ಈ ಆಘಾತದಿಂದ ಮಾಲೀಕ ಅಂಗಡಿ ಮುಂದೆಯೇ ಹೃದಯಾಘಾತದಿಂದ (Heart Attack) ಸಾವನ್ನಪ್ಪಿದ್ದಾರೆ.
ಕಣಜೇನಹಳ್ಳಿ ಗ್ರಾಮದ ವೆಂಕಟೇಶ್ (55) ಮೃತ ದುರ್ದೈವಿ. ಸೋಮವಾರ ರಾತ್ರಿ ಸುಮಾರು 11 ಗಂಟೆ ಸುಮಾರಿಗೆ ಮಿಲ್ಕ್ ಪಾರ್ಲರ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಮಾಹಿತಿ ವೆಂಕಟೇಶ್ ಅವರಿಗೆ ತಲುಪಿತ್ತು. ತಕ್ಷಣ ಸ್ಥಳಕ್ಕೆ ಧಾವಿಸಿದ ಅವರು ಸ್ಥಳೀಯರ ಸಹಾಯದಿಂದ ಬೆಂಕಿಯನ್ನು ನಿಯಂತ್ರಣಕ್ಕೆ ತಂದು ನಂದಿಸಿದ್ದಾರೆ. ಇದನ್ನೂ ಓದಿ: ಉದ್ಯೋಗ ಭವನದ ಬಳಿಯ ಕಾರ್ಮಿಕ ಶಿಬಿರದಲ್ಲಿ ಭೀಕರ ಅಗ್ನಿ ಅವಘಡ – 200ಕ್ಕೂ ಹೆಚ್ಚು ಟಿನ್ ಶೆಡ್‌ಗಳು ಭಸ್ಮ
ಈ ಘಟನೆಯಿಂದ ತೀವ್ರ ಆಘಾತಕ್ಕೊಳಗಾದ ವೆಂಕಟೇಶ್, ಬೆಂಕಿ ನಂದಿಸಿದ ಕೆಲವೇ ಕ್ಷಣಗಳಲ್ಲಿ ಅಂಗಡಿ ಮುಂಭಾಗದಲ್ಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಸ್ಥಳೀಯರು ಯತ್ನಿಸಿದ್ದರು. ಆದರೆ ಹೃದಯಾಘಾತದಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ವೆಂಕಟೇಶ್ ಅವರು ಹಲವು ವರ್ಷಗಳಿಂದ ಇದೇ ನಂದಿನಿ ಮಿಲ್ಕ್ ಪಾರ್ಲರ್ ನಡೆಸಿಕೊಂಡು ಜೀವನ ಸಾಗಿಸುತ್ತಿದ್ದರು. ಅವರ ಹಠಾತ್ ಸಾವಿನಿಂದ ಕುಟುಂಬಸ್ಥರು ಹಾಗೂ ಸ್ಥಳೀಯರು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ಏನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ. ಇದನ್ನೂ ಓದಿ: ಪಾಗಲ್ ಪ್ರೇಮಿ ನಾಗೇಂದ್ರನಿಗೆ ನಾಡಬಾಂಬ್ ತಯಾರಿಸಿಕೊಟ್ಟ ಶಂಕೆ – ಮೂವರು ವಶಕ್ಕೆ
